Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಕ್ಷತೆಗಾ ಅಥವಾ 2 ಸಾವಿರ ರೂ. ಕೊಟ್ಟವರಿಗೆ ಮತ ಹಾಕಬೇಕಾ? ಎಂಬುವುದ ಜನರ ತೀರ್ಮಾನ: ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ

ರಾಮಮಂದಿರ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಆದರೂ ರಾಜಕೀಯ ಉದ್ದೇಶದಿಂದ ಉದ್ಘಾಟನೆ ಮಾಡುತ್ತಿದ್ದಾರೆ. ಇಂತಹ ರಾಜಕೀಯ ಕಾರ್ಯಕ್ರಮಕ್ಕೆ ನಾವು ಹೋಗಬೇಕಾ? ಅವರು (ಬಿಜೆಪಿ) ಮನೆಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ನಾವು ಗೃಹಲಕ್ಷ್ಮೀ ಯೋಜನೆಯಡಿ ಎರಡು ಸಾವಿರ ಕೊಡುತ್ತಿದ್ದೇವೆ. ಯಾರಿಗೆ ಮತ ಹಾಕಬೇಕೆಂದು ಜನ ತೀರ್ಮಾನಿಸುತ್ತಾರೆ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದರು.

ಮಂತ್ರಾಕ್ಷತೆಗಾ ಅಥವಾ 2 ಸಾವಿರ ರೂ. ಕೊಟ್ಟವರಿಗೆ ಮತ ಹಾಕಬೇಕಾ? ಎಂಬುವುದ ಜನರ ತೀರ್ಮಾನ: ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಸಕ ಬಾಲಕೃಷ್ಣ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ವಿವೇಕ ಬಿರಾದಾರ

Updated on:Jan 13, 2024 | 12:16 PM

ರಾಮನಗರ, ಜನವರಿ 13: ರಾಮಮಂದಿರ (Ram Mandir) ಇನ್ನೂ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಆದರೂ ರಾಜಕೀಯ ಉದ್ದೇಶದಿಂದ ಉದ್ಘಾಟನೆ ಮಾಡುತ್ತಿದ್ದಾರೆ. ಇಂತಹ ರಾಜಕೀಯ ಕಾರ್ಯಕ್ರಮಕ್ಕೆ ನಾವು ಹೋಗಬೇಕಾ? ಅವರು (ಬಿಜೆಪಿ) ಮನೆಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ನಾವು ಗೃಹಲಕ್ಷ್ಮೀ ಯೋಜನೆಯಡಿ ಎರಡು ಸಾವಿರ ಕೊಡುತ್ತಿದ್ದೇವೆ. ಯಾರಿಗೆ ಮತ ಹಾಕಬೇಕೆಂದು ಜನ ತೀರ್ಮಾನಿಸುತ್ತಾರೆ. ಮಂತ್ರಾಕ್ಷತೆ ಕೊಟ್ಟವರಿಗಾ ಅಥವಾ ಎರಡು ಸಾವಿರ ರೂ. ಕೊಟ್ಟವರಿಗಾ? ಎಂಬುವುದನ್ನು ಜನ ನಿರ್ಧರಿಸುತ್ತಾರೆ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ (HC Balakrishna) ಹೇಳಿದರು.

ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ‌ ಕಟ್ಟಲು ನಾವೂ ಜಾಗ ಹುಡುಕುತ್ತಿದ್ದೇವೆ. 20 ಎಕರೆ ಜಾಗದಲ್ಲಿ ಮಂದಿರ ಕಟ್ಟುತ್ತೇವೆ. ರಾಮಮಂದಿರ‌ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತೇವೆ. ರಾಮಮಂದಿರ ಬಿಜೆಪಿ, ಕಾಂಗ್ರೆಸ್​ ಸ್ವತ್ತಲ್ಲ. ರಾಮಮಂದಿರ ಈ ಸಮಾಜದ ಸ್ವತ್ತು. ನಾವು ರಾಮಮಂದಿರ ಬಗ್ಗೆ ನಾವು ಚರ್ಚೆ ಮಾಡಲ್ಲ. ಮಂದಿರ ಕಟ್ಟಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಜಿಲ್ಲಾಧಿಕಾರಿ, ಸಂಸದರು ಇದರ ಬಗ್ಗೆ ಚರ್ಚಿಸುತ್ತಿದ್ದಾರೆ. ಹೆಚ್ಚು ಚರ್ಚೆ ಮಾಡದೇ ರಾಮಮಂದಿರ ನಿರ್ಮಿಸುತ್ತೇವೆ. ಇಲ್ಲದಿದ್ದರೇ ಮಂದಿರ ಕಟ್ಟಿದ್ದೇವೆಂದು ಗೆದ್ದು ಬಿಡುತ್ತಾರೆ.ಕೆಲಸ ಮಾಡದೇ ಮತ ಹಾಕಿಸಿಕೊಂಡು ಗೆದ್ದುಬಿಡುತ್ತಾರೆ ಎಂದು ಬಿಜೆಪಿ ನಾಯಕರ  ವಿರುದ್ಧ ವಾಗ್ದಾಳಿ ಮಾಡಿದರು​.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆಯಲ್ಲೇ ಮುನ್ನಲೆಗೆ ಬಂದ ರಾಮನಗರ ರಾಮಮಂದಿರ, ಬಿಜೆಪಿಗೆ ಟಾಂಗ್

ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬ ವಿಚಾರವಾಗಿ ಮಾತನಾಡಿದ ಅವರು, ಈ ಹೇಳಿಕೆ ನೀಡುತ್ತಿರುವವರಿಗೆ ಲೋಕಸಭಾ ಚುನಾವಣೆ ಟಾಸ್ಕ್ ನೀಡಬೇಕು. ಹೆಚ್ಚುವರಿ ಡಿಸಿಎಂ ಬೇಡಿಕೆ ಇಟ್ಟವರು ಎರಡೆರಡು ಕ್ಷೇತ್ರ ಗೆಲ್ಲಿಸಿಕೊಡಲಿ. ಎರಡೆರಡು ಕ್ಷೇತ್ರ ಗೆಲ್ಲಿಸಿ ಕೊಡುವವರನ್ನು ಡಿಸಿಎಂ ಮಾಡೋಣ. ಜಾತಿ ಹೆಸರಿನಲ್ಲಿ ಡಿಸಿಎಂ ಮಾಡಿ ಅನ್ನೋದು ಸರಿಯಲ್ಲ. ಆದರೆ ಕೆಲ ಸಚಿವರು ಅನವಶ್ಯಕವಾಗಿ ಹೇಳಿಕೆ ನೀಡುತ್ತಿದ್ದಾರೆ. ಬೇಕಿದ್ದರೆ ಹೈಕಮಾಂಡ್​ ಭೇಟಿಯಾಗಿ ಮನವಿ ಮಾಡಿಕೊಳ್ಳಲಿ. ಮಾಧ್ಯಮಗಳ ಮುಂದೆ ಮಾತನಾಡಿ ಗೊಂದಲ ಸೃಷ್ಟಿ ಮಾಡಬೇಡಿ ಎಂದು ಸ್ವಪಕ್ಷೀಯ ಸಚಿವರ ಹೇಳಿಕೆಗೆ ಶಾಸಕ ಹೆಚ್​​. ಸಿ. ಬಾಲಕೃಷ್ಣ ಟಾಂಗ್ ಕೊಟ್ಟರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಶಕ್ತಿ ಕುಗ್ಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಟಾರ್ಗೆಟ್ ಮಾಡಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಯಾರನ್ನ ಯಾರೂ ಟಾರ್ಗೆಟ್ ಮಾಡಲು ಆಗಲ್ಲ. ಯಾರ ಶಕ್ತಿ ಏನು ಎಂದು ನಮ್ಮ ಹೈಕಮಾಂಡ್​ಗೆ ಗೊತ್ತು. ಎಲ್ಲಾ ಪಕ್ಷದಲ್ಲೂ ಟಾರ್ಗೆಟ್ ಮಾಡುವವರು ಇದ್ದೇ ಇರುತ್ತಾರೆ. ಆದರೆ ಇದನ್ನು ಟಾರ್ಗೆಟ್ ಅಂತ ಅಂದುಕೊಳ್ಳೊದಿಲ್ಲ. ಕೆಲವರು ಅವರ ಅಭಿಪ್ರಾಯ ತಿಳಿಸಿದ್ದಾರೆ, ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಸದ್ಯಕ್ಕೆ ಈ ವಿಚಾರ ಅಪ್ರಸ್ತುತ ಅಂತ ಮಲ್ಲಿಕಾರ್ಜುನ್​ ಖರ್ಗೆ ಅವರೇ ಹೇಳಿದ್ದಾರೆ. ಸಿಎಂ ಹಾಗೂ ಡಿಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಮಧ್ಯೆ ಕೆಲವರು ಅವರ ಬೇಳೆ ಬೇಯಿಸಿಕೊಳ್ಳಲು ಏನೇನೂ ಮಾತನಾಡುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:10 pm, Sat, 13 January 24

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ