KMF Chairman: ಕೊನೆಗೂ ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್​ಗೆ ಒಲಿದ ಕೆಎಂಎಫ್ ಅಧ್ಯಕ್ಷ ಹುದ್ದೆ

Karnataka Milk Federation: ನಿರೀಕ್ಷೆಯಂತೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್​ ಅವರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಸ್ಥಾನ ಒಲಿದಿದೆ.

KMF Chairman: ಕೊನೆಗೂ ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್​ಗೆ ಒಲಿದ ಕೆಎಂಎಫ್ ಅಧ್ಯಕ್ಷ ಹುದ್ದೆ
Follow us
ರಮೇಶ್ ಬಿ. ಜವಳಗೇರಾ
|

Updated on:Jun 21, 2023 | 1:42 PM

ಬೆಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಅಧ್ಯಕ್ಷ ಹುದ್ದೆ (KMF Chairman) ಕೊನೆಗೂ ಹಗರಿಬೊಮ್ಮನಹಳ್ಳಿಯ ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್​​ಗೆ ಒಲಿದಿದೆ. ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ (Bheema Naik) ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಾಲಚಂದ್ರ ಜಾರಕಿಹೊಳಿ ಅವರ ಕೆಎಂಎಫ್ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಹೀಗಾಗಿ ಚುನಾವಣೆ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿತ್ತು. ಆದ್ರೆ,  ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಯಾರು ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾದರು.

ಇದನ್ನೂ ಓದಿ: ಲೀಟರ್​​ ಎಮ್ಮೆ ಹಾಲಿಗೆ ರೈತರಿಗೆ ಹೆಚ್ಚುವರಿಯಾಗಿ ಸಿಗಲಿದೆ 9.25 ರೂ; ಈ ಜಿಲ್ಲೆಗಳ ರೈತರಿಗೆ ಮಾತ್ರ

ಒಟ್ಟು 14 ಒಕ್ಕೂಟದ ಪ್ರತಿನಿಧಿಗಳು, ಪಶುಸಂಗೋಪನಾ ಇಲಾಖೆ ನಿರ್ದೇಶಕ, ಸಹಕಾರ ಇಲಾಖೆ ರಿಜಿಸ್ಟಾರ್‌, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಒಬ್ಬರು ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 18 ಮಂದಿ ಮತದಾನ ಹೊಂದಿದ್ದರು, ಆದ್ರೆ, ಭೀಮಾ ನಾಯ್ಕ್​ಗೆ ಎದುರಾಳಿಯಾಗಿ ಯಾರೂ ನಾಮಪತ್ರ ಸಲ್ಲಿಸಿಲ್ಲ. ಇದರಿಂದ ಮತದಾನ ನಡೆಯದೇ ಭೀಮಾ ನಾಯ್ಕ್ ಅವರು​ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೆಎಂಎಫ್‌ ಅಧ್ಯಕ್ಷರ ಅಧಿಕಾರದ ಅವಧಿ ಇನ್ನೂ ಒಂದು ವರ್ಷವಿದ್ದು, ತಮಗೆ ಎಲ್ಲ ನಿರ್ದೇಶಕರ ಬೆಂಬಲವಿದ್ದರೂ ಸಹ ಸಂಸ್ಥೆಯ ಪ್ರಗತಿಗಾಗಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದೆ ಮುಂಬರುವ ಹೊಸ ಅಧ್ಯಕ್ಷರಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಹೇಳುವ ಮೂಲಕ ಕೆಎಂಎಫ್​ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿದಿದ್ದರು.

ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) ಅಭಿವೃದ್ಧಿಯ ಹಿತ ಚಿಂತನೆಯಿಂದ ಬುಧವಾರ ನಡೆಯುವ ಕೆಎಂಎಫ್‌ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿಲ್ಲ ಎಂದು ಶಾಸಕ ಹಾಗೂ ಈ ಹಿಂದೆ ಕೆಎಂಎಫ್‌ ಅಧ್ಯಕ್ಷರಾಗಿದ್ದ ಬಾಲಚಂದ್ರ ಜಾರಕಿಹೊಳಿ ಹೇಳಿದ್ದರು. ಅಲ್ಲದೇ ಸರ್ಕಾರದ ಬೆಂಬಲ ಹಾಗೂ ನಿರ್ದೇಶಕರ ಸಹಕಾರದಿಂದ ಸಂಸ್ಥೆಯನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಿದ್ದೇನೆ. ಮುಂದೆ ಬರುವ ಹೊಸ ಅಧ್ಯಕ್ಷರು ಸಂಸ್ಥೆಯನ್ನು ಇನ್ನಷ್ಟುಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲಿ ಎಂದು ಸಲಹೆ ನೀಡಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:28 pm, Wed, 21 June 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ