Vijayadharani: ಬಿಜೆಪಿ ಸೇರಿದ ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ

|

Updated on: Feb 24, 2024 | 3:10 PM

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯವರಾದ ವಿಜಯಧರಣಿ ಕಾಂಗ್ರೆಸ್ ಕುಟುಂಬದಿಂದಲೇ ಬಂದವರು. ಅವರ ಕುಟುಂಬದ ಮೂರು ತಲೆಮಾರುಗಳು ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಆದರೆ ಇತ್ತೀಚೆಗೆ ಕಾಂಗ್ರೆಸ್ ನಾಯಕತ್ವದ ವಿರುದ್ಧ ವಿಜಯಧರಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಶನಿವಾರ ದೆಹಲಿಯಲ್ಲಿ ಬಿಜೆಪಿ ಸೇರಿದ್ದಾರೆ.

Vijayadharani: ಬಿಜೆಪಿ ಸೇರಿದ ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ
ವಿಜಯಧರಣಿ
Follow us on

ದೆಹಲಿ ಫೆಬ್ರವರಿ 24: ತಮಿಳುನಾಡಿನಿಂದ (Tamil nadu) ವಿಲವಂಕೋಡ್‌ ವಿಧಾನಸಭೆಯನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್‌ (Congress) ಶಾಸಕಿ ಎಸ್‌ ವಿಜಯಧರಣಿ (S Vijayadharani) ಅವರು ಶನಿವಾರ ನವದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ (BJP) ಸೇರ್ಪಡೆಗೊಂಡಿದ್ದಾರೆ. ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್‌ಸಿ ಮುರುಗನ್, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಮತ್ತು ಬಿಜೆಪಿ ತಮಿಳುನಾಡು ರಾಜ್ಯ ಬಿಜೆಪಿ ರಾಷ್ಟ್ರೀಯ ಸಹ-ಪ್ರಭಾರಿ ಪೊಂಗುಲೇಟಿ ಸುಧಾಕರ್ ರೆಡ್ಡಿ ಅವರ ಸಮ್ಮುಖದಲ್ಲಿ ಅವರು ಶಾಸಕಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯವರಾದ ವಿಜಯಧರಣಿ ಕಾಂಗ್ರೆಸ್ ಕುಟುಂಬದಿಂದಲೇ ಬಂದವರು. ಅವರ ಕುಟುಂಬದ ಮೂರು ತಲೆಮಾರುಗಳು ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಆದರೆ ಇತ್ತೀಚೆಗೆ ಕಾಂಗ್ರೆಸ್ ನಾಯಕತ್ವದ ವಿರುದ್ಧ ವಿಜಯಧರಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರನ್ನು ಕೇಳಿದಾಗ, ”ಪಕ್ಷದ ಆಂತರಿಕ ರಾಜಕೀಯವು ಕಾಂಗ್ರೆಸ್ ಪಕ್ಷದ ಪ್ರಮುಖ ದೌರ್ಬಲ್ಯಗಳಲ್ಲಿ ಒಂದಾಗಿದೆ. ಪಕ್ಷದೊಳಗೆ, ಪ್ರತಿಯೊಬ್ಬ ನಾಯಕರು ತಮ್ಮದೇ ಆದ ಪ್ರತ್ಯೇಕ ಬೆಂಬಲ ಗುಂಪುಗಳನ್ನು ರಚಿಸುವ ಮೂಲಕ ಮತ್ತು ಮುಂದಿನ ಗುಂಪುಗಳೊಂದಿಗೆ ಸ್ಪರ್ಧಿಸುವ ಮೂಲಕ ಪಕ್ಷವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯದಿರಲು ನಿರ್ಧರಿಸಿದ್ದಾರೆ, ”ಎಂದು ಆರೋಪಿಸಿದ್ದಾರೆ.

ಬಿಜೆಪಿ ಸೇರಿದ ವಿಜಯಧರಣಿ

ಬಿಜೆಪಿ ಸೇರಿದ ನಂತರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಧರಣಿ, ನಾನು ಬಾಲ್ಯದಿಂದಲೂ ಕಾಂಗ್ರೆಸ್‌ನ ಭಾಗವಾಗಿದ್ದೇನೆ. ಈಗ ಬಿಜೆಪಿ ಸೇರುವ ಪರಿಸ್ಥಿತಿ ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಚಟುವಟಿಕೆಗಳು ಮತ್ತು ಕಾರ್ಯಕ್ರಮಗಳಿಂದಾಗಿ ನಾನು ಕೂಡ ಬಿಜೆಪಿ ಸೇರಿದ್ದೇನೆ. ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸೋಣ. ಅಣ್ಣಾಮಲೈ ಅವರು ತಮಿಳುನಾಡಿನಲ್ಲಿ ಬಿಜೆಪಿಯನ್ನು ಚೆನ್ನಾಗಿ ಬೆಳೆಸುತ್ತಿದ್ದಾರೆ. ಬಿಜೆಪಿಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೆ.27ರಂದು ತಮಿಳುನಾಡಿನ ತಿರುಪ್ಪೂರ್‌ನಲ್ಲಿ ಮೋದಿ ಮೆಗಾ ರ‍್ಯಾಲಿ; ಇಲ್ಲಿದೆ ಎರಡು ದಿನಗಳ ಭೇಟಿಯ ವೇಳಾಪಟ್ಟಿ

ಫೆಬ್ರವರಿ 28 ರಂದು ಪ್ರಧಾನಿ ಮೋದಿ ಭಾಗವಹಿಸಲಿರುವ ಬೃಹತ್ ಬಿಜೆಪಿ ರ್ಯಾಲಿಯಲ್ಲಿ ವಿಜಯಧರಣಿ ಭಾಗವಹಿಸುವ ನಿರೀಕ್ಷೆ ಇದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Sat, 24 February 24