ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಅವರು ಇಂದು ಬೆಳಿಗ್ಗೆ ಧ್ವಂಸಗೊಂಡ ಕಚೇರಿಗೆ ಭೇಟಿ ನೀಡಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅರಿವಿನಿಂದ ಈ ಕೃತ್ಯ ಮಾಡಲಾಗಿದೆ.
Ad
ಕೆಎಸ್ಯು ಪ್ರತಿಭಟನೆ
Follow us on
ಕಲ್ಪೆಟ್ಟಾ: ವಯನಾಡ್‌ನಲ್ಲಿರುವ (Wayanad) ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರ ಕಚೇರಿ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾದ (SFI) 19 ಕಾರ್ಯಕರ್ತರನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಲಾಗಿದೆ. ಹೆಚ್ಚಿನ ಬಂಧನ ಸಾಧ್ಯತೆ ಇದೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ. ಬಂಧಿತರೆಲ್ಲರೂ ಸ್ಥಳೀಯ ಎಸ್‌ಎಫ್‌ಐ ಕಾರ್ಯಕರ್ತರು ಎಂದು ಗುರುತಿಸಲಾಗಿದ್ದು, ಸ್ಥಳೀಯ ನ್ಯಾಯಾಲಯ ಅವರನ್ನು ಎರಡು ವಾರಗಳ ಕಾಲ ರಿಮಾಂಡ್‌ಗೆ ಒಪ್ಪಿಸಿದೆ. “ಇದುವರೆಗೆ 19 ಜನರ ಬಂಧನವನ್ನು ದಾಖಲಿಸಲಾಗಿದೆ, ಇನ್ನೂ ಕೆಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಹೆಚ್ಚಿನ ಬಂಧನಗಳು ಇಂದು ನಡೆಯುವ ನಿರೀಕ್ಷೆಯಿದೆ. ಪ್ರಸ್ತುತ ಮಾನಂತವಾಡಿ ಪೊಲೀಸ್ ಉಪಾಧೀಕ್ಷಕರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಅದನ್ನು ಎಡಿಜಿಪಿ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗುವುದು ಎಂದು ಅವರು ಪಿಟಿಐಗೆ ತಿಳಿಸಿದರು. ಏತನ್ಮಧ್ಯೆ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಅವರು ಇಂದು ಬೆಳಿಗ್ಗೆ ಧ್ವಂಸಗೊಂಡ ಕಚೇರಿಗೆ ಭೇಟಿ ನೀಡಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅರಿವಿನಿಂದ ಈ ಕೃತ್ಯ ಮಾಡಲಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ. ಇಲ್ಲಿನ ಕಚೇರಿ ಮೇಲೆ ನಡೆದ ದಾಳಿಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಮಾಜಿ ಆಪ್ತ ಸಿಬ್ಬಂದಿಯೂ ಸೇರಿದ್ದಾರೆ ಎಂದು ಅವರು ಆರೋಪಿಸಿದರು.
Rahul Gandhi Ji has always stood for students issues and the students community from entire country stands with him today.
ಇದನ್ನೂ ಓದಿ
Breaking: ವಯನಾಡ್ನಲ್ಲಿ ರಾಹುಲ್ ಗಾಂಧಿಯ ಕಾಂಗ್ರೆಸ್ ಕಚೇರಿ ಧ್ವಂಸಗೊಳಿಸಿದ ಎಸ್ಎಫ್ಐ ಕಾರ್ಯಕರ್ತರು, 8 ಮಂದಿ ವಶಕ್ಕೆ
ಬೆಂಗಳೂರಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ, ಮೊಹಮ್ಮದ್ ನಲಪಾಡ್ ಮತ್ತು ಪೊಲೀಸರ ನಡುವೆ ಜಟಾಪಟಿ
Rahul Gandhi: ಸುಸ್ತಾಗಿದೆ ಎಂದು ಶೇ. 20ರಷ್ಟು ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರಿಸಲೇ ಇಲ್ಲ ಎಂದ ಇಡಿ; ರಾಹುಲ್ ಹೇಳಿದ್ದೇ ಬೇರೆ ಕತೆ!
“ಕಾಂಗ್ರೆಸ್ ಮತ್ತು ಯುಡಿಎಫ್ ನಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತವೆ. ಕೇರಳದಲ್ಲಿ ಪಿಣರಾಯಿ ಸರ್ಕಾರದ ಸಕ್ರಿಯ ಬೆಂಬಲದೊಂದಿಗೆ ಗೂಂಡಾಗಿರಿ ಬೆಳೆಯುತ್ತಿದೆ” ಎಂದು ಅವರು ಸತೀಶನ್ ಟ್ವೀಟ್ ಮಾಡಿದ್ದಾರೆ.
ಶುಕ್ರವಾರ ರಾಹುಲ್ ಗಾಂಧಿ ಅವರ ಕಚೇರಿ ಎದುರು ಎಸ್‌ಎಫ್‌ಐ ನಡೆಸಿದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿತು, ಕಾರ್ಯಕರ್ತರ ಗುಂಪು ಸಂ ಸದ ರಾಹುಲ್ ಗಾಂಧಿ ಕಚೇರಿಗೆ ನುಗ್ಗಿ ಅದನ್ನು ಧ್ವಂಸಗೊಳಿಸಿತು. ಘಟನೆಯನ್ನು ಮುಖ್ಯಮಂತ್ರಿಗಳು ತೀವ್ರವಾಗಿ ಖಂಡಿಸಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಎಸ್‌ಎಫ್‌ಐ ಕಾರ್ಯಕರ್ತರು ರಾಹುಲ್ ಗಾಂಧಿಯವರ ವಯನಾಡ್ ಕಚೇರಿಯನ್ನು ಧ್ವಂಸಗೊಳಿಸಿದ ಕೆಲವೇ ಗಂಟೆಗಳ ನಂತರ, ಎಡ ಸರ್ಕಾರವು ಶುಕ್ರವಾರ ರಾತ್ರಿ ಎಡಿಜಿಪಿ ಶ್ರೇಣಿಯ ಅಧಿಕಾರಿಯಿಂದ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ವಿಚಾರಣೆಗೆ ವಿಳಂಬ ಮಾಡಿದ ಕಲ್ಪೆಟ್ಟಾ ಉಪ ಪೊಲೀಸ್ ಅಧೀಕ್ಷಕರನ್ನು ಅಮಾನತು ಮಾಡಲಾಗಿದೆ.
ಅರಣ್ಯಗಳ ಸುತ್ತಲಿನ ಬಫರ್ ಝೋನ್‌ಗಳ ವಿಷಯದಲ್ಲಿ ಗಾಂಧಿಯವರು ಮಧ್ಯಪ್ರವೇಶಿಸಿಲ್ಲ ಎಂದು ಆರೋಪಿಸಿ ಎಸ್‌ಎಫ್‌ಐ ಕಾರ್ಯಕರ್ತರು ರಾಹುಲ್ ಗಾಂಧಿ ಕಚೇರಿಗೆ ಮೆರವಣಿಗೆ ನಡೆಸಿದಾಗ ಈ ಘಟನೆ ಸಂಭವಿಸಿದೆ. ಕೇರಳದ ಇಡುಕ್ಕಿ, ವಯನಾಡ್, ಕೊಟ್ಟಾಯಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ, ಜೂನ್ 3 ರಂದು ನೀಡಲಾದ ಸುಪ್ರೀಂಕೋರ್ಟ್ ಆದೇಶದ ವಿರುದ್ಧ ವಿವಿಧ ರಾಜಕೀಯ ಮತ್ತು ರೈತರ ಗುಂಪುಗಳು ಪ್ರತಿಭಟನೆ ನಡೆಸಿದ್ದವು.