ಇದೇ ಮೊದಲ ಬಾರಿ ಸರ್ಕಾರದ ನೀತಿ ನಿರ್ಧಾರ ಸಮರ್ಥಿಸಲು ಸೇವಾ ಮುಖ್ಯಸ್ಥರು ಮುಂದಾಗಿದ್ದಾರೆ: ಅಗ್ನಿಪಥ್​​ ಬಗ್ಗೆ ಖರ್ಗೆ ವಾಗ್ದಾಳಿ

75 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಸರ್ಕಾರದ ನೀತಿ ನಿರ್ಧಾರವನ್ನು ಸಮರ್ಥಿಸಲು ಸೇವಾ ಮುಖ್ಯಸ್ಥರು ಮುಂದಾಗಿದ್ದಾರೆ. ಅಗ್ನಿಪಥ ಯೋಜನೆ ಬಗ್ಗೆ ಪ್ರಧಾನಿ, ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ಏಕೆ ಮೌನವಾಗಿದ್ದಾರೆ?

ಇದೇ ಮೊದಲ ಬಾರಿ ಸರ್ಕಾರದ ನೀತಿ ನಿರ್ಧಾರ ಸಮರ್ಥಿಸಲು ಸೇವಾ ಮುಖ್ಯಸ್ಥರು ಮುಂದಾಗಿದ್ದಾರೆ: ಅಗ್ನಿಪಥ್​​ ಬಗ್ಗೆ ಖರ್ಗೆ ವಾಗ್ದಾಳಿ
ಮಲ್ಲಿಕಾರ್ಜುನ ಖರ್ಗೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 20, 2022 | 2:48 PM

ದೆಹಲಿ: ಅಗ್ನಿಪಥ್ ಯೋಜನೆಯನ್ನು (Agnipath scheme)  ಹಿಂಪಡೆಯುವುದಿಲ್ಲ ಎಂದು ಸೇನಾಪಡೆಯ ಮುಖ್ಯಸ್ಥರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೋಮವಾರ ಮೋದಿ ಸರ್ಕಾರ (Modi Govt) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಗ್ನಿಪಥ್ ಯೋಜನೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಯೋಜನೆಯ ಪ್ರಯೋಜನ ಮತ್ತು ಅಗ್ನಿವೀರರಿಗೆ ನೀಡುವ ತರಬೇತಿ, ಅನುಕೂಲಗಳ ಬಗ್ಗೆ ವಾಯುಸೇನೆ, ಸೇನಾಪಡೆ ಮತ್ತು ನೌಕಾಪಡೆ ಮುಖ್ಯಸ್ಥರು ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಖರ್ಗೆ, 75 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಸರ್ಕಾರದ ನೀತಿ ನಿರ್ಧಾರವನ್ನು ಸಮರ್ಥಿಸಲು ಸೇವಾ ಮುಖ್ಯಸ್ಥರು ಮುಂದಾಗಿದ್ದಾರೆ. ಅಗ್ನಿಪಥ ಯೋಜನೆ ಬಗ್ಗೆ ಪ್ರಧಾನಿ, ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ಏಕೆ ಮೌನವಾಗಿದ್ದಾರೆ? ಎಂದು ಟ್ವೀಟ್ ಮಾಡಿದ್ದಾರೆ. ಭಾನುವಾರ, ಸೇವಾ ಮುಖ್ಯಸ್ಥರು ಪ್ರತಿಭಟನಾಕಾರರಿಗೆ ಎಚ್ಚರಿಕೆಯನ್ನು ಕಳುಹಿಸಿದ್ದಾರೆ. “ಅಗ್ನಿಪಥ್ ಯೋಜನೆಯ ಮೂಲಕ ಸಶಸ್ತ್ರ ಪಡೆಗಳನ್ನು ಸೇರಲು ಬಯಸುವ ಪ್ರತಿಯೊಬ್ಬ ವ್ಯಕ್ತಿಯು ಯಾವುದೇ ಪ್ರತಿಭಟನೆಯ ಭಾಗವಾಗಿಲ್ಲ ಅಥವಾ ಯಾವುದೇ ಹಿಂಸಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಪ್ರತಿಜ್ಞೆ ಸಲ್ಲಿಸಬೇಕು. ಪೊಲೀಸ್ ಪರಿಶೀಲನೆ ಇಲ್ಲದೆ ಯಾರೂ ಪಡೆಗಳನ್ನು ಸೇರಲು ಸಾಧ್ಯವಿಲ್ಲ. ನಾವು ನಿಬಂಧನೆಗಳನ್ನು ಮಾಡಿದ್ದೇವೆ ಎಂದು ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ಹೇಳಿದ್ದಾರೆ.

ಭಾರತೀಯ ಸಶಸ್ತ್ರ ಪಡೆಗಳ ಅಡಿಪಾಯ ಶಿಸ್ತು. ಅಲ್ಲಿ ಬೆಂಕಿ ಹಚ್ಚಲು ಜಾಗವಿಲ್ಲ. ನಿಮ್ಮ ಕೋಪವನ್ನು ತೋರಿಸಿ ಮಾತುಕತೆಯಲ್ಲಿ ತೊಡಗಿದರೆ ತೊಂದರೆ ಇಲ್ಲ. ಆದರೆ ಬೆಂಕಿ ಹಚ್ಚುವುದು ಮತ್ತು ವಿಧ್ವಂಸಕ ಕೃತ್ಯಗಳಿಗೆ ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
Agnipath Protest: ಅಗ್ನಿಪಥ್ ಯೋಜನೆಯಡಿ ನೇಮಕಗೊಳ್ಳುವ ಅಗ್ನಿವೀರರಿಗೆ ಸ್ಪೆಷಲ್ ಆಫರ್ ನೀಡಿದ ಆನಂದ್ ಮಹೀಂದ್ರಾ
Image
Agnipath Protests: ಅಗ್ನಿಪಥ್ ವಿರೋಧಿಸಿ ಪ್ರತಿಭಟನೆ: ದೇಶದ ವಿವಿಧೆಡೆ 1000 ಮಂದಿ ಬಂಧನ
Image
ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಹೆಚ್ಚು‘ವರಿ’ಯಾದ ಅಭ್ಯರ್ಥಿಗಳು, ಎಲ್ಲರೂ ಕಣದಲ್ಲಿದ್ದಾರೆ! ಮುಂದೇನು?

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಅವರು ಶನಿವಾರ ಗೃಹ ಮತ್ತು ರಕ್ಷಣಾ ಸಚಿವಾಲಯದಲ್ಲಿ ಯೋಜನೆಯ ನೇಮಕಾತಿಗಾಗಿ ಮೀಸಲಾತಿಯನ್ನು ಘೋಷಿಸಿದ್ದಾರೆ. ಹೊಸ ಯೋಜನೆಯು ಸಶಸ್ತ್ರ ಪಡೆಗಳಲ್ಲಿನ ಸರಾಸರಿ ವಯಸ್ಸನ್ನು ತಗ್ಗಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಒತ್ತಿಹೇಳಿದೆ.

ಈ ಹಿಂದೆ ಹೈದರಾಬಾದ್ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೇಂದ್ರದ ಮೇಲೆ ಇದೇ ರೀತಿಯ ವಾಗ್ದಾಳಿ ನಡೆಸಿದ್ದರು. “ದಯವಿಟ್ಟು ಸೇನಾ ಮುಖ್ಯಸ್ಥರ ಹಿಂದೆ ಅಡಗಿಕೊಳ್ಳುವುದನ್ನು ನಿಲ್ಲಿಸಿ ಮಿಸ್ಟರ್ ಮೋದಿ. ನಿಮ್ಮ ಅಜಾಗರೂಕ ನಿರ್ಧಾರದ ಹೊಣೆ ತೆಗೆದುಕೊಳ್ಳುವ ಮತ್ತು ಪರಿಣಾಮಗಳನ್ನು ಎದುರಿಸುವ ಧೈರ್ಯ ತೋರಿಸಿ. ತಮ್ಮ ಭವಿಷ್ಯದ ಬಗ್ಗೆ ದೇಶದ ಯುವಕರ ಕೋಪವು ನಿಮ್ಮನ್ನು ನಿರ್ದೇಶಿಸುತ್ತದೆ ಮತ್ತು ನಿಮಗೆ ಮಾತ್ರ ಎಂದು ಟ್ವೀಟ್ ಮಾಡಿದ್ದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್