ಚುನಾವಣೆ ಬಂದ್ರೆ ಸಾಕು ಕುಮಾರಸ್ವಾಮಿ ಹಾರ್ಟ್​​ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗುತ್ತಾರೆ: ವ್ಯಂಗ್ಯವಾಡಿದ ಕಾಂಗ್ರೆಸ್​ ಶಾಸಕ

| Updated By: ವಿವೇಕ ಬಿರಾದಾರ

Updated on: Mar 30, 2024 | 12:27 PM

ಸಚಿವ ಚಲುವರಾಯಸ್ವಾಮಿ ಅವರಿಗೆ ಇರುವ ಕಾಯಿಲೆ ಹೆಚ್​ಡಿ ಕುಮಾರಸ್ವಾಮಿಯವರಿಗೂ ಇದೆ. ಚಲುವರಾಯಸ್ವಾಮಿ ಆಸ್ಪತ್ರೆಗೆ ದಾಖಲಾದರೆ ಒಂದು ತಿಂಗಳು ಆಚೆ ಬರಲ್ಲ. ಆದರೆ, ಹೆಚ್​ಡಿ ಕುಮಾರಸ್ವಾಮಿ ಹೇಗೆ ಶಸ್ತ್ರಚಿಕಿತ್ಸೆಯಾದ ಎರಡೇ ದಿನಕ್ಕೆ ಆಚೆ ಬರುತ್ತಾರೆ? ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದಾರೆ.

ಮಂಡ್ಯ, ಮಾರ್ಚ್​ 30: ಚುನಾವಣೆ ಬಂದರೆ ಸಾಕು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumarswamy) ಅವರು ಹೃದಯ ಸಮಸ್ಯೆ ಇದೆ ಅಂತ ಆಸ್ಪತ್ರೆಗೆ ದಾಖಲಾಗುತ್ತಾರೆ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ (Congress)​ ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisiddegowda) ವ್ಯಂಗ್ಯವಾಡಿದ್ದಾರೆ. ಮಳವಳ್ಳಿಯಲ್ಲಿ (Manavalli) ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮೂರೇ ದಿನದಲ್ಲಿ ಹೃದಯ ಶಸ್ತ್ರಚಿಕಿತ್ಸೆ ಆಗುತ್ತದೆ. ನಾಲ್ಕನೇ ದಿನಕ್ಕೆ ರಾಜ್ಯ ಸುತ್ತುತ್ತಾರೆ, ಅದು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದರು.

ಸಚಿವ ಚಲುವರಾಯಸ್ವಾಮಿ ಅವರಿಗೆ ಇರುವ ಕಾಯಿಲೆ ಹೆಚ್​ಡಿ ಕುಮಾರಸ್ವಾಮಿಯವರಿಗೂ ಇದೆ.  ಚಲುವರಾಯಸ್ವಾಮಿ ಆಸ್ಪತ್ರೆಗೆ ದಾಖಲಾದರೆ ಒಂದು ತಿಂಗಳು ಆಚೆ ಬರಲ್ಲ. ಆದರೆ, ಹೆಚ್​ಡಿ ಕುಮಾರಸ್ವಾಮಿ ಹೇಗೆ ಶಸ್ತ್ರಚಿಕಿತ್ಸೆಯಾದ ಎರಡೇ ದಿನಕ್ಕೆ ಆಚೆ ಬರುತ್ತಾರೆ?. ಇದು ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಜನರ ಚುನಾವಣೆ. ನನಗೆ ಆ ತೊಂದರೆ ಇದೆ, ಈ ತೊಂದರೆ ಇದೆ ಎಂದರೇ ಕೇಳಬೇಡಿ. ಅಧಿಕಾರದಲ್ಲಿ ಇದ್ದಾಗ ಏನ್ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿ. ಕಾಂಗ್ರೆಸ್ ಅಭ್ಯರ್ಥಿಗೆ ಅತಿಹೆಚ್ಚು ಮತ ನೀಡಿ ಗೆಲ್ಲಿಸಿ ಎಂದರು.

ಇದನ್ನೂ ಓದಿ: ಕುಮಾರಸ್ವಾಮಿಗೆ ಹೃದಯ ಶಸ್ತ್ರ ಚಿಕಿತ್ಸೆ: ತಂದೆ ಆರೋಗ್ಯದ ಬಗ್ಗೆ ಪುತ್ರ ನಿಖಿಲ್​ ಹೇಳಿದ್ದಿಷ್ಟು

ಕುಮಾರಸ್ವಾಮಿ ಹೃದಯ ಶಸ್ತ್ರಚಿಕಿತ್ಸೆ

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿಯವರು ಹೃದಯ ಶಸ್ತ್ರಚಿಕಿತ್ಸೆ ಸಂಬಂಧ ಕಳೆದ ವಾರ  ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಮಾರ್ಚ್​ 21 ರಂದು ಅವರಿಗೆ ಮೂರನೇ ಬಾರಿ​​​ ಹೃದಯ ಶಸ್ತ್ರಚಿಕಿತ್ಸೆ ನೆರವೇರಿತು. ಇನ್ನು ಶಸ್ತ್ರ ಚಿಕಿತ್ಸೆ ಯಶಸ್ವಿಯಾದ ಹಿನ್ನೆಲೆ ಶಾಸಕರಾದ ಸಮೃದ್ಧಿ ಮಂಜು, ಹರೀಶ್ ಗೌಡ, ಸ್ವರೂಪ್ ಸೇರಿದಂತೆ JDS ನಾಯಕರು ಚೆನ್ನೈಗೆ ತೆರಳಿದ್ದರು. ಮತ್ತೊಂದೆಡೆ ರಾಮನಗರ, ಮಂಡ್ಯ, ಹಾಸನ, ಮೃಸೂರು ಸೇರಿದಂತೆ ರಾಜ್ಯಾದ್ಯಂತ ಹೆಚ್​ಡಿ ಕುಮಾರಸ್ವಾಮಿ ಅಭಿಮಾನಿಗಳು, ಬೆಂಬಲಿಗರು ಪ್ರಾರ್ಥನೆ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:35 am, Sat, 30 March 24