ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವರ್ಗಾಯಿಸುವಂತೆ ಸಿದ್ದರಾಮಯ್ಯಗೆ ಕಾಂಗ್ರೆಸ್​ ಶಾಸಕರ ಒತ್ತಡ

ಸರ್ಕಾರಿ ಜಮೀನು ಕಬ್ಜ ಮಾಡಿದ್ದ ವಿಚಾರಕ್ಕೆ ಕಠಿಣ ಕ್ರಮ‌ ಜರುಗಿಸಿದ್ದ ಕಂದಾಯ ಇಲಾಖೆಯ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ರಾಜ್ಯ ಕಾಂಗ್ರೆಸ್​ನ 55 ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಶಾಸಕರ ಮೇಲೆ ಮುಖ್ಯಮಂತ್ರಿಗಳು ಗರಂ ಆಗಿದ್ದಾರೆ.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವರ್ಗಾಯಿಸುವಂತೆ ಸಿದ್ದರಾಮಯ್ಯಗೆ ಕಾಂಗ್ರೆಸ್​ ಶಾಸಕರ ಒತ್ತಡ
ಸಿಎಂ ಸಿದ್ದರಾಮಯ್ಯ
Follow us
| Updated By: ಡಾ. ಭಾಸ್ಕರ ಹೆಗಡೆ

Updated on:Jul 26, 2024 | 12:52 PM

ಬೆಂಗಳೂರು, ಜುಲೈ 26: ಕಂದಾಯ ಇಲಾಖೆಯ (Revenue Department) ಪ್ರಧಾನ ಕಾರ್ಯದರ್ಶಿಯನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಕಾಂಗ್ರೆಸ್​ ಶಾಸಕರು (Congress MLA) ಪತ್ರ ಬರೆದಿದ್ದಾರೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಅವರನ್ನು ವರ್ಗಾವಣೆ ಮಾಡುವಂತೆ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ನೇತೃತ್ವದಲ್ಲಿ ಸುಮಾರು 55ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿಮ ಸುಮಾರು 40ಕ್ಕೂ ಹೆಚ್ಚು ಎಕರೆ ಸರ್ಕಾರಿ ಜಾಗಕ್ಕೆ ಪ್ರಭಾವಿಗಳು ಕಾಂಪೌಂಡ್​ ಹಾಕಿ ಖಾಸಗಿ ಗಾಲ್ಫ್ ಕೋರ್ಸ್, ಲೇಔಟ್ ಕೂಡ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಮಾಹಿತಿ ತಿಳಿದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ವರದಿ ಕೇಳಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಕಿಯುಗುಳಿದ ವಿಪಕ್ಷ ನಾಯಕ ಆರ್ ಅಶೋಕ

ಆಗ ಜಿಲ್ಲಾಧಿಕಾರಿ, ತಹಶೀಲ್ದಾರ್‌ ಪ್ರಭಾವಿಗಳಿಗೆ ಕ್ಲೀನ್ ಚಿಟ್ ನೀಡಿ, ಕಂದಾಯ ಇಲಾಖೆಗೆ ಪತ್ರ ಬರೆದಿದ್ದರು. ಬಳಿಕ ಪ್ರಕರಣದ ಆಳಕ್ಕೆ ಇಳಿದು ಸರ್ವೇ ಮಾಡಲು ಪ್ರಧಾ‌ನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಸೂಚನೆ ನೀಡಿದ್ದರು. ಸರ್ವೇ ಬಳಿಕ ಸತ್ಯಾಂತ ಬಯಲಾಗಿದ್ದು ಸರ್ಕಾರಿ ಜಮೀನಿಗೆ ಕಾಂಪೌಂಡ್ ಹಾಕಿರುವುದು ಬಹಿರಂಗವಾಗಿದೆ.

ಆಗ ರಾಜೇಂದ್ರ ಕಟಾರಿಯಾ ಅವರು ಈ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ರಾಜೇಂದ್ರ ಕಟಾರಿಯಾ ಬೆನ್ನಿಗೆ ಸಚಿವ ಕೃಷ್ಣಬೈರೇಗೌಡ ನಿಂತಿದ್ದಾರೆ. ಇದೇ ಕಾರಣಕ್ಕೆ ಕಟಾರಿಯಾ ವಿರುದ್ಧ ಕೆಲವು ಶಾಸಕರು ತಿರುಗಿಬಿದ್ದಿದ್ದಾರೆ.

ರಾಜೇಂದ್ರ ಕಟಾರಿಯಾ ಅವರನ್ನು ವರ್ಗಾವಣೆ ಮಾಡುವಂತೆ 55 ಶಾಸಕರು ಸಹಿಯೊಂದಿಗೆ ಮುಖ್ಯಮಂತ್ರಿಗಳಿಗೆ ದೂರು ನೀಡಲಾಗಿದೆ. ಸಹಿ ಹಾಕಿದ ಕೆಲವು ಶಾಸಕರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:31 pm, Fri, 26 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್