ಸಿದ್ದರಾಮಯ್ಯರನ್ನು ಸೋಲಿಸಲು ಕಾಂಗ್ರೆಸ್​​ನಲ್ಲೇ ತಂಡ ಸಿದ್ಧವಾಗಿದೆ; ಹೆಚ್​​​ಡಿ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಲು ಅವರ ಪಕ್ಷದಲ್ಲೇ ತಂಡ ಸಿದ್ಧವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್​​​ಡಿ ಕುಮಾರಸ್ವಾಮಿ ಹೇಳಿದ್ದಾರೆ.

Follow us
Ganapathi Sharma
|

Updated on:Mar 22, 2023 | 3:46 PM

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಲು ಅವರ ಪಕ್ಷದಲ್ಲೇ ತಂಡ ಸಿದ್ಧವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್​​​ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದಷ್ಟು ನೋವು ಅನುಭವಿಸಿದವರು ಸಿದ್ದರಾಮಯ್ಯ ಅವರನ್ನು ಸೋಲಿಸಲು ಪ್ರಯತ್ನಿಸಬಹುದು. ರಾಷ್ಟ್ರೀಯ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗೆ ಕ್ಷೇತ್ರ ಸಿಗುತ್ತಿಲ್ಲ ಅಂದರೆ ಏನರ್ಥ? ಅವರಿಗೆ ಇಂಥ ಸ್ಥಿತಿ ಬರಬಾರದಿತ್ತು. ಈ ರೀತಿ ಗೊಂದಲ ಸೃಷ್ಟಿ ಮಾಡಿದ್ದು ಅವರ ಪಕ್ಷದವರೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಕ್ಷೇತ್ರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಚ್​​​ಡಿಕೆ, ಅವರ ಪಕ್ಷದಲ್ಲೇ ಅವರನ್ನು ರಾಜಕೀಯವಾಗಿ ಮುಗಿಸುವ ಪರಿಸ್ಥಿತಿ ಬಂದಿದೆ ಎಂದಿದ್ದಾರೆ.

ಮಾರ್ಚ್ 26ಕ್ಕೆ ಜೆಡಿಎಸ್ ಎರಡನೇ ಪಟ್ಟಿ

ಮಾರ್ಚ್ 26ರಂದು ಜೆಡಿಎಸ್​ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ ಎಂದೂ ಕುಮಾರಸ್ವಾಮಿ ತಿಳಿಸಿದರು. ಎರಡೂ ರಾಷ್ಟ್ರೀಯ ಪಕ್ಷಗಳಿಗಿಂತ ಜೆಡಿಎಸ್ ಏನೂ ಕಡಿಮೆ ಇಲ್ಲ, ಕಳಪಯೂ ಅಲ್ಲ. ​​ 123 ಸೀಟ್ ಗೆಲ್ಲುವ ಗುರಿ ಇಟ್ಟುಕೊಂಡು ಜನರ ಬಳಿ ಹೋಗ್ತಿದ್ದೇವೆ. 15ರಿಂದ 16 ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್​​ ಪಕ್ಷಕ್ಕೆ ಸಮಸ್ಯೆ ಇದೆ. ಅಂತಹ ಕ್ಷೇತ್ರದಲ್ಲಿ ಬೇರೆ ಪಕ್ಷದಿಂದ ಬರುತ್ತಾರೆ ನೋಡೋಣ. ರಾಷ್ಟ್ರೀಯ ಪಕ್ಷದಿಂದ ಕೆಲವರು ಜೆಡಿಎಸ್ ಪಕ್ಷಕ್ಕೆ ಬರಲಿದ್ದಾರೆ. ಇದುವರೆಗೂ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಘೋಷಣೆ ಆಗಿಲ್ಲ. ಹೀಗಾಗಿ 15 ಕ್ಷೇತ್ರಗಳಲ್ಲಿ ಜೆಡಿಎಸ್​ಗೆ ಯಾರಾದರೂ ಬರಬಹುದು ಎಂದು ಹೆಚ್​ಡಿಕೆ ಮತ್ತೊಂದು ಬಾಂಬ್ ಸಿಡಿಸಿದರು.

ಇದನ್ನೂ ಓದಿ: Siddaramaiah: ಬಾದಾಮಿ, ಕೋಲಾರ, ವರುಣಾ ನನ್ನ ಆಯ್ಕೆ ಎಂದ ಸಿದ್ದರಾಮಯ್ಯ; ನಾಳೆಯೇ ಗೊಂದಲಕ್ಕೆ ತೆರೆ?

ಯುಗಾದಿ ಹಬ್ಬದ ಜೊತೆಗೆ ಚುನಾವಣೆ ಹಬ್ಬವೂ ಜೋರಾಗಿ ನಡೆಯುತ್ತಿದೆ. ಆ ಹಬ್ಬಕ್ಕೂ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಈ ಹಿಂದೆ ಹೇಳಿದಂತೆ 26ರಂದು ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ ಇದೆ. ಅದಕ್ಕೆ ತಯಾರಿ ನಡೆದಿದೆ ಎಂದೂ ಹೆಚ್​ಡಿಕೆ ತಿಳಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Wed, 22 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ