ಪಾಕಿಸ್ತಾನ ಶತ್ರು ರಾಷ್ಟ್ರವಲ್ಲವೆಂಬ ಬಿಕೆ ಹರಿಪ್ರಸಾದ್ ಹೇಳಿಕೆ ನಾಚಿಕೆಗೇಡಿನದ್ದು: ಶೋಭಾ ಕರಂದ್ಲಾಜೆ ಆಕ್ರೋಶ

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ವಿವಾದಕ್ಕೆ ಗುರಿಯಾಗುವ ಅಂಶಗಳಲ್ಲಿ ತಿಳಿದುಕೊಳ್ಳುತ್ತಿದ್ದಾರೆ. ಇದೀಗ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್, ಪಾಕಿಸ್ತಾನವು ನಮಗೆ ಶತ್ರು ರಾಷ್ಟ್ರವಲ್ಲ ಬಿಜೆಪಿಗೆ ಮಾತ್ರ ಎಂದು ಹೇಳಿರುವುದು ರಾಜಕೀಯ ಕೋಲಾರಕ್ಕೆ ಕಾರಣವಾಗಿದೆ. ಹೇಳಿಕೆ ಬಗ್ಗೆ ಬಿಜೆಪಿ ನಾಯಕರ ಪ್ರತಿಕ್ರಿಯೆಗಳು ಇಲ್ಲಿವೆ.

ಪಾಕಿಸ್ತಾನ ಶತ್ರು ರಾಷ್ಟ್ರವಲ್ಲವೆಂಬ ಬಿಕೆ ಹರಿಪ್ರಸಾದ್ ಹೇಳಿಕೆ ನಾಚಿಕೆಗೇಡಿನದ್ದು: ಶೋಭಾ ಕರಂದ್ಲಾಜೆ ಆಕ್ರೋಶ
ಶೋಭಾ ಕರಂದ್ಲಾಜೆ & ಬಿಕೆ ಹರಿಪ್ರಸಾದ್
Follow us
Ganapathi Sharma
|

Updated on: Feb 29, 2024 | 10:15 AM

ಬೆಂಗಳೂರು, ಫೆಬ್ರವರಿ 29: ಪಾಕಿಸ್ತಾನ (Pakistan) ಶತ್ರು ರಾಷ್ಟ್ರವಲ್ಲ ಎಂಬ ಕಾಂಗ್ರೆಸ್ (Congress) ನಾಯಕ ಬಿಕೆ ಹರಿಪ್ರಸಾದ್ (BK Hariprasad) ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹರಿಪ್ರಸಾದ್ ಹೇಳಿಕೆ ಸಂಪೂರ್ಣ ನಾಚಿಕೆಗೇಡು ಎಂದು ಅವರು ಟೀಕಿಸಿದ್ದಾರೆ. ಕಾಂಗ್ರೆಸ್ ಎಂಎಲ್​ಸಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಪ್ರಸಾದ್ ಅವರ ಈ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದ ನಿಜ ಬಣ್ಣ ಬದಲಾಗಿದೆ ಎಂದಿದ್ದಾರೆ.

ಶತ್ರು ರಾಷ್ಟ್ರ ಪಾಕಿಸ್ತಾನವು ಭಾರತದ ವಿರುದ್ಧ 4 ಯುದ್ಧಗಳನ್ನು ಮಾಡಿದೆ. ಕದನ ವಿರಾಮ ಉಲ್ಲಂಘನೆಯಲ್ಲಿ ಸದಾ ತೊಡಗಿಕೊಂಡಿದ್ದು, ನಮ್ಮ ಯೋಧರ ಮೇಲೆ ದಾಳಿ ನಡೆಸುತ್ತಿದೆ. ಕಾಶ್ಮೀರ ವಿಚಾರದಲ್ಲಿ ಪಟ್ಟುಬಿಡದೆ ಹಟ ಸಾಧಿಸುತ್ತಿದೆ. ಭಯೋತ್ಪಾದನೆಗೆ ನಿರಂತರವಾಗಿ ಕುಮ್ಮಕ್ಕು ನೀಡುತ್ತಿದೆ. ಇಷ್ಟಾಗಿಯೂ ಬಿಕೆ ಹರಿಪ್ರಸಾದ್ ಅವರು ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಪರಿಗಣಿಸುವುದಿಲ್ಲ. ಇದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿ ಎಂದು ಶೋಭಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೋಭಾ ಕರಂದ್ಲಾಜೆ ಎಕ್ಸ್ ಸಂದೇಶ

ಪಾಕಿಸ್ತಾನದ ಬೆದರಿಕೆ ಮತ್ತು ಆಕ್ರಮಣದಿಂದ ಭಾರತ ಮತ್ತು ಅದರ ಸಾರ್ವಭೌಮತ್ವವನ್ನು ರಕ್ಷಿಸಲು ಮಾಡಬೇಕಾಗಿ ಬಂದಿದ್ದ ತ್ಯಾಗ ಅಷ್ಟಿಷ್ಟಲ್ಲ. ಅದಕ್ಕಾಗಿ ತ್ಯಾಗ ಮಾಡಿದವರನ್ನು ಕೀಳಾಗಿ ಕಾಣುವುದು ಬೇಡ. ನಮ್ಮ ನೆಮ್ಮದಿಯ ನಿದ್ದೆಗೆ ಆ ಧೈರ್ಯಶಾಲಿ ಆತ್ಮಗಳ ತ್ಯಾಗ ಕಾರಣವಾಗಿದೆ. ಇದೀಗ ಮುಖವಾಡ ಕಳಚಿದೆ. ಕಾಂಗ್ರೆಸ್​ನ ನಿಜವಾದ ಬಣ್ಣ ಬಯಲಾಗಿದೆ ಎಂದು ಶೋಭಾ ಹೇಳಿದ್ದಾರೆ.

ಬಿಕೆ ಹರಿಪ್ರಸಾದ್ ಹೇಳಿದ್ದೇನು?

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ, ವಿಧಾನ ಪರಿಷತ್ ಕಪಾಲದಲ್ಲಿ ಮಾತನಾಡಿದ ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನವು ಬಿಜೆಪಿಗೆ ಶತ್ರು ರಾಷ್ಟ್ರ ಆಗಿರಬಹುದು. ಆದರೆ, ಕಾಂಗ್ರೆಸ್‌ಗೆ ಅಲ್ಲ. ನಮಗೆ ಅದು ನೆರೆ ರಾಷ್ಟ್ರ ಅಷ್ಟೇ ಎಂದು ಹರಿಪ್ರಸಾದ್​ ಹೇಳಿದ್ದರು.

ಬಿವೈ ವಿಜಯೇಂದ್ರ ವಾಗ್ದಾಳಿ

ಬಿಕೆ ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಒಪ್ಪಿಕೊಳ್ಳಲು ಕಾಂಗ್ರೆಸ್ ನಿರಾಕರಿಸುತ್ತಿರುವುದು ಹಿಂದಿನಿಂದಲೂ ತಿಳಿದಿರುವ ವಿಚಾರ. ಆದರೆ, ಸತ್ಯವನ್ನು ಸದಾ ಕಾಲ ಮುಚ್ಚಿಡಲು ಸಾಧ್ಯವಿಲ್ಲ. ಕೊನೆಗೂ ಇಂದು ವಿಧಾನಪರಿಷತ್​​​ನಲ್ಲಿ ಸತ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ರಾಹುಲ್ ಗಾಂಧಿಯವರ ನಂಬಿಕಸ್ಥ ಮಿತ್ರರಾದ ಹಿರಿಯ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಬಿಕೆ ಅವರಿಗೆ ಅಭಿನಂದನೆಗಳು ಎಂದು ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಪಾಕಿಸ್ತಾನ ಶತ್ರು ದೇಶವೇ ಹೊರತು ನಮಗಲ್ಲ: ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್

ಈ ಹೇಳಿಕೆಯು ಪಾಕಿಸ್ತಾನದ ಬಗೆಗಿನ ಕಾಂಗ್ರೆಸ್‌ನ ಮೃದು ಧೋರಣೆಯ ಮೇಲೆ ಬೆಳಕು ಚೆಲ್ಲುತ್ತದೆ. ಇದು ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆದ ಹಲವಾರು ಭಯೋತ್ಪಾದಕ ಘಟನೆಗಳೊಂದಿಗೆ ಪರಸ್ಪರ ಸಂಬಂಧ ಹೊಂದಿದೆ. ಪಾಕ್ ಆಕ್ರಮಿತ ಕಾಶ್ಮೀರದಿಂದ ಆರ್ಟಿಕಲ್ 370 ವರೆಗೆ, ಅವರ ಧೋರಣೆ ಸ್ಪಷ್ಟವಾಗಿದೆ. ಪ್ರಧಾನಿ ಮೋದಿಯವರನ್ನು ಪಾಕಿಸ್ತಾನಿಗಳು ವಿರೋಧಿಸುವುದರಲ್ಲಿ ಆಶ್ಚರ್ಯವಿಲ್ಲ ಮತ್ತು ಕಾಂಗ್ರೆಸ್ ನೇತೃತ್ವದ ಭಾರತವನ್ನು ಬಯಸುವುದರಲ್ಲಿ ವಿಶೇಷವಿಲ್ಲ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ