ಹೆಚ್​ಡಿಕೆ ನಿವಾಸದ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ: ಗೃಹಜ್ಯೋತಿಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ ಎಂದ ಕಾಂಗ್ರೆಸ್

|

Updated on: Nov 14, 2023 | 12:34 PM

Kumaraswamy illegal electricity connection: ನಿನ್ನೇ ಅಷ್ಟೇ ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ದಾಳಿ ​ನಡೆಸಿದ್ದರು. ಆದ್ರೆ, ಇದೀಗ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್​ ಸಂಪರ್ಕ ಪಡೆಯಲಾಗಿದೆ. ಈ ಬಗ್ಗೆ ಕಾಂಗ್ರೆಸ್​ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ.

ಹೆಚ್​ಡಿಕೆ ನಿವಾಸದ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ: ಗೃಹಜ್ಯೋತಿಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ ಎಂದ ಕಾಂಗ್ರೆಸ್
Follow us on

ಬೆಂಗಳೂರು, (ನವೆಂಬರ್ 14): ನಿನ್ನೆಯಷ್ಟೇ ವಿದ್ಯುತ್ ಸಮಸ್ಯೆ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ವಾಗ್ದಾಳಿ ನಡೆಸಿದ್ದರು. ಆದ್ರೆ, ಇದೀಗ ಮನೆಗೆ ವಿದ್ಯುತ್ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್​ ಸಂಪರ್ಕ ಪಡೆದ(illegal electricity connection )ಆರೋಪ ಕೇಳಿಬಂದಿದೆ. ಹೌದು…ಇಂದು ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ನಿವಾಸಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಆದ್ರೆ, ವಿದ್ಯುತ್​ ಅನ್ನು ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನು ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಟೀಕಿಸಿ ವಿಡಿಯೋ ಬಿಡುಗಡೆ ಮಾಡಿದೆ.

ಇದನ್ನೂ ಓದಿ:ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ: ಸತ್ಯ ಒಪ್ಪಿಕೊಂಡ ಕುಮಾರಸ್ವಾಮಿ ಹೇಳಿದ್ದಿಷ್ಟು! 


ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ ಎಂದು ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದೆ.

ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು “ಬರ” ಎದುರಿಸುತ್ತಿದ್ದೀರಾ? ಅದೇನೋ ಪತ್ರಿಕಾಗೋಷ್ಠಿ ನಡೆಸಿ “ಕರ್ನಾಟಕ ಕತ್ತಲಲ್ಲಿದೆ“ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ? ಎಂದು ಪ್ರಶ್ನಿಸಿದೆ.

ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಕಾಂಗ್ರೆಸ್​ ಕುಮಾರಸ್ವಾಮಿಗೆ ತಿರುಗೇಟು ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:51 am, Tue, 14 November 23