ಹೊಂದಾಣಿಕೆ ರಾಜಕಾರಣದ ಗದ್ದಲದ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ, ಬೊಮ್ಮಾಯಿ ರಹಸ್ಯ ಸಭೆ

ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಹೊಂದಾಣಿಕೆ ರಾಜಕಾರಣದ ಕುರಿತಾಗಿ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಹಸ್ಯ ಭೇಟಿ ಮಾಡಿದ್ದು, ಭಾರೀ ಸಂಚನ ಮೂಡಿಸಿದೆ.

ಹೊಂದಾಣಿಕೆ ರಾಜಕಾರಣದ ಗದ್ದಲದ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ, ಬೊಮ್ಮಾಯಿ ರಹಸ್ಯ ಸಭೆ
Follow us
|

Updated on: Jun 14, 2023 | 12:13 PM

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಹೊಂದಾಣಿಕೆ ರಾಜಕಾರಣದ ಕುರಿತಾಗಿ ಬಿಜೆಪಿಯ ಇಬ್ಬರು ನಾಯಕರ ಹೇಳಿಕೆಗಳು ಕಮಲ ಪಾಳಯದಲ್ಲಿ ತಳಮಳ ಸೃಷ್ಟಿಸಿದೆ. ಪ್ರತಿಪಕ್ಷದ ನಾಯಕನ ಆಯ್ಕೆ ಸಂದರ್ಭದಲ್ಲೇ ಸ್ವಪಕ್ಷೀಯರ ಸ್ಫೋಟಕ ಹೇಳಿಕೆಗಳು ಪಕ್ಷದ ನಾಯಕರಿಗೂ ಮುಜುಗರ ತಂದೊಡಿದ್ದು, ಬಿಜೆಪಿ ಆಂತರಿಕ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಸಂಸದ ಪ್ರತಾಪ ಸಿಂಹ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನೀಡಿರುವ ಹೇಳಿಕೆ ಯಾರನ್ನು ಉದ್ದೇಶಿಸಿ ಎಂಬ ಪ್ರಶ್ನೆಯೂ ಇದೀಗ ಉದ್ಭವಿಸಿದೆ. ಇದರ ಮಧ್ಯೆ ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೆಸಾರ್ಟ್​ವೊಂದರಲ್ಲಿ ರಹಸ್ಯ ಸಭೆ ಮಾಡಿದ್ದು, ರಾಜ್ಯ ರಾಜಕಾರಣಲ್ಲಿ ಮತ್ತಷ್ಟು ಸಂಚಲನ ಮೂಡಿಸಿದೆ.

ಹೌದು…ಕಾಂಗ್ರೆಸ್​ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬೊಮ್ಮಾಯಿ ಅವರು ನಿನ್ನೆ(ಜೂನ್ 13) ದಾವಣಗೆರೆ ಹೊರವಲಯದ ಖಾಸಗಿ ರೆಸಾರ್ಟ್​ನಲ್ಲಿ ಭೇಟಿ ಮಾಡಿದ್ದು, 25 ನಿಮಿಷಗಳ ಕಾಲ ರಹಸ್ಯ ಮಾತುಕತೆ ಮಾಡಿದ್ದಾರೆ. ನಿನ್ನೆ ಸಂಜೆ ಶಾಮನೂರು ಶಿವಶಂಕರಪ್ಪ ಅವರನ್ನ ಬೊಮ್ಮಾಯಿ ಅವರು ದಾವಣಗೆರೆ ನಗರದ ಹೊರವಲಯದ ಪುಣೆ ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಿರುವ ಅಪೂರ್ವ ರೆಸಾರ್ಟ್​ಗೆ ಕರೆಸಿಕೊಂಡು ಗುಪ್ತ್​-ಗುಪ್ತ್​ ಸಭೆ ಮಾಡಿದ್ದಾರೆ. ಉಭಯ ನಾಯಕರ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ನಿನ್ನೆ ದಾವಣಗೆರೆಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿ ಪಕ್ಷ ಸೋಲಿಸಿದ್ದೀರಿ ಎಂದು ಆಕ್ರೋಶ ವ್ಯಕ್ತವಾಗಿತ್ತು. ರಾಜ್ಯದ ಜಿಲ್ಲಾ ನಾಯಕರ ವಿರುದ್ಧ ಕಾರ್ಯಕರ್ತರು ಕಿರಿಕಾರಿದ್ದರು. ಇದರ ಬೆನ್ನಲ್ಲೇ ಬೊಮ್ಮಾಯಿ-ಶಾಮನೂರು ಭೇಟಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಬಳಿಕ ಬಿಜೆಪಿ ಕೆಲ ನಾಯಕರೇ ಇದರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಅದರಲ್ಲೂ ಬಿಜೆಪಿ ಹಿರಿಯ ನಾಯಕರು ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಅರ್ಥದಲ್ಲಿ ಪ್ರತಾಪ ಸಿಂಹ ಹಾಗೂ ಸಿಟಿ ರವಿ ಹೇಳಿಕೆ ನೀಡಿರುವುದು ಕಮಲ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದೆ.

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?