AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿದೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಮೂರು ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ.

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ
ಬಿಜೆಪಿಯ ತಂತ್ರಗಾರಿಕೆಗೆ ಪ್ರತಿತಂತ್ರ ಹೆಣೆದ ಕಾಂಗ್ರೆಸ್
TV9 Web
| Edited By: |

Updated on:Oct 24, 2022 | 9:55 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ. ಈ ಮೂರು ಸಮಯದಾಯದ ಮತ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಕಾಂಗ್ರೆಸ್, ಸಮಾವೇಶ ಆಯೋಜನೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ. ದಲಿತ ಸಮಾವೇಶ ಆಯೋಜನೆಗೂ ಭರದ ಸಿದ್ಧತೆ ನಡೆಯುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ ಕೌಂಟರ್ ನೀಡಲು ಪ್ರತ್ಯೇಕ ಎಸ್​ಟಿ ಸಮಾವೇಶ ನಡೆಸಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್​ಟಿ ಸಮಾವೇಶ ಆಯೋಜನೆಗೆ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದ್ದು, ಆ ಮೂಲಕ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ನೀಡಲು ಕೈ ನಾಯಕರು ಮುಂದಾಗಿದ್ದಾರೆ. ಮಧ್ಯ ಕರ್ನಾಟಕ ಭಾಗದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಆಯೋಜನೆಗೆ ಚಿಂತನೆ ನಡೆಸಲಾಗಿದೆ. ಇದಕ್ಕೂ‌ ಮೊದಲು ಹಿಂದುಳಿದ ವರ್ಗದ ನಾಯಕರ ರಾಜ್ಯ ಪ್ರವಾಸವೂ ನಡೆಯಲಿದ್ದು, ಆ ಮೂಲಕ ಎಸ್​ಸಿ, ಎಸ್​ಟಿ ಮತ್ತು ಓಬಿಸಿ ಸಮುದಾಯವನ್ನು ತಲುಪಲು ಕಾಂಗ್ರೆಸ್ ಕಸರತ್ತು ನಡೆಸಲಿದೆ. ಇದರೊಂದಿಗೆ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ದಲಿತ ಸಮಾವೇಶವನ್ನು ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಎಸ್​ಸಿ ಎಸ್​ಟಿ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾದ ಬೆನ್ನಲ್ಲೆ ಇದರ ಲಾಭ ಪಡೆದುಕೊಳ್ಳಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ನ.6ರಂದು ರಾಜ್ಯಮಟ್ಟದ ಬೃಹತ್ ಎಸ್​ಟಿ ಸಮಾವೇಶವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮೂಲಕ ಮೀಸಲಾತಿ ಹೆಚ್ಚಳ ಮಾಡಿರುವುದು ಬಿಜೆಪಿ ಎಂಬ ಮಾಹಿತಿಯನ್ನು ಮನೆ ಮನೆಗೆ ‌ಮುಟ್ಟಿಸಲು‌ ಯೋಜನೆ ರೂಪಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Mon, 24 October 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ