ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅದ್ಧೂರಿ ಸ್ವಾಗತ: ದೇವನಹಳ್ಳಿಯಿಂದ ಅರಮನೆ ಮೈದಾನದವರೆಗೆ ರಾರಾಜಿಸಿದ ಕಾಂಗ್ರೆಸ್ ಬಾವುಟ

ವಿಮಾನ ನಿಲ್ದಾಣದ ವಿಐಪಿ ಟರ್ಮಿನಲ್​ನಲ್ಲಿಯೇ ಕಾಂಗ್ರೆಸ್​ನ ಮುಂಚೂಣಿ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಖರ್ಗೆ ಸಭೆ ನಡೆಸಿದರು.

ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅದ್ಧೂರಿ ಸ್ವಾಗತ: ದೇವನಹಳ್ಳಿಯಿಂದ ಅರಮನೆ ಮೈದಾನದವರೆಗೆ ರಾರಾಜಿಸಿದ ಕಾಂಗ್ರೆಸ್ ಬಾವುಟ
ಮಲ್ಲಿಕಾರ್ಜುನ ಖರ್ಗೆ ಸ್ವಾಗತಕ್ಕೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಫ್ಲೆಕ್ಟ್ ಹಾಕಲಾಗಿದೆ (ಎಡಚಿತ್ರ). ವಿಮಾನ ನಿಲ್ದಾಣದಲ್ಲಿ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು ಸ್ವಾಗತಿಸಿದರು (ಬಲಚಿತ್ರ).
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 06, 2022 | 1:40 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ನಗರಕ್ಕೆ ಭೇಟಿ ನೀಡಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು ಸಂಭ್ರಮದಿಂದ ಸ್ವಾಗತಿಸಿದರು. ಸಾದಹಳ್ಳಿ ಟೋಲ್​ಗೇಟ್ ಬಳಿ ಬೃಹತ್ ಹೂವಿನ ಹಾಗೂ ಸೇಬಿನ ಹಾರ ಹಾಕಿ ಅದ್ಧೂರಿ ಸ್ವಾಗತ ಕೋರಲಾಯಿತು. ಜೆಸಿಬಿಯಲ್ಲಿ ನಿಂತಿದ್ದ ಹಲವು ಕಾರ್ಯಕರ್ತರು ಹೂವಿನ ಸುರಿಮಳೆಗರೆದರು.

ಇದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಖರ್ಗೆ ಅವರಿದ್ದ ವಿಮಾನವು ಲ್ಯಾಂಡ್ ಆದ ನಂತರ ಹಲವು ಪ್ರಮುಖ ನಾಯಕರು ಸ್ವಾಗತ ಕೋರಿದರು. ನಿಲ್ದಾಣದ ವಿಐಪಿ ಟರ್ಮಿನಲ್​ನಲ್ಲಿಯೇ ಕಾಂಗ್ರೆಸ್​ನ ಮುಂಚೂಣಿ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಖರ್ಗೆ ಸಭೆ ನಡೆಸಿದರು. ಸಭೆಯ ಬಳಿಕ ಹಿರಿಯ ನಾಯಕರೊಂದಿಗೆ ಅರಮನೆ ಮೈದಾನದತ್ತ ತೆರಳಿದರು. ಈ ವೇಳೆ ಖರ್ಗೆ ಅವರ ಕಾರಿನಲ್ಲಿಯೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ರಣದೀಪ್ ಸುರ್ಜೇವಾಲ ಸಹ ಇದ್ದರು. ಮಲ್ಲಿಕಾರ್ಜುನ ಖರ್ಗೆ ಕಾರಿನ ಮುಂಭಾಗದಲ್ಲಿ ಕುಳಿತಿದ್ದರೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೆವಾಲ ಹಿಂದಿನ ಸೀಟಿನಲ್ಲಿ ಕುಳಿತಿದ್ದರು. ನಗರದಲ್ಲಿ ನಡೆಯಲಿರುವ ಹಲವು ಸಭೆಗಳಲ್ಲಿ ಪಾಲ್ಗೊಳ್ಳಲಿರುವ ಖರ್ಗೆ ಮಧ್ಯಾಹ್ನ ಮತ್ತೆ ದೆಹಲಿಗೆ ಹಿಂದಿರುಗಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಸಮಕ್ಷಮ ವಿಶೇಷ ಸಭೆ ನಡೆಯಲಿದೆ. ಸಭೆಗಾಗಿ ವಿಶೇಷ ಸ್ವಾಗತ ಕಮಾನು ನಿರ್ಮಿಸಲಾಗಿದೆ. ಕಮಾನಿನ ಎರಡೂ ಬದಿಯಲ್ಲಿ ಕಾಂಗ್ರೆಸ್​ ನಾಯಕರ ಬೃಹತ್ ಕಟೌಟ್ ಹಾಕಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಚಿತ್ರ ಮತ್ತು ಹೆಸರುಗಳು ಎದ್ದು ಕಾಣಿಸುವಂತಿವೆ. ಮತ್ತೊಂದು ಬದಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಚಿತ್ರ-ಹೆಸರುಗಳಿರುವ ಬೃಹತ್ ಕಟೌಟ್​ಗಳನ್ನು ಅಳವಡಿಸಲಾಗಿದೆ.

ಖರ್ಗೆ ಅವರ ಸ್ವಾಗಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದರು. ಮೂರು ಕ್ರೇನ್​ಗಳಲ್ಲಿ ಬೃಹತ್ ಹೂವಿನ ಹಾರ, ಎರಡು ಜೆಸಿಬಿಗಳಲ್ಲಿ ಸೇಬಿನ ಹಾರ ಸಿದ್ಧಪಡಿಸಲಾಗಿದೆ. ಮತ್ತೊಂದೆಡೆ ಜಾನಪದ ಕಲಾತಂಡಗಳೂ ಸ್ವಾಗತ ಉತ್ಸಾಹದ ಮೆರುಗು ಹೆಚ್ಚಿಸಿದವು. ಹೆಬ್ಬಾಳ ಮತ್ತು ಮೇಖ್ರಿ ವೃತ್ತದ ಬಳಿ ಕಾರ್ಯಕರ್ತರು ಸ್ವಾಗತಕ್ಕೆ ಕಾಯುತ್ತಿದ್ದರು.

ಮಲ್ಲಿಕಾರ್ಜುನ ಖರ್ಗೆ ಸ್ವಾಗತಕ್ಕೆಂದು ಕೋಲಾರದಿಂದ ನೂರಾರು ಕಾರ್ಯಕರ್ತರು ಹೊರಟಿದ್ದಾರೆ. ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಬೆಂಬಲಿಗರು ಹತ್ತಾರು ಬಸ್​ಗಳಲ್ಲಿ ಬೆಂಗಳೂರಿನತ್ತ ಪ್ರಯಾಣಿಸಿದರು. ಕೆ.ಎಚ್.ಮುನಿಯಪ್ಪ ಇರುವ ಬ್ಯಾನರ್ ಹಾಗೂ ಫ್ಲೆಕ್ಸ್​ಗಳನ್ನು ಕಾರ್ಯಕರ್ತರು ಕೈಲಿ ಹಿಡಿದುಕೊಂಡಿದ್ದಾರೆ. ನಗರದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕಾಂಗ್ರೆಸ್ ಕಾರ್ಯಕರ್ತರು ಪ್ರಯಾಣ ಆರಂಭಿಸಿದ್ದರು.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ