AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ಮೊದಲು ತಮ್ಮ ತೂತುಗಳನ್ನ ಮುಚ್ಚಿಕೊಳ್ಳಲಿ: ಶಾಸಕ ಯತೀಂದ್ರ ಸಿದ್ದರಾಮಯ್ಯ

ಬಿಜೆಪಿಯವರು ಮೊದಲು ತಮ್ಮ ತೂತುಗಳನ್ನ ಮುಚ್ಚಿಕೊಳ್ಳಲಿ, ನಮ್ಮ ಪಕ್ಷದಲ್ಲಿ ಯಾರು ಯಾರನ್ನೂ ಮುಗಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಬಿಜೆಪಿಯವರು ಮೊದಲು ತಮ್ಮ ತೂತುಗಳನ್ನ ಮುಚ್ಚಿಕೊಳ್ಳಲಿ: ಶಾಸಕ ಯತೀಂದ್ರ ಸಿದ್ದರಾಮಯ್ಯ
ಪ್ರಲ್ಹಾದ್ ಜೋಶಿ ಮತ್ತು ಯತೀಂದ್ರ ಸಿದ್ದರಾಮಯ್ಯ
TV9 Web
| Updated By: Rakesh Nayak Manchi|

Updated on:Jul 12, 2022 | 11:30 AM

Share

ಮೈಸೂರು: ಕಾಂಗ್ರೆಸ್ ಪಕ್ಷದೊಳಗಿನ ಒಡಕ್ಕನ್ನು ಟೀಕಿಸುತ್ತಿದ್ದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ (Dr.Yatindra Siddaramaiah) ಅವರು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಮೊದಲು ತಮ್ಮ ತೂತುಗಳನ್ನ ಮುಚ್ಚಿಕೊಳ್ಳಲಿ, ನಮ್ಮ ಪಕ್ಷದಲ್ಲಿ ಯಾರು ಯಾರನ್ನೂ ಮುಗಿಸಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿದ್ದರಾಮೋತ್ಸವದ ಬಗ್ಗೆ ವ್ಯಂಗ್ಯವಾಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi)ಗೆ ಟಾಂಗ್ ಕೊಟ್ಟ ಅವರು, ಬಿಜೆಪಿ ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದರು.

ಇದನ್ನೂ ಓದಿ: ‘ಸಿದ್ದರಾಮೋತ್ಸವ’ ಟ್ವೀಟ್ ವಾರ್: ಸಿದ್ದರಾಮಯ್ಯ ಪ್ರತಿ ಟೀಕೆಗೂ ಠಕ್ಕರ್ ಕೊಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಡಾ.ಜಿ. ಪರಮೇಶ್ವರ ಅವರು ನಮ್ಮ ನಾಯಕರು. ನಮ್ಮ ಪಕ್ಷದಲ್ಲಿ ಯಾರು ಯಾರನ್ನೂ ಮುಗಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರ ಒಗ್ಗಟ್ಟು ಸಹಿಸಲು ಬಿಜೆಪಿ ನಾಯಕರಿಗೆ ಆಗುತ್ತಿಲ್ಲ. ಹೀಗಾಗಿ ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದ ಅವರು, ಮುಖ್ಯಮಂತ್ರಿ ವಿರುದ್ಧ ಬಿಜೆಪಿಯ ಕೆಲವು ನಾಯಕರು ತಿರುಗಿ ಬಿದ್ದಿದ್ದಾರೆ. ಮೊದಲು ತಮ್ಮ ಸಮಸ್ಯೆಗಳನ್ನು ಬಿಜೆಪಿ ಸರಿಪಡಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರು 75ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆ ಬೆಂಬಲಿಗರಿಂದ ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣದ ಹುಬ್ಬನ್ನು ಮೇಲೆಬ್ಬಿಸುವಂತೆ ಮಾಡಿದೆ. ಸಿದ್ದರಾಮೋತ್ಸದ ಮೂಲಕ ಸಿದ್ದರಾಮಯ್ಯ ಅವರು ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ ಎಂಬ ಟೀಕೆಗಳು ಬರಲು ಪ್ರಾರಂಭವಾದವು. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಬಿಜೆಪಿ, ಸಿದ್ದರಾಮೋತ್ಸವು ಡಿ.ಕೆ.ಶಿವಕುಮಾರ್ ಅವರನ್ನು ಮುಗಿಲಸು ಹಾಕಿರುವ ಪ್ಲಾನ್ ಆಗಿದೆ ಎಂದಿದೆ.

ಇದನ್ನೂ ಓದಿ: Tamil Nadu Politics: ಎಐಎಡಿಎಂಕೆ ವಿಭಜನೆಯಿಂದ ಡಿಎಂಕೆಗೆ ಲಾಭ, ಬಿಜೆಪಿ ಹೊಸ ಅವಕಾಶ

ಇಲ್ಲಿಂದ ಆರಂಭಗೊಂಡ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಸಿದ್ದರಾಮೋತ್ಸವ ಟೀಕಾ ಪ್ರಹಾರಗಳು ಇದೀಗ ಟ್ವಿಟರ್​ನಲ್ಲೂ ಮುಂದವರೆದಿದೆ. ಒಂದು ಕಡೆಯಲ್ಲಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಟೀಕೆಗಳನ್ನು ನಡೆಸಿದರೆ, ಮತ್ತೊಂದು ಕಡೆಗಳಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಬಿಜೆಪಿ ಪ್ರತಿ ಟ್ವೀಟ್ ಮಾಡಿ ಠಕ್ಕರ್ ಕೊಡುತ್ತಿದೆ.

ಇದನ್ನೂ ಓದಿ: Maharashtra Cabinet: ರಾಷ್ಟ್ರಪತಿ ಚುನಾವಣೆ ಬಳಿಕ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ

Published On - 11:30 am, Tue, 12 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ