ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸ್ಪಷ್ಟನೆ ನೀಡಿದ ಜಗದೀಶ್ ಶೆಟ್ಟರ್, ಅಂತೆ-ಕಂತೆಗಳಿಗೆ ತೆರೆ

ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನುವ ಅಂತೆ-ಕಂತೆಗಳೀಗೆ ಮಾಜಿ ಮುಖ್ಯಮಂತ್ರಿ , ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್​ ತೆರೆ ಎಳೆದಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸ್ಪಷ್ಟನೆ ನೀಡಿದ ಜಗದೀಶ್ ಶೆಟ್ಟರ್, ಅಂತೆ-ಕಂತೆಗಳಿಗೆ ತೆರೆ
ಜಗದೀಶ್ ಶೆಟ್ಟರ್Image Credit source: File
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jul 26, 2023 | 2:44 PM

ಕೊಪ್ಪಳ, (ಜುಲೈ 26): ಮುಂದಿನ ಲೋಕಸಭೆ ಚುನಾವಣೆಗೆ (Loksabha Poll 2024) ಜಗದೀಶ್ ಶೆಟ್ಟರ್(Jagadish Shettar)​ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. 2024ರಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಣಕ್ಕಿಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದು, ಇದೀಗ ಇದಕ್ಕೆ ಸ್ವತಃ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್​ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ. ಕೊಪ್ಪಳದಲ್ಲಿ ಇಂದು(ಜುಲೈ 26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರು ಏನು ಸೂಚನೆ ಕೊಡುತ್ತಾರೋ ಅದನ್ನು ಪಾಲನೆ ಮಾಡುತ್ತೇನೆ. ಪಕ್ಷ ಏನು ಜವಾಬ್ದಾರಿ ನೀಡುತ್ತೋ‌ ಅದನ್ನ ನಿಭಾಯಿಸುತ್ತೆನೆ. ಲೋಕಸಭೆ ಚುನಾವಣೆಯ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ ಎಂದು ಹೇಳಿದರು. ಈ ಮೂಲಕ ಎಲ್ಲಾ ಅಂತೆ-ಕಂತೆಗಳಿಗೆ ತೆರೆ ಎಳೆದರು.

ಇದನ್ನೂ ಓದಿ: ಆಪರೇಷನ್ ಹಸ್ತ ಚುರುಕು, ಧಾರವಾಡ ಜಿಲ್ಲೆಯಲ್ಲಿ ರಾಜಕೀಯ ಸಂಚಲನ, ಮಾಜಿ ಸಿಎಂ ಯಡಿಯೂರಪ್ಪಗೆ ಆಘಾತ

ರಾಜ್ಯದಲ್ಲಿ ಕನಿಷ್ಠ ಅಂದ್ರೂ 15 ಸ್ಥಾನ ಗೆಲ್ಲುತ್ತೇವೆ. ಅದು 20 ಸ್ಥಾನಕ್ಕೂ ಹೋಗಬಹುದು. ಧಾರವಾಡ ಸೇರಿದಂತೆ ಪಕ್ಷ ಗೆಲ್ಲಿಸುವಂತ ಕೆಲಸ ಮಾಡುತ್ತೇನೆ. ನನಗೆ ಕಾಂಗ್ರೆಸ್ ಪಕ್ಷ ಎಂಎಲ್ ಸಿ ಮಾಡಿ ಗೌರವದಿಂದ ನಡೆಸಿಕೊಳ್ಳುತ್ತಿದೆ. ಇನ್ನು ಹೆಚ್ಚಿನ ಸ್ಥಾನಮಾನ ಕೊಡು್ತತೇನೆ ಎಂದಿದ್ದಾರೆ. ಒಮ್ಮೆ ಸ್ವಾಭಿಮಾನಕ್ಕೆ ಧಕ್ಕೆಯಾಗಿ ಹೊರಬಂದವರು. ಮರಳಿ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ ? 66 ಸ್ಥಾನಗಳಿಗೆ ಸ್ಥಾನಗಳಿಗೆ ಕುಸಿದಿದ್ದಾರೆ. ಓರ್ವ ವಿಪಕ್ಷ ನಾಯಕರನ್ನ ನೇಮಿಸಲು ಆಗುತ್ತಿಲ್ಲ. ಪಕ್ಷದ ರಾಜ್ಯಾಧ್ಯಕ್ಷರ ಅವಧಿ ಮುಗಿದಿದ್ದರೂ ಹೊಸ ಅಧ್ಯಕ್ಷರ ನೇಮಕ ಮಾಡುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಲೀಡರ್ ಗಳೇ ಸಿಗುತ್ತಿಲ್ಲ. ಯಾವ ಪಕ್ಷದಲ್ಲಿಯೂ ಸಿದ್ದಾಂತ, ನೈತಿಕತೆ ಉಳಿದಿಲ್ಲ. ಬಿಜೆಪಿಯವರು ರೌಡಿ ಶೀಟರ್ ಗಳನ್ನ ಎಲೆಕ್ಷನ್ ನಿಲ್ಲಿಸುತ್ತಾರೆ. ಏನು ಉಳಿದಿದೆ ಆ ಪಕ್ಷದಲ್ಲಿ ಎಂದು ಪ್ರಶ್ನಿಸಿದರು.

ಇನ್ನು ಇದೇ ವೇಳೆ ಕೆಲ ಶಾಸಕರು ಸಿಎಂಗೆ ದೂರು ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ಈಗಾಗಲೇ ಅವರೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಕೆಲವರು ನಕಲಿ ಪತ್ರ ಮಾಡಿದ್ದರೆಂದು ಹೇಳಿದ್ದಾರೆ. ಈಗ ಸಿಎಲ್ ಪಿ ಸಭೆ ಕರೆದಿದ್ದಾರೆ. ಅದು ಪಕ್ಷದ ಆಂತರಿಕ ವಿಚಾರ. ಸಭೆ ಆಗಬೇಕಿತ್ತು,ಕೆಲವೊಂದು ಕಾರಣಕ್ಕೆ ಮೂಂದಡಲಾಗಿತ್ತು ಎಂದು ತಿಳಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?