ಕಾಂಗ್ರೆಸ್ನಲ್ಲಿ ತಲ್ಲಣ ಸೃಷ್ಟಿಸಿದ ಶಮನೂರು ಶಿವಶಂಕರಪ್ಪ ಹೇಳಿಕೆ, ಕ್ರಮಕ್ಕೆ ಒತ್ತಾಯ
ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ರಾಜ್ಯ ಕಾಂಗ್ರೆಸ್ನಲ್ಲಿ ತಲ್ಲಣ ಸೃಷ್ಟಿಸಿದೆ. ಅಲ್ಲದೇ ಶಮನೂರು ಶಿವಶಂಕರಪ್ಪ ವಿರುದ್ಧ ಸೂಕ್ತ ಕ್ರಮಕ್ಕೆ ಕೆಲ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ಮೈಸೂರು, (ಜನವರಿ 28): ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೇಳಿಕೆ ಪಕ್ಷದ ಕೆಲ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಶಮನೂರು ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕಾಂಗ್ರೆಸ್ ಕೆಲ ಹಿರಿಯ ನಾಯಕರು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್, ಹಣವಿದೆ ಎಲ್ಲರನ್ನೂ ಕೊಂಡುಕೊಳ್ಳಬಹುದು ಅಂದುಕೊಂಡಿದ್ದಾರೆ. ನಮ್ಮವರೇ ಸರಿ ಇಲ್ಲ, ಸಿಎಂ, ಮಂತ್ರಿಗಳು ಅವರ ಮೇಲೆ ಡಿಪೆಂಡ್ ಆಗಿದ್ದಾರೆ. ಅಲ್ಲಿಗೆ(ದಾವಣಗೆರೆ) ಹೋದಾಗ ಶಾಮನೂರು ಗೆಸ್ಟ್ಹೌಸ್ನಲ್ಲೇ ಮಲಗುತ್ತಾರೆ. ಕಾಂಗ್ರೆಸ್ ಜೀವಂತವಾಗಿದ್ದರೆ ಶಾಮನೂರುರನ್ನು ಅಮಾನತು ಮಾಡಿ ಎಂದು ಆಗ್ರಹಿಸಿದರು.
ಶಾಮನೂರು ಶಿವಶಂಕರಪ್ಪ ಇಲ್ಲದಿದ್ದರೆ ಕಾಂಗ್ರೆಸ್ ನಡೆಯಲ್ವಾ? ಶಾಮನೂರು ಶಿವಶಂಕರಪ್ಪರನ್ನು ಕಾಂಗ್ರೆಸ್ನಿಂದ ಹೊರಗೆ ತಳ್ಳಿ. ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪಗೆ ನಾಚಿಕೆ ಆಗಲ್ವಾ? ಮೈಸೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.
ಕೃತಜ್ಞತೆಯೇ ಇಲ್ಲದ ನಾಯಕ ಶ್ಯಾಮನೂರು ಶಿವಶಂಕರಪ್ಪ ದುಡ್ಡು ಇದೆ ಎಲ್ಲರನ್ನೂ ಕೊಂಡುಕೊಳ್ಳಬಹುದು ಅಂದುಕೊಂಡಿದ್ದಾರೆ. ನಮ್ಮವರೇ ಸರಿ ಇಲ್ಲ. ನಮ್ಮ ಮಂತ್ರಿಗಳು ಮುಖ್ಯಮಂತ್ರಿಗಳು ಅವರ ಮೇಲೆ ಡಿಫೆಂಡ್ ಆಗಿದ್ದಾರೆ. ಅಲ್ಲಿಗೆ ಹೋದಾಗ ಅವರ ಗೆಸ್ಟ್ ಹೌಸ್‌ನಲ್ಲೇ ಮಲಗುತ್ತಾರೆ. ಕಾಂಗ್ರೆಸ್ ಪಕ್ಷ ಜೀವಂತವಾಗಿದ್ದರೆ ಶಿವಕುಮಾರ್ ಬಂಡೆಯಾಗಿದ್ದರೆ ಅಮಾನತು ಮಾಡಿ. ಅವನು ಇಲ್ಲದಿದ್ದರೆ ಕಾಂಗ್ರೆಸ್ ನಡೆಯಲ್ವಾ ಎಂದು ಏಕವಚನದಲ್ಲಿ ಶ್ಯಾಮನೂರು ಶಿವಶಂಕರಪ್ಪ ವಿರುದ್ದ ವಾಗ್ದಾಳಿ ನಡೆಸಿದರು.
ಇನ್ನು ಈ ಬಗ್ಗೆ ಚಿತ್ರದುರ್ಗದಲ್ಲಿಂದು ಮಾತನಾಡಿರುವ ಸಚಿವ ಕೆಎನ್ ರಾಜಣ್ಣ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರುಗೆ ಶೋಭೆ ತರುವಂಥದಲ್ಲ. ಶಾಮನೂರು ಶಿವಶಂಕರಪ್ಪ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಏನು ಕ್ರಮ ಕೈಗೊಳ್ಳಲಿದ್ದಾರೋ ನೋಡೋಣ ಎಂದರು.
ಚುನಾವಣೆ ಸಂದರ್ಭದಲ್ಲಿ ರಾಜಕೀಯ ಧ್ರುವೀಕರಣ ಆಗುತ್ತದೆ/ ಆ ಕಡೆಯವರು ಈಕಡೆ, ಈಕಡೆಯವರು ಆಕಡೆ ಹೋಗುತ್ತಾರೆ. ಕಾಂತರಾಜು ಆಯೋಗದ ವರದಿ ಇನ್ನೂ ಬಹಿರಂಗ ಆಗಿಲ್ಲ/ ವರದಿ ಪರಿಶೀಲಿಸಿದ ಬಳಿಕ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.