ಸಿಎಂ ಯಡಿಯೂರಪ್ಪಗೆ ಅಖಿಲ ಭಾರತ ವೀರಶೈವ ಮಹಾಸಭಾದ ಬೆಂಬಲವಿದೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ

ಕಾಂಗ್ರೆಸ್​ ಶಾಸಕ ಮತ್ತು ಹಿರಿಯ ರಾಜಕಾರಣಿಯೂ ಆದ ಶಾಮನೂರು ಶಿವಶಂಕರಪ್ಪ ಅವರ ಮಾತು ಸದ್ಯದ ಬೆಳವಣಿಗೆಗಳಿಂದ ಅತ್ಯಂತ ಮಹತ್ವ ಪಡೆದುಕೊಂಡಿದೆ. 

ಸಿಎಂ ಯಡಿಯೂರಪ್ಪಗೆ ಅಖಿಲ ಭಾರತ ವೀರಶೈವ ಮಹಾಸಭಾದ ಬೆಂಬಲವಿದೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ
ಬಿ.ಎಸ್. ಯಡಿಯೂರಪ್ಪ ಮತ್ತು ಶಾಮನೂರು ಶಿವಶಂಕರಪ್ಪ
Follow us
TV9 Web
| Updated By: guruganesh bhat

Updated on:Jun 18, 2021 | 2:50 PM

ದಾವಣಗೆರೆ: ಸಿಎಂ ಯಡಿಯೂರಪ್ಪ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭೆಯ ಬೆಂಬಲ ಇದೆ. ಹೀಗಾಗಿ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲ್ಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯುವ ಬಗ್ಗೆ ಈಗಾಗಲೇ ಸ್ವಾಮೀಜಿಗಳು ಹೇಳಿದ್ದಾರೆ. ಆದರೆ ನಾನು ಮಾತ್ರ ವೀರಶೈವ ಮಹಾಸಭಾದ ನಿಲುವು ಹೇಳುವೆ. ಸದ್ಯ ಕೊವಿಡ್ ಪರಿಸ್ಥಿತಿ ಇದ್ದು, ಈಗ ಮುಖ್ಯಮಂತ್ರಿ ಬದಲಾಯಿಸುವ ಪರಿಸ್ಥಿತಿಯಲ್ಲ ಎಂದು ಅವರು ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಶಾಸಕ ಮತ್ತು ಹಿರಿಯ ರಾಜಕಾರಣಿಯೂ ಆದ ಶಾಮನೂರು ಶಿವಶಂಕರಪ್ಪ ಅವರ ಮಾತು ಸದ್ಯದ ಬೆಳವಣಿಗೆಗಳಿಂದ ಅತ್ಯಂತ ಮಹತ್ವ ಪಡೆದುಕೊಂಡಿದೆ.

ಯಾರೂ ಹಾದಿಬೀದಿಯಲ್ಲಿ ಮಾತಾಡಬಾರದು: ಸಿ ಟಿ ರವಿ ನಾಯಕತ್ವ ಬದಲಾವಣೆ ಬಗ್ಗೆ ಸಂಸದೀಯ ಮಂಡಳಿ ನಿರ್ಣಯ ಕೈಗೊಳ್ಳುತ್ತದೆ. ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಬಿಜೆಪಿ ಪಾರ್ಲಿಮೆಂಟರಿ ಬೋರ್ಡ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ಯಾರೂ ಕೂಡ ಹಾದಿಬೀದಿಯಲ್ಲಿ ಮಾತನಾಡಬಾರದು. ಬದಲಾವಣೆ ಬಗ್ಗೆ ನಾನು ಹೇಳಿದರೂ ಅದು ಆಗುವುದಿಲ್ಲ. ಪಾರ್ಲಿಮೆಂಟರಿ ಬೋರ್ಡ್ ನಿರ್ಣಯವೇ ಅಂತಿಮ‌ ಆಗುತ್ತೆ. ನಾಯಕತ್ವ ಬದಲಾವಣೆ ಈಗ ಚರ್ಚೆಯ ವಿಷಯವೇ ಅಲ್ಲ ಎಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.

ನಾಳೆ ರಾಜ್ಯ ಬಿಜೆಪಿ ಘಟಕದ ಕೋರ್​ ಕಮಿಟಿ ಸಭೆ ಇದೆ. ಸಭೆಯಲ್ಲಿ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಯಲಿದೆ. ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಸಂಪುಟ ಪುನಾರಚನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.

ನಾಯಕತ್ವದ ಬಗ್ಗೆ ಪ್ರಶ್ನೆ ಉದ್ಭವಿಸಲ್ಲ ಎಂದು ಬಿಜೆಪಿ ಕಚೇರಿಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಗೊಂದಲಗಳನ್ನು ವರಿಷ್ಠರು ಬಗೆಹರಿಸ್ತಾರೆ. ಸಾಧಕ ಬಾಧಕಗಳನ್ನು ವರಿಷ್ಠರು ಸಂಗ್ರಹಿಸುತ್ತಿದ್ದಾರೆ. ನಾವು ಮುಂದಿನ ಚುನಾವಣೆಗೆ ತಯಾರಿ ಮಾಡುತ್ತಿದ್ದೇವೆ ಎಂದು ಬಿಜೆಪಿ ಕಚೇರಿಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.

ಇದನ್ನೂ ಓದಿ: Ramesh Jarkiholi : ಯಡಿಯೂರಪ್ಪ, ಅಮಿತ್ ಶಾರನ್ನ ನಂಬಿ ಬಿಜೆಪಿಗೆ ಬಂದಿದ್ದೇವೆ

ಸಚಿವ ಸಂಪುಟ ಪುನಾರಚನೆಗೆ ಬಿಜೆಪಿ ಶಾಸಕರಿಂದ ಒತ್ತಡ.. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ಸಭೆ

(Congress MLA Akhila Bharata Veerashaiva Mahasabha national president Shamanur Shivashankarappa supports Yediyurappa as CM)

Published On - 2:45 pm, Fri, 18 June 21

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್