ಕೊಪ್ಪಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಖಂಡನೆ ವ್ಯಕ್ತವಾಗಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು (ಅಕ್ಟೋಬರ್ 22) ಕೊಪ್ಪಳ ಕಾಂಗ್ರೆಸ್ ಮಹಿಳಾ ಘಟಕದಿಂದ ನಳಿನ್ ಕುಮಾರ್ ಕಟೀಲ್ ಹೇಳಿಕೆ ವಿರೋಧಿಸಿ ಪ್ರತಿಭಟನೆ ಮಾಡಲಾಗಿದೆ. ಕಟೀಲ್ ಬಾಯಿ ತೊಳೆದುಕೊಳ್ಳಲು ಕಾಂಗ್ರೆಸ್ ಮಹಿಳಾ ಘಟಕದಿಂದ ಫಿನಾಯಿಲ್ ರವಾನೆ ಮಾಡಲಾಗಿದೆ. ಕಾಂಗ್ರೆಸ್ ಮಹಿಳಾ ಘಟಕದಿಂದ ಕಟೀಲ್ಗೆ ಸ್ಪೀಡ್ ಪೋಸ್ಟ್ ಮೂಲಕ ಫಿನಾಯಿಲ್ ರವಾನೆ ಮಾಡಲಾಗಿದೆ.
ನಳಿನ್ ಕುಮಾರ್ ನಿಮ್ಮ ಹೊಲಸು ಬಾಯಿ ತೊಳೆದುಕೊಳ್ಳಿ ಎಂದು ಮಹಿಳಾ ಕಾಂಗ್ರೆಸ್ ಘಟಕದವರು ಪ್ರತಿಭಟನೆ ಮಾಡಿದ್ದಾರೆ. ಜ್ಯೋತಿ ಗೊಂಡಬಾಳ ನೇತೃತ್ವದಲ್ಲಿ ವಿನೂತನ ಪ್ರತಿಭಟನೆ ಮಾಡಲಾಗಿದೆ. ‘ರಾಹುಲ್ ಗಾಂಧಿ ಡ್ರಗ್ಸ್ ಅಡಿಕ್ಟ್, ಪೆಡ್ಲರ್ ಎಂದು ವರದಿ’ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆಗೆ ಕಳೆದ ಎರಡು ಮೂರು ದಿನಗಳಿಂದ ಖಂಡನೆ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಯುವ ಕಾರ್ಯಕರ್ತರು ಅಕ್ಟೋಬರ್ 20ರಂದು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಯುವ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಕಚೇರಿಗೆ ತೆರಳಿ ಪ್ರತಿಭಟಿಸಲು ಮುಂದಾಗಿದ್ದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಸಂಪಿಗೆ ರೋಡ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಕೈ ಕಾರ್ಯಕರ್ತರು, ನಳಿನ್ ಕುಮಾರ್ ಕಟೀಲು ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಂದ ಕಟೀಲು ವಿರುದ್ಧ ಘೋಷಣೆ ಕೂಗಲಾಗಿತ್ತು.
ಇದನ್ನೂ ಓದಿ: ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಅನಿಸುತ್ತಿದೆ: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆ
ಇದನ್ನೂ ಓದಿ: ಬಿಜೆಪಿ ಸರ್ಕಾರ ಇರುವುದರಿಂದ ಎತ್ತುಗಳು ಉಳಿದಿವೆ: ಕಾಂಗ್ರೆಸ್ ಪ್ರತಿಭಟನೆಗೆ ನಳಿನ್ ಕುಮಾರ್ ಕಟೀಲ್ ತಿರುಗೇಟು
Published On - 4:41 pm, Fri, 22 October 21