ಕಾಂಗ್ರೆಸ್​ನವರು ಪಾರ್ಟ್​ ಟೈಂ ಹಿಂದೂಗಳು: ಪ್ರಹ್ಲಾದ ಜೋಶಿ

ಕೇಂದ್ರ ಸಚಿವ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸುತ್ತಾ, ಕಾಂಗ್ರೆಸ್​ನವರು ಪಾರ್ಟ್​ ​ಟೈಂ ಹಿಂದೂಗಳು. ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ ಪಕ್ಷ. ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಎಂದು ಭವಿಷ್ಯ ಹೇಳಲ್ಲ. ಆದರೆ ನೈತಿಕವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು‌ ಎಂದು ಆಗ್ರಹಿಸಿದರು.

ಕಾಂಗ್ರೆಸ್​ನವರು ಪಾರ್ಟ್​ ಟೈಂ ಹಿಂದೂಗಳು: ಪ್ರಹ್ಲಾದ ಜೋಶಿ
ಸಚಿವ ಪ್ರಹ್ಲಾದ್​ ಜೋಶಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on:Sep 01, 2024 | 2:34 PM

ಹುಬ್ಬಳ್ಳಿ, ಸೆಪ್ಟೆಂಬರ್​ 1: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೋಮವಾರ ಮೈಸೂರಿಗೆ ತೆರಳಲಿದ್ದು, ತಾಯಿ ಚಾಮುಂಡೇಶ್ವರಿ (Chamundeshwari) ಆಶಿರ್ವಾದ ಪಡೆಯಲಿದ್ದಾರೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಮಾತನಾಡಿ, ಕಾಂಗ್ರೆಸ್​ನವರು ಪಾರ್ಟ್​ ಟೈಂ ಹಿಂದೂಗಳು ಎಂದು ಲೇವಡಿ ಮಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ ಪಕ್ಷ ಎಂದು ಆರೋಪ ಮಾಡಿದರು.

ಕಾಂಗ್ರೆಸ್​ನವರಿಗೆ ಕೋರ್ಟ್​​ ಮೇಲೆ ನಂಬಿಕೆ ಇದೆಯೋ ಇಲ್ವೋ ಗೊತ್ತಿಲ್ಲ. ಇದುವರೆಗೂ ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿಲ್ಲ. ಕಾಂಗ್ರೆಸ್​ನವರು ಹೆಚ್​ಡಿ ಕುಮಾರಸ್ವಾಮಿ ಮೇಲೆ ಆರೋಪ ಮಾಡುತ್ತಿದ್ದಾರೆ. 2018ರಲ್ಲಿ ನೀವೇ ಹೆಚ್​ಡಿ ಕುಮಾರಸ್ವಾಮಿ ಅವರ ಕಾಲು ಹಿಡಿದು ಮುಖ್ಯಮಂತ್ರಿ ಮಾಡಿದ್ರಿ, ಇವಾಗ ನಿಮಗೆ ಜ್ಞಾನೋದಯ ಆಯ್ತಾ‌ ಎಂದು ವಾಗ್ದಾಳಿ ಮಾಡಿದರು.

ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಎಂದು ಭವಿಷ್ಯ ಹೇಳಲ್ಲ. ಆದರೆ ನೈತಿಕವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು‌ ಎಂದು ಆಗ್ರಹಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಮನೆಗೆ ಹೋಗಲೆಂದು ಕಾಂಗ್ರೆಸ್​ನಲ್ಲೇ ಕಾಯುತ್ತಿದ್ದಾರೆ: ಪ್ರಲ್ಹಾದ್ ಜೋಶಿ

ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡ್ತಿದ್ದಾರೆ: ನಿರಾಣಿ

ತಮ್ಮ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬೇಕೆಂದು ಕಾಂಗ್ರೆಸ್​ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿರುವ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಮುರಗೇಶ್​ ನಿರಾಣಿ, ರಾಜ್ಯಪಾಲರಿಗೆ ಮನವಿ ಮಾಡುವಂತಹ ತಪ್ಪೇನು ಆಗಿಲ್ಲ. ಸಿಎಂ ಸಿದ್ದರಾಮಯ್ಯ ವಕೀಲರು, 50 ವರ್ಷ ರಾಜಕೀಯ ಅನುಭವವಿದೆ. ಹಾಗೆ ಡಿ.ಕೆ.ಶಿವಕುಮಾರ್​ ಮುಖ್ಯಮಂತ್ರಿ ಆಗುವ ಕನಸು ಕಂಡವರು. ಅವರಿಗೆ 40 ವರ್ಷದ ರಾಜಕೀಯದ ಅನುಭವವಿದೆ. ಏನು ವಿಷಯ ಅಂತಾ ಇಲ್ಲಿವರೆಗೂ ಒಬ್ಬರಾದರೂ ಹೇಳಿದ್ದಾರಾ? ಆದರೆ ಯಾವ ವಿಷಯಕ್ಕೆ ಪ್ರಾಸಿಕ್ಯೂಷನ್​ಗೆ ಅನುಮತಿ ‌ಕೊಡಬೇಕು. ಸರ್ಕಾರಕ್ಕೆ ಏನು ನಷ್ಟ ಆಗಿದೆ ಅಂತಾ ಸ್ಪಷ್ಟೀಕರಣ ಕೊಡಬೇಕಲ್ವಾ? ಏನೂ ಇಲ್ಲದೆ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:31 pm, Sun, 1 September 24