ಅ.4ರಂದು ಕರ್ನಾಟಕಕ್ಕೆ ಕಾಂಗ್ರೆಸ್ ಅಧಿನಾಯಕಿ, ಪುತ್ರನ ಯಾತ್ರೆಯಲ್ಲಿ ಹೆಜ್ಜೆ ಹಾಕಲಿರುವ ಸೋನಿಯಾ ಗಾಂಧಿ
ಮಗನಿಗೆ ಸಾಥ್ ನೀಡಲು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ಬೆಂಗಳೂರು: ಪಕ್ಷವನ್ನು ಮತ್ತೆ ಸಂಘಟಿಸಲು ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ(Bharat Jodo Yatra) ಇದೀಗ ಕರ್ನಾಟಕ ಪ್ರವೇಶ ಮಾಡಿದ್ದು, ಯಾತ್ರೆಗೆ ಅಭೂತಪೂರ್ವ ಜನ ಸ್ಪಂದನೆ ಸಿಗುತ್ತಿದೆ. ಇದೀಗ ಮಗನಿಗೆ ಸಾಥ್ ನೀಡಲು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.
ಹೌದು…ಸೋನಿಯಾ ಗಾಂಧಿ (Sonia Gandhi) ಅವರು ಅಕ್ಟೋಬರ್ 4 ರಂದು ಬೆಳಿಗ್ಗೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಕ್ಟೋಬರ್ 6ರಂದು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುಲಿದ್ದು, ಸಾಂಕೇತಿಕವಾಗಿ ಕೆಲ ಕಾಲ ಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Mallikarjun Kharge: ಕಾಂಗ್ರೆಸ್ ಪಾಲಿನ ನಾಟೌಟ್ ಬ್ಯಾಟ್ಸ್ಮನ್ ಮಲ್ಲಿಕಾರ್ಜುನ ಖರ್ಗೆ
ಅದಕ್ಜೂ ಮೊದಲು ಅ. 4, 5ರಂದು ಕೊಡಗು ಭಾಗದ ರೆಸಾರ್ಟ್ವೊಂದರಲ್ಲಿ ವಾಸ್ತವ್ಯ ಮಾಡಲಿದ್ದಾರೆ. ದಸರಾ ಹಬ್ಬ ಹಿನ್ನೆಲೆಯಲ್ಲಿ ಯಾತ್ರೆಗೆ ಎರಡು ದಿನ ಯಾತ್ರೆಗೆ ಬಿಡುವು ಇರುವುದರಿಂದ ಅ. 4, 5ರಂದು ರೆಸಾರ್ಟ್ನಲ್ಲಿ ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರೊಂದಿಗೆ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ರೆಸಾರ್ಟ್‌ಗೆ ಸಿಆರ್‌ಪಿಎಫ್ ಸಿಬ್ಬಂದಿಯಿಂದ ಭದ್ರತೆ ನೀಡಲಾಗಿದ್ದು, ಭದ್ರತಾ ಜವಾಬ್ದಾರಿಯನ್ನು ಸರ್ಕಾರ, ಚಿಕ್ಕಮಗಳೂರು ಎಸ್ ಪಿಗೆ ವಹಿಸಿದೆ.
ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡುವೆಯೂ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:24 pm, Sun, 2 October 22