Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಂಸತ್ ಭವನ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬಹಿಷ್ಕಾರ ಸಾಧ್ಯತೆ

New Parliament Building Inauguration: ಮೇ 28ರಂದು ನಡೆಯುವ ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮವನ್ನು ಕಾಂಗ್ರೆಸ್ ಬಹಿಷ್ಕರಿಸುವ ಸಾಧ್ಯತೆ ಇದೆ.

ನೂತನ ಸಂಸತ್ ಭವನ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬಹಿಷ್ಕಾರ ಸಾಧ್ಯತೆ
ನೂತನ ಸಂಸತ್ ಭವನ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬಹಿಷ್ಕಾರ ಸಾಧ್ಯತೆ
Follow us
Rakesh Nayak Manchi
|

Updated on:May 23, 2023 | 10:16 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನೂತನ ಸಂಸತ್ ಭವನವನ್ನು (New Parliament Building) ಮೇ 28 ರಂದು ಲೋಕಾರ್ಪಣೆಗೊಳಿಸಲಿದ್ದಾರೆ. ಆದರೆ ಈ ಕಾರ್ಯಕ್ರಮವನ್ನು ಕಾಂಗ್ರೆಸ್ ಬಹಿಷ್ಕರಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿರುವುದಾಗಿ ಸುದ್ದಿಸಂಸ್ಥೆ ಎಎನ್​ಐ ಟ್ವೀಟ್ ಮಾಡಿದೆ.

ಇತ್ತೀಚೆಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಸಂಸತ್ ಭವನದ ಕಟ್ಟಡವನ್ನು ಪ್ರಧಾನಮಂತ್ರಿ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದರು.

65,000 ಚದರ ಮೀಟರ್‌ಗಳಷ್ಟು ವಿಸ್ತಾರವಾಗಿರುವ ಹೊಸ ಸಂಸತ್​ ಕಟ್ಟಡಕ್ಕೆ ನರೇಂದ್ರ ಮೋದಿ ಅವರು 2020 ರ ಡಿಸೆಂಬರ್​​​ನಲ್ಲಿ ಶಂಕುಸ್ಥಾಪನೆ ಮಾಡಿದ್ದರು ಮತ್ತು 2021 ರ ಜನವರಿಯಲ್ಲಿ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಸುಮಾರು 970 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನೂತನ ಸಂಸತ್ ಭವನ ನಿರ್ಮಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಜುಲೈನಲ್ಲಿ ಪ್ರಾರಂಭವಾಗಲಿರುವ ಮುಂಬರುವ ಮುಂಗಾರು ಅಧಿವೇಶನವು ಹೊಸ ಕಟ್ಟಡದಲ್ಲಿ ನಡೆಯುವ ಸಾಧ್ಯತೆಯಿಲ್ಲ. ಭಾರತವು ಜಿ20 ಅಧ್ಯಕ್ಷ ಸ್ಥಾನವನ್ನು ಹೊಂದಿರುವುದರಿಂದ, ಜಿ20 ರಾಷ್ಟ್ರಗಳ ಸಂಸತ್ತಿನ ಸ್ಪೀಕರ್‌ಗಳ ಸಭೆಯು ಈ ವರ್ಷದ ಕೊನೆಯಲ್ಲಿ ಹೊಸ ಕಟ್ಟಡದಲ್ಲಿ ನಡೆಯಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಮೇ 28 ರಂದು ನೂತನ ಸಂಸತ್ ಭವನ ಲೋಕಾರ್ಪಣೆಗೊಳಿಸಲಿರುವ ಪ್ರಧಾನಿ ಮೋದಿ; ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮಾಹಿತಿ

64,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಹೊಸ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,224 ಸಂಸದರು ಕುಳಿತುಕೊಳ್ಳಬಹುದಾಗಿ. ಹೊಸ ಸಂಸತ್ತಿನ ಕಟ್ಟಡವು ಮೂರು ಮುಖ್ಯ ದ್ವಾರಗಳನ್ನು ಹೊಂದಿದೆ, ಇವುಗಳಿಗೆ ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ಕರ್ಮ ದ್ವಾರ ಎಂದು ಹೆಸರಿಸಲಾಗಿದೆ.

ಈ ಕಟ್ಟಡವು ಸಂಸದರು, ವಿಐಪಿಗಳು ಮತ್ತು ಸಂದರ್ಶಕರಿಗೆ ಪ್ರತ್ಯೇಕ ಪ್ರವೇಶದ್ವಾರಗಳನ್ನು ಹೊಂದಿರುತ್ತದೆ. ಈ ಕಟ್ಟಡದ ಮತ್ತೊಂದು ವಿಶೇಷವೆಂದರೆ ಸಂವಿಧಾನ ಭವನ, ದೇಶದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸಲು ನಿರ್ಮಿಸಲಾಗಿದೆ. ಭಾರತದ ಮೂಲ ಸಂವಿಧಾನದ ಪ್ರತಿಯನ್ನು ಸಭಾಂಗಣದಲ್ಲಿ ಇಡಲಾಗಿದೆ.

ಇದು ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು ಮತ್ತು ಊಟದ ಕೋಣೆಗಳನ್ನು ಸಹ ಹೊಂದಿದೆ. ಹೊಸ ಸಂಸತ್ ಕಟ್ಟಡವು ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸುಭಾಸ್ ಚಂದ್ರ ಬೋಸ್ ಮತ್ತು ದೇಶದ ಇತರ ಪ್ರಧಾನ ಮಂತ್ರಿಗಳ ಭಾವಚಿತ್ರಗಳನ್ನು ಹೊಂದಿರುತ್ತದೆ. ಕೋನಾರ್ಕ್‌ನ ಸೂರ್ಯ ದೇವಾಲಯದ ಚಕ್ರದ ಮಾದರಿಯೊಂದಿಗೆ ಬಹುಮುಖಿ ಕೌಟಿಲ್ಯನ ಭಾವಚಿತ್ರವನ್ನು ಕಟ್ಟಡದಲ್ಲಿ ಸ್ಥಾಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:13 pm, Tue, 23 May 23