ಹುಬ್ಬಳ್ಳಿ- ಧಾರವಾಡ ಕಾಂಗ್ರೆಸ್​ನಲ್ಲಿ ಭಿನ್ನಮತ ಸ್ಫೋಟ, ಶಾಸಕ ಖಡಕ್ ಎಚ್ಚರಿಕೆ

ಸಿಎಂ ಸಿದ್ದರಾಮಯ್ಯ ಮೊನ್ನೆ ಪರಮೇಶ್ವರ್ ನಿವಾಸದಲ್ಲಿ ನಡೆಸಿದ ಡಿನ್ನರ್ ಮೀಟಿಂಗ್ ಸೃಷ್ಟಿಸಿರುವ ಸಂಚಲನ ಅಷ್ಟಿಷ್ಟಲ್ಲ. ಊಟದಲ್ಲಿ ಭಾಗವಹಿಸಿದವರೆಲ್ಲ ಬರೀ ಊಟ ಮಾಡಿದ್ದೇವೆ, ರಾಜಕೀಯ ಏನೂ ಇಲ್ಲ, ಸಿಎಂ ಬದಲಾವಣೆ ಇಲ್ಲ ಅಂತಾನೇ ಹೇಳುತ್ತಿದ್ದಾರೆ. ಆದ್ರೆ ಇದು ರಾಜಕೀಯ ನೋಡಿ, ಏನಿಲ್ಲ ಅಂದಕಡೆಯೇ ಏನೇನೋ ಆಗಿರುತ್ತೆ. ಸದ್ಯ ಸಿಎಂ ಸಿದ್ದರಾಮಯ್ಯ ಬಣ ಮತ್ತು ಡಿಸಿಎಂ ಡಿಕೆ ಬಣದ ನಡುವಿನ ಸಿಎಂ ಕುರ್ಚಿ ಜಟಾಪಟಿಯೂ ಅದೇ ದಿಕ್ಕಿನಲ್ಲಿ ಸಾಗುತ್ತಿದೆ. ಇದರ ಮಧ್ಯೆ ಅತ್ತ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್​​ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಹುಬ್ಬಳ್ಳಿ- ಧಾರವಾಡ ಕಾಂಗ್ರೆಸ್​ನಲ್ಲಿ ಭಿನ್ನಮತ ಸ್ಫೋಟ, ಶಾಸಕ ಖಡಕ್ ಎಚ್ಚರಿಕೆ
ಕಾಂಗ್ರೆಸ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 01, 2023 | 7:26 AM

ಹುಬ್ಬಳ್ಳಿ, (ನವೆಂಬರ್ 1): ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನಗಳಲ್ಲಿ ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಇದರ ಮಧ್ಯೆ ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್​​ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ದ ಹುಬ್ಬಳ್ಳಿ ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್ ಫುಲ್ ಗರಂ ಆಗಿದ್ದಾರೆ. ಕೆಲ ಕಾಂಗ್ರೆಸ್ ಕಾರ್ಪೋರೆಟರ್​ಗಳ ವಿರುದ್ದ ಅಬ್ಬಯ್ಯ ಪರೋಕ್ಷವಾಗಿ ಅಸಮಾಧಾನ‌ ವ್ಯಕ್ತಪಡಿಸಿದ್ದು, ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನ ನಾನು ಬಿಡುವುದಿಲ್ಲ ಎಂದು ನೇರವಾಗಿ ಎಚ್ಚರಿಕೆ ನೀಡಿದ್ದಾರೆ.

ಕೆಲ‌ ಕಾರ್ಪೋರೇಟರ್ ಗಳು ಬಿಜೆಪಿ ನಾಯಕರ ಸಂಪರ್ಕದಲ್ಲಿರುವುದರಿಂದ ಅಬ್ಬಯ್ಯ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನ ನಾನು ಬಿಡುವುದಿಲ್ಲ ಎಂದು ನೇರವಾಗಿ ಎಚ್ಚರಿಕೆ ನೀಡಿದ್ದಾರೆ. ಪಕ್ಷದಲ್ಲಿ ಇದ್ದು ದ್ರೋಹ‌ ಮಾಡಿದವರನ್ನು ನಾನು ಕ್ಷಮಿಸುವುದಿಲ್ಲ. ಅವರನ್ನು ನಾನು ಪಕ್ಷದಲ್ಲಿ‌ ಉಳಿಸಿಕೊಳ್ಳುವದಿಲ್ಲ ಎಂದು ವಿಧಾನಸಭೆ ಚುನಾವಣೆ ಬಳಿಕ‌‌ ಇದೇ ಮೊದಲ ಬಾರಿಗೆ ನೇರವಾಗಿ ಕೈ ಕಾರ್ಪೋರೆಟ್ ವಿರುದ್ದ ಶಾಸಕ ಅಬ್ಬಯ್ಯ ಗುಡುಗಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಪತನ: ಡಿಕೆ ಶಿವಕುಮಾರ್ ಶೀಘ್ರವೇ ಮಾಜಿ: ಹೊಸ ಬಾಂಬ್ ಸಿಡಿಸಿದ ಜಾರಕಿಹೊಳಿ

ಜಗದೀಶ್ ಶೆಟ್ಟರ್ ಕ್ಷೇತ್ರದಲ್ಲಿ ಕೆಲವರು ಮೋಸ ಮಾಡಿದ್ದಾರೆ.. ನನ್ನ ಕ್ಷೇತ್ರದಲ್ಲಿ ಕೆಲವರು ತಿಂದು ಮನೆಗೆ ಎರಡು ಬಗೆದಿದ್ದಾರೆ. ಅಂತವರನ್ನು‌ ಪಕ್ಷದಲ್ಲಿ ಇರುವುದಕ್ಕೆ ನಾನು‌‌ ಬಿಡಲ್ಲ. ನಮ್ಮ ಪಕ್ಷದಲ್ಲಿದ್ದು ದ್ರೋಹ ಮಾಡಿದರೆ ,ನಿಮ್ಮ ದಾರಿ ನಿಮಗೆ ಎಂದು ಎಚ್ಚರಿಕೆನೀಡಿರುವ ಅಬ್ಬಯ, ಪಕ್ಷದ ಸಿದ್ದಾಂತರ ಅಡಿಯಲ್ಲಿ ಕೆಲಸ ಮಾಡಬೇಕು. ನಮ್ಮ ವ್ಯಯಕ್ತಿಕ ಸ್ನೇಹ ಬೇರೆ, ಆದ್ರೆ ಪಕ್ಷಕ್ಕೆ ದ್ರೋಹ ಮಾಡಿದ್ರೆ ನಾನು ಸಹಿಸಲ್ಲ ಖಾರವಾಗಿ ಹೇಳಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:20 am, Wed, 1 November 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ