AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಸ್ಥಳದಲ್ಲಿ ಕೆಲ ಸಚಿವರ ಸಭೆ: ಕುತೂಹಲ ಮೂಡಿಸಿದ ‘ಕೈ’ ನಾಯಕರ ನಡೆ

ರಾಜ್ಯ ರಾಜಕಾರಣದಲ್ಲಿ ನವೆಂಬರ್​ ಕ್ರಾಂತಿ ವಿಚಾರ ಸದ್ದು ಮಾಡುತ್ತಿರುವ ಹೊತ್ತಲ್ಲೇ ಕೆಲ ಸಚಿವರು ಗೌಪ್ಯ ಸಭೆ ನಡೆಸಿರೋದು ಭಾರಿ ಕುತೂಹಲ ಮೂಡಿಸಿದೆ. ಸಚಿವ ಸಂಪುಟ ಪುನಾರಚನೆ ವಿಚಾರವೂ ಚರ್ಚೆಗೆ ಬಂದಿದ್ದು, ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅ.13ರಂದು ಸಚಿವರಿಗೆ ಡಿನ್ನರ್​ ಆಯೋಜಿಸಿರೋದು ಯಾಕೆ ಎಂಬ ಪ್ರಶ್ನೆಯೂ ಎದ್ದಿದೆ.

ಖಾಸಗಿ ಸ್ಥಳದಲ್ಲಿ ಕೆಲ ಸಚಿವರ ಸಭೆ: ಕುತೂಹಲ ಮೂಡಿಸಿದ 'ಕೈ' ನಾಯಕರ ನಡೆ
ಕುತೂಹಲ ಮೂಡಿಸಿದ ಮೂವರು ಸಚಿವರ ನಡೆ
ಪ್ರಸನ್ನ ಗಾಂವ್ಕರ್​
| Edited By: |

Updated on: Oct 09, 2025 | 12:30 PM

Share

ಬೆಂಗಳೂರು, ಅಕ್ಟೋಬರ್​ 09: ರಾಜ್ಯ ರಾಜಕೀಯದಲ್ಲಿ ನವೆಂಬರ್​ ಕ್ರಾಂತಿ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ( Cabinet Reshuffle) ವಿಚಾರವೂ ಚರ್ಚೆಯಾಗ್ತಿದೆ. ಇದಕ್ಕೆ ಪೂರಕವೆಂಬಂತೆ ಖಾಸಗಿ ಸ್ಥಳದಲ್ಲಿ ಕೆಲ ಸಚಿವರು ಮೀಟಿಂಗ್​ ನಡೆಸಿರೋದು ಭಾರೀ ಕುತೂಹಲ ಮೂಡಿಸಿದೆ. ಅ.13ರಂದು ಸಿಎಂ ಸಿದ್ದರಾಮಯ್ಯ ಡಿನ್ನರ್ ಆಯೋಜಿಸಿರುವ ಬೆನ್ನಲ್ಲೇ ಈ ಸಭೆ ನಡೆದಿರೋದು ಯಾಕೆ ಎಂಬ ಪ್ರಶ್ನೆ ಎದ್ದಿದೆ.

ಗೃಜ ಸಚಿವ ಡಾ.ಜಿ. ಪರಮೇಶ್ವರ್​ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒನ್ ಟು ಒನ್ ಮೀಟಿಂಗ್ ನಡೆಸಿದ್ದು, ಖಾಸಗಿ ಅಪಾರ್ಟ್​ಮೆಂಟ್​ನಲ್ಲಿ ಸುದೀರ್ಘ ಚರ್ಚೆ ನಡೆದಿದೆ. ಬಳಿಕ ಸಚಿವ ಮಹದೇವಪ್ಪ ಕೂಡ ಸಾಥ್ ನೀಡಿದ್ದು, ಇದು ಮೀಟಿಂಗ್ ಅಲ್ಲ ಕೇವಲ ಈಟಿಂಗ್ ಎಂದು ಹೇಳಿ ಮೂವರು ಸಚಿವರು ತೆರಳಿದ್ದಾರೆ. ಇನ್ನು ಸಚಿವರಿಗೆ ಸಿಎಂ ಔತಣಕೂಟ ಆಯೋಜಿಸಿರುವ ವಿಚಾರ ಸಂಬಂಧ ವಿಧಾನಸೌಧದಲ್ಲಿ ಕೃಷಿ ಸಚಿವ ಎನ್​.ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ ವಿಚಾರ ನನಗೆ ಗೊತ್ತಿಲ್ಲ. ಆದರೆ ಇದಕ್ಕೂ ಮುನ್ನ ಎರಡ್ಮೂರು ಬಾರಿ ಕರೆದಿದ್ದಾರೆ. ಆಗ ಸರ್ಕಾರದ ಕಾರ್ಯಕ್ರಮಗಳು, ಅಭಿವೃದ್ಧಿ, ಪಕ್ಷದ ಸಂಘಟನೆ, ಸ್ಥಳೀಯ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ, ಈಗಲೂ ಅದೇ ಇರಬಹುದು. ಸಂಪುಟ ಪುನಾರಚನೆ ಬೇರೆ, ಅದಕ್ಕೂ ಔತಣಕೂಟಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ನಾಯಕತ್ವ ಬದಲಾವಣೆ: ಸಿದ್ದು ಬಣ VS ಡಿಕೆಶಿ ಬಣ ಮತ್ತೆ ಸಕ್ರಿಯ

ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಎರಡೂವರೆ ವರ್ಷ ಆದ್ಮೇಲೆ ಅವಕಾಶ ನೀಡುತ್ತೇವೆ ಎಂದು ಖರ್ಗೆ, ರಾಹುಲ್, ಸಿದ್ದರಾಮಯ್ಯ & ಡಿಕೆಶಿ ಅವರು ಮಾತು ಕೊಟ್ಟಿದ್ದರು. ನಮ್ಮ ಕೋಲಾರ ಜಿಲ್ಲೆಯಲ್ಲಿ ನಾನೇ ಸೀನಿಯರ್ ಇದ್ದೇನೆ. ನನಗೂ ಅವಕಾಶ ಮಾಡಿಕೊಡುತ್ತಾರೆ ಅನ್ನೋ ವಿಶ್ವಾಸ ಇದೆ. ಬಲಗೈ ಸಮುದಾಯಕ್ಕೆ ಅವಕಾಶ ಸಿಗಬೇಕು ಎಂದು ಬೆಂಗಳೂರಿನಲ್ಲಿ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಹೇಳಿದ್ದಾರೆ.

‘ಸಿಎಂ ಬಗ್ಗೆ ನನಗೆ ವಿಶ್ವಾಸ ಇದೆ’

ಮತ್ತೊಂದೆಡೆ ಮತ್ತೆ ಸಚಿವ ಸ್ಥಾನ ಸಿಗುವ ಬಗ್ಗೆ ಶಾಸಕ ಕೆ.ಎನ್.ರಾಜಣ್ಣ ಮಾತನಾಡಿದ್ದು, ಬಿಹಾರ ಚುನಾವಣೆ ಮುಗಿಯುವ ತನಕ ಸುಮ್ಮನೇ ಇದ್ದು ಬಿಡಿ. ಸಿಎಂ ಬಗ್ಗೆ ನನಗೆ ವಿಶ್ವಾಸ ಇದೆ ಎಂದಿದ್ದಾರೆ. ಮಂತ್ರಿ ಸ್ಥಾನ ಕೊಡಿ ಅಂತಾ ಯಾರನ್ನೂ ಕೇಳಲು ಹೋಗಿಲ್ಲ. 2018ರಲ್ಲಿ ನೀನು ಸೋತು ಬಿಟ್ಟೆ, ಇಲ್ಲದಿದ್ರೆ ಮಂತ್ರಿ ಮಾಡ್ತಿದ್ದೆ. ನಿನ್ನ ಜಾಗದಲ್ಲಿ ತುಕಾರಾಂ ಮಂತ್ರಿ ಮಾಡ್ದೆ ಅಂತಾ ಈ ಹಿಂದೆ ಸಿದ್ದರಾಮಯ್ಯ ನನ್ನ ಬಳಿ ಒಂದು ಸಲ ಹೇಳಿದ್ದರು. ಈ ಚುನಾವಣೆಯಲ್ಲಿ ಗೆದ್ದಾಗ ಸಹಕಾರ ಖಾತೆ ಕೊಡಿ ಎಂದಿದ್ದೆ. ನನ್ನ ಅನುಭವದ ಆಧಾರದ ಮೇಲೆ ಸಹಕಾರ ಖಾತೆ ಕೊಟ್ಟಿದ್ದರು ಎಂದು ರಾಜಣ್ಣ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!
ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!