AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಸ್ಪೀಕರ್ ಆಗಿ ಯುಟಿ ಖಾದರ್ ಸರ್ವಾನುಮತದಿಂದ ಆಯ್ಕೆ, ಸಿದ್ದರಾಮಯ್ಯ-ಬೊಮ್ಮಾಯಿ ಹೇಳಿದ್ದೇನು?

ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಅವರು ಸರ್ವಾನುಮತದಿಂದ ಇಂದು( ಬುಧವಾರ) ಆಯ್ಕೆಯಾಗಿದ್ದಾರೆ. ಇನ್ನು ನೂತನ ಸ್ಪೀಕರ್​ ಬಗ್ಗೆ ಸಿದ್ದರಾಮಯ್ಯ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಏನೆಲ್ಲ ಹೇಳಿದರು ಎನ್ನುವುದನ್ನು ನೋಡಿ.

ವಿಧಾನಸಭೆ ಸ್ಪೀಕರ್ ಆಗಿ ಯುಟಿ ಖಾದರ್ ಸರ್ವಾನುಮತದಿಂದ ಆಯ್ಕೆ, ಸಿದ್ದರಾಮಯ್ಯ-ಬೊಮ್ಮಾಯಿ ಹೇಳಿದ್ದೇನು?
ವಿಧಾನಸಭೆ ನೂತನ ಸ್ಪೀಕರ್ ಯುಟಿ ಖಾದರ್​ಗೆ ಅಭಿನಂದಿಸಿದ ಸಿಎಂ, ಡಿಸಿಎಂ
ರಮೇಶ್ ಬಿ. ಜವಳಗೇರಾ
|

Updated on: May 24, 2023 | 12:26 PM

Share

ಬೆಂಗಳೂರು: ನಿರೀಕ್ಷೆಯಂತೆ ಯುಟಿ ಖಾದರ್ (UT Khader) ಅವರು ಸರ್ವಾನುಮತದಿಂದ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಇನ್ನು ಇಂದು(ಮೇ 24) ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಪ್ರಸ್ತಾವನೆ ಮಾಡಿದರು. ಸಿಎಂ ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅನುಮೋದಿಸಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪೀಕರ್​ ಯುಟಿ ಖಾದರ್ ಅವರಿಗೆ ಅಭಿನಂದಿಸಿ ಅವರು ನಡೆಬಂದ ರಾಜಕೀಯ ಹಾದಿಯನ್ನು ಮೆಲುಕು ಹಾಕಿದರು. ಅಲ್ಲದೇ ಸ್ಪೀಕರ್​ ಯುಟಿ ಖಾದರ್​​ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಮಾತನಾಡಿದರು.

ಇದನ್ನೂ ಓದಿ: Karnataka Breaking Kannada News Live: ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ.ಖಾದರ್ ಆಯ್ಕೆ

ಸ್ಪೀಕರ್ ಖಾದರ್ ಬಗ್ಗೆ ಸಿದ್ದರಾಮಯ್ಯ ಮಾತು

ಸಿಎಂ ಸಿದ್ದರಾಮಯ್ಯ ಮಾತನಾಡಿ,  ವಿಧಾನಸಭೆಯಲ್ಲಿ ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಯು.ಟಿ.ಖಾದರ್​ ಅವರಿಗೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್​ ಉತ್ತಮ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಸದನ ಮೇಲ್ಮಟ್ಟಕ್ಕೆ ಹೋಗಲಿ. ಖಾದರ್​ ಬಹಳ ತಾಳ್ಮೆ ವ್ಯಕ್ತಿ, ಆ ತಾಳ್ಮೆಯನ್ನು ಕಳೆದುಕೊಳ್ಳಬೇಡಿ ಎಂದು ಸಲಹೆ ನೀಡಿದರು.

ವಿಧಾನಸಭೆಯಲ್ಲಿ ರಾಜ್ಯದ ಜನರ ಸಮಸ್ಯೆ ಬಗ್ಗೆ ಚರ್ಚಿಸಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು. ರಾಜ್ಯದ ಜಿಡಿಪಿ ಬೆಳವಣಿಗೆ ಕೂಡ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲೊ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದದ್ದು. ಸದನದಲ್ಲಿ ನಾವು ಬಹಳ ಹೆಚ್ಚರಿಕೆಯಿಂದ ಪದ ಬಳಕೆ ಮಾಡಬೇಕು. ಆಡಳಿತ, ವಿರೋಧ ಪಕ್ಷದ ಸದಸ್ಯರು ಚರ್ಚೆಯಲ್ಲಿ ಭಾಗವಹಿಸಬೇಕು ಎಂದರು.

ನೂತನ ಸ್ಪೀಕರ್​ ಬಗ್ಗೆ ಬೊಮ್ಮಾಯಿ ಹೇಳಿದ್ದೇನು?

ಇನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಹ ನೂತನ ಸ್ಪೀಕರ್​ ಖಾದರ್​ಗೆ ಅಭಿನಂದನೆ ತಿಳಿಸಿ ಮಾತನಾಡಿದ ಅವರು, ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಇಡೀ ದೇಶಕ್ಕೆ ಮಾರ್ಗದರ್ಶನ ನೀಡಿದ ವಿಧಾನಮಂಡಲವಿದು, ಯು.ಟಿ.ಖಾದರ್​ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ. ಈ ಹಿಂದೆ ಸ್ಪೀಕರ್​ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ತಿಳಿಸಿದರು.

ನ್ಯಾಯಾಂಗಕ್ಕಿಂತ ಎತ್ತರವಾದದ್ದು ಸ್ಪೀಕರ್​ ಸ್ಥಾನ. ಹಾಗಾಗಿ ನಿಷ್ಪಕ್ಷಪಾತವಾಗಿ ತಾವು ಸದನವನ್ನು ನಡೆಸಬೇಕು. ಪ್ರತಿಪಕ್ಷ ಸದಸ್ಯರ ಹೇಳಿಕೆಗೆ ಸ್ಪೀಕರ್​ ಹೆಚ್ಚು ಅವಕಾಶ ಕೊಡಬೇಕು. ಚರ್ಚೆ ವೇಳೆ ಕೊನೆಯ ಸಾಲಿನವರಿಗೆ ಹೆಚ್ಚು ಅವಕಾಶ ಕೊಡಬೇಕು. ಸ್ಪೀಕರ್ ಹೊಸ ವಿಚಾರಕ್ಕೆ ಅವಕಾಶ ಮಾಡಿಕೊಡುವ ವಿಶ್ವಾಸವಿದ್ದು, ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದು ಹೇಳಿದರು.

ನೂತನ ಸ್ಪೀಕರ್​ಗೆ ಡಿಕೆ ಶಿವಕುಮಾರ್ ಅಭಿನಂದನೆ ಮಾತುಗಳು

ನೂತನ ಸ್ಪೀಕರ್ ಯು.ಟಿ.ಖಾದರ್​ಗೆ ಅಭಿನಂದನೆ ತಿಳಿಸಿದ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಯು.ಟಿ.ಖಾದರ್​ರನ್ನು ಸೇವಾದಳ ಕಾರ್ಯಕರ್ತನಾಗಿ ನೋಡಿದ್ದೇನೆ. ಸ್ಪೀಕರ್ ಸ್ಥಾನ ಬಹಳ ಶ್ರೇಷ್ಠವಾದದ್ದು. ಈ ಹಿಂದೆ ರಮೇಶ್ ಕುಮಾರ್ ಯುವ ಶಾಸಕರನ್ನು ಎಬ್ಬಿಸುತ್ತಿದ್ದರು. ನಾವು ತಪ್ಪು ಮಾಡದಂತೆ ವಿಪಕ್ಷದವರು ಎಚ್ಚರಿಕೆ ಕೊಡುತ್ತಿರಲಿ. ಕೋಮು ಸೌಹಾರ್ದತೆಗೆ ಮತ್ತೊಂದು ಹೆಸರು ಯು.ಟಿ.ಖಾದರ್​. ಎಲ್ಲರಿಗೂ ನೀವು ನ್ಯಾಯ ಒದಗಿಸಿ. ನಾವು ತಪ್ಪು ಮಾಡಿದರೂ ಸ್ಪೀಕರ್ ತಿದ್ದಿ ನಡೆಸಲಿ. ಸಭಾಧ್ಯಕ್ಷರು ಎಲ್ಲರನ್ನೂ ಸಮಾನವಾಗಿ ನೋಡಿ ಎಂದರು.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್