Karnataka Elections: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ರಚನೆ

|

Updated on: Feb 07, 2023 | 9:46 AM

Congress Screening Committee- ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಪಕ್ಷ ಸ್ಕ್ರೀನಿಂಗ್ ಕಮಿಟಿ ರಚಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಕಮಿಟಿಯ ಸಂವಿಧಾನಕ್ಕೆ ಅನುಮೋದನೆ ಕೊಟ್ಟಿದ್ದಾರೆ. ಕಾಂಗ್ರೆಸ್ ಚುನಾವಣಾ ಸಮಿತಿ ಶಾರ್ಟ್​ಲಿಸ್ಟ್ ಮಾಡುವ ಅಭ್ಯರ್ಥಿಗಳನ್ನು ಪರಿಶೀಲಿಸಿ ಪಟ್ಟಿ ಅಂತಿಮಗೊಳಿಸುತ್ತದೆ.

Karnataka Elections: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ರಚನೆ
ಕಾಂಗ್ರೆಸ್​
Follow us on

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ  ಪರಿಶೀಲನಾ ಸಮಿತಿ) ರಚಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೋಹನ್ ಪ್ರಕಾಶ್ ಈ ಸ್ಕ್ರೀನಿಂಗ್ ಕಮಿಟಿಗೆ ಅಧ್ಯಕ್ಷರಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಸೋಮವಾರ ಈ ಕಮಿಟಿಗೆ ಅನುಮೋದನೆ ನೀಡಿದ್ದಾರೆ.

ಸಂಸದರಾದ ನೀರಜ್ ದಾಂಗಿ, ಮೊಹಮ್ಮದ್ ಜಾವೇದ್ ಮತ್ತು ಸಪ್ತಗಿರಿ ಉಲಕ ಅವರು ಸ್ಕ್ರೀನಿಂಗ್ ಕಮಿಟಿ (Screening Committee) ಸದಸ್ಯರಾಗಿದ್ದಾರೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು ಈ ಕಮಿಟಿಯ ಪದನಿಮಿತ್ಯ (Ex Officio Members) ಸದಸ್ಯರಾಗಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ:

ಅಧ್ಯಕ್ಷ: ಮೋಹನ್ ಪ್ರಕಾಶ್

ಸದಸ್ಯರು: ನೀರಜ್ ದಾಂಗಿ, ಮೊಹಮ್ಮದ್ ಜಾವೇದ್ ಮತ್ತು ಸಪ್ತಗಿರಿ ಉಲಕ

ಪದನಿಮಿತ್ಯ ಸದಸ್ಯರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಬಿ.ಕೆ. ಹರಿಪ್ರಸಾದ್, ಎಂ.ಬಿ. ಪಾಟೀಲ, ಡಾ. ಜಿ ಪರಮೇಶ್ವರ್, ರಂದೀಪ್ ಸುರ್ಜೆವಾಲ.

ಇದನ್ನೂ ಓದಿ: Fact Check: ಕರ್ನಾಟಕ ವಿಧಾನಸಭಾ ಚುನಾವಣಾ ವೇಳಾಪಟ್ಟಿ ವೈರಲ್, ಇಲ್ಲಿದೆ ಸತ್ಯಾಸತ್ಯತೆ

ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ರಾಜಸ್ಥಾನದ ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದು, ಒಂದು ಬಾರಿ ಶಾಸಕರಾಗಿಯೂ ಆಯ್ಕೆಯಾಗಿದ್ದವರು. ಇವರು ಎಐಸಿಸಿಯ ಪ್ರಧಾನ ಕಾರ್ಯದರ್ಶಿಯೂ ಹೌದು.

ಇನ್ನು, ಕಮಿಟಿ ಸದಸ್ಯರಾದ ನೀರಜ್ ದಾಂಗಿ ಕೂಡ ರಾಜಸ್ಥಾನದವರು. ರಾಜ್ಯಸಭಾ ಸಂಸದರಾಗಿರುವ ಅವರು ಕರ್ನಾಟಕದ ಸುರತ್ಕಲ್​ನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡಿದವರು. ಮತ್ತೊಬ್ಬ ಸದಸ್ಯ ಮೊಹಮ್ಮದ್ ಜಾವೇದ್ ಬಿಹಾರದ ಲೋಕಸಭಾ ಸದಸ್ಯರಾಗಿದ್ದಾರೆ. ಇನ್ನು ಸಪ್ತಗಿರಿ ಶಂಕರ್ ಉಲಕ ಲೋಕಸಭಾ ಸಂಸದರಾಗಿದ್ದು, ಒಡಿಶಾದ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಹೇಗೆ?

ರಾಜ್ಯದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ. ಐದು ದಿನಗಳ ಹಿಂದೆ, ಅಂದರೆ ಫೆಬ್ರುವರಿ 2ರಂದು ಅಭ್ಯರ್ಥಿಗಳ ಆಯ್ಕೆಗೆ ಕರ್ನಾಟಕ ಪ್ರದೇಶ ಚುನಾವಣಾ ಸಮಿತಿ ಸಭೆ ಸೇರಿತ್ತು. ಸಮಿತಿಯು ಅಭ್ಯರ್ಥಿಗಳ ಶಾರ್ಟ್​ಲಿಸ್ಟ್ ಮಾಡುತ್ತದೆ. ಸ್ಕ್ರೀನಿಂಗ್ ಕಮಿಟಿ ಅಂತಿಮ ಪಟ್ಟಿ ಮಾಡುತ್ತದೆ. ಸದ್ಯ ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ 100ಕ್ಕೂ ಹೆಚ್ಚು ಅಭ್ಯರ್ಥಿಗಳಿರುವ ಮೊದಲ ಪಟ್ಟಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ.

Published On - 9:46 am, Tue, 7 February 23