AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರು ಬರಗಾಲ ಎದುರಿಸುತ್ತಿರುವುದಕ್ಕೆ ಇದು ನಿದರ್ಶನ: ವಿಪಕ್ಷ ನಾಯಕರಾಗಿ ಆರ್​.ಅಶೋಕ್​ ಆಯ್ಕೆಗೆ ಕಾಂಗ್ರೆಸ್ ಲೇವಡಿ

ಕರ್ನಾಟಕದ ಪ್ರತಿಪಕ್ಷ ನಾಯಕರನ್ನಾಗಿ ಶಾಸಕ ಆರ್​ ಅಶೋಕ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೊನೆಗೂ ಆಯ್ಕೆ ಮಾಡಲಾಗಿದೆ. ಸದ್ಯ ಈ ವಿಚಾರವಾಗಿ ಕಾಂಗ್ರೆಸ್​ ಟ್ವೀಟ್​ ಮಾಡಿದ್ದು, ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ಆರ್​.ಅಶೋಕ್​ ಆಯ್ಕೆಗೆ ಕಾಂಗ್ರೆಸ್ ಲೇವಡಿ​ ಮಾಡಿದೆ.

ಬಿಜೆಪಿ ನಾಯಕರು ಬರಗಾಲ ಎದುರಿಸುತ್ತಿರುವುದಕ್ಕೆ ಇದು ನಿದರ್ಶನ: ವಿಪಕ್ಷ ನಾಯಕರಾಗಿ ಆರ್​.ಅಶೋಕ್​ ಆಯ್ಕೆಗೆ ಕಾಂಗ್ರೆಸ್ ಲೇವಡಿ
ವಿರೋಧ ಪಕ್ಷದ ನಾಯಕ ಆರ್​.ಅಶೋಕ್​
ಗಂಗಾಧರ​ ಬ. ಸಾಬೋಜಿ
|

Updated on:Nov 17, 2023 | 9:26 PM

Share

ಬೆಂಗಳೂರು, ನವೆಂಬರ್ 17: ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆರ್​.ಅಶೋಕ್ (R. Ashok)​ ಆಯ್ಕೆಗೆ ಕಾಂಗ್ರೆಸ್ ಲೇವಡಿ​ ಮಾಡಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್​, ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ ಎಂದು ವ್ಯಂಗ್ಯ ಮಾಡಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ತಂದು ಕೂರಿಸಿದೆ ಬಿಜೆಪಿ ಎಂದು ಕಾಂಗ್ರೆಸ್​ ಆಡಿಕೊಂಡಿದೆ.

ಕಾಂಗ್ರೆಸ್​ ಟ್ವೀಟ್​

ರಾಜ್ಯಕ್ಕೆ ವಿರೋಧ ಪಕ್ಷದ ನಾಯಕನನ್ನು ಕೊಡಿ ಎಂದರೆ ವಿರೋಧ ಪಕ್ಷವನ್ನೇ ವಿರೋಧಿಸುವ ನಾಯಕರನ್ನು ಬಿಜೆಪಿ ಕೊಡುತ್ತಿದೆ. ಯಾವುದೇ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೂ ಕಿತ್ತಾಡದಷ್ಟು ಬಿಜೆಪಿಯ ಕಿತ್ತಾಟ ಜೋರಾಗಿದೆ.

ಇದನ್ನೂ ಓದಿ: ಬಿವೈ ವಿಜಯೇಂದ್ರ, ನಾನು ಜೋಡೆತ್ತುಗಳಾಗಿ ಕೆಲಸ ಮಾಡುತ್ತೇವೆ: ವಿರೋಧ ಪಕ್ಷದ ನಾಯಕ ಆರ್​​ ಅಶೋಕ್

ಬಿಜೆಪಿ ನಾಯಕರು ಸೇರುವ ಜಾಗದಲ್ಲಿ ಕೋಲು, ದೊಣ್ಣೆ ಹಾಗೂ ಇತರೆ ಯಾವುದೇ ಆಯುಧವಾಗಿ ಬಳಸಬಹುದಾದ ವಸ್ತುಗಳನ್ನು ದೊರಕದಂತೆ ನೋಡಕೊಳ್ಳಬೇಕು. ಅಕಸ್ಮಾತ್ ಹೊಡೆದಾಡಿಕೊಂಡರೆ ಆಸ್ಪತ್ರೆಗಳಲ್ಲಿ ನೂಕುನುಗ್ಗಲಾಗುವ ಸಾಧ್ಯತೆ ಇರುತ್ತದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಇದನ್ನೂ ಓದಿ: ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆರ್ ಅಶೋಕ ಆಯ್ಕೆಗೆ ಅಸಲಿ ಕಾರಣಗಳೇನು? ಇಲ್ಲಿದೆ ವಿವರ

ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ 6 ತಿಂಗಳು ಕಳೆದ ಮೇಲೆ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಜ್ಞಾನೋದಯವಾದಂತಿದೆ. ಈ ವಿಳಂಬಕ್ಕೆ ವ್ಯವಹಾರ ಕುದುರದಿರುವುದೇ ಕಾರಣವೇ ಎಂದು ಕಾಂಗ್ರೆಸ್​ ಪ್ರಶ್ನೆ ಮಾಡಿದೆ.

ವಿಪಕ್ಷ ನಾಯಕನ ಸ್ಥಾನಕ್ಕೆ ಇರುವ ಹರಾಜಿನ ಬೆಲೆ ಇದುವರೆಗೂ ಬಿಜೆಪಿಯ ಬಂಡಾಯ ನಾಯಕರು ಬಹಿರಂಗ ಪಡಿಸಿಲ್ಲ. ಮೊದಲು ಬಹಿರಂಗ ಪಡಿಸುವ ಬಿಜೆಪಿಯ ಬಂಡಾಯ ನಾಯಕರಿಗೆ ಕಾಂಗ್ರೆಸ್ ಪಕ್ಷದಿಂದ ಬಹುಮಾನ ನೀಡಲಾಗುವುದು. ಬಿಎಸ್​ ಯಡಿಯೂರಪ್ಪ ಮತ್ತು ಸಂತೋಷ್ ಗುಂಪುಗಳಿಗೆ ಮಾಹಿತಿ ನೀಡದೆ ಗೌಪ್ಯತೆ ಕಾಪಾಡಲಾಗುವುದು ಎಂದು ವಾಗ್ದಾಳಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:20 pm, Fri, 17 November 23

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್