AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ರಾಮ ಭಕ್ತರ ವೇಷದಲ್ಲಿರುವ ಸಮಾಜ ಕಂಟಕರು: ಕಾಂಗ್ರೆಸ್ ತಿರುಗೇಟು

ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರ ಉದ್ಘಾಟನೆಗೆ ಸಕಲ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಮಮಂದಿರ ರಾಜಕೀಯ ಕದನ ದಿನೇ ದಿನೆ ಜೋರಾಗುತ್ತಿದೆ. ರಾಮಮಂದಿರದ ವಿಚಾರದಲ್ಲಿ ಕಾಂಗ್ರೆಸ್ ಮಾಡಿರುವ ಕೆಲಸಗಳ ಮಾಹಿತಿಯನ್ನು ಟ್ವೀಟ್​ ಮೂಲಕ ತಿಳಿಸಿದಿದೆ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ ಎಂದಿರುವ ಕಾಂಗ್ರೆಸ್, ಆ ಮೂಲಕ ಬಿಜೆಪಿಗೆ ತಿರುಗೇಟು ನೀಡಿದೆ.

ಬಿಜೆಪಿಯವರು ರಾಮ ಭಕ್ತರ ವೇಷದಲ್ಲಿರುವ ಸಮಾಜ ಕಂಟಕರು: ಕಾಂಗ್ರೆಸ್ ತಿರುಗೇಟು
ಪ್ರಾತಿನಿಧಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on: Jan 08, 2024 | 7:11 PM

Share

ಬೆಂಗಳೂರು, ಜನವರಿ 08: ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮನ ಮಂದಿರ (ram mandir) ಉದ್ಘಾಟನೆಗೆ ಇನ್ನೇನು ಕೆಲ ದಿನಗಳು ಬಾಕಿ ಇದೆ. ಎಲ್ಲೆಲ್ಲೂ ರಾಮಜಪ, ರಾಮನದ್ದೇ ಮಾತು. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತ್ರ ರಾಮಮಂದಿರ ಜಟಾಪಟಿ‌ ಮುಂದುವರೆದಿದೆ. ಕಾಂಗ್ರೆಸ್ ಹಿಂದು ವಿರೋಧಿ ಎಂದು ಬಿಜೆಪಿ ಬಿಂಬಿಸುತ್ತಿದ್ದು, ರಾಮಮಂದಿರದ ವಿಚಾರದಲ್ಲಿ ಕಾಂಗ್ರೆಸ್ ಮಾಡಿರುವ ಕೆಲಸಗಳ ಮಾಹಿತಿಯನ್ನು ಟ್ವೀಟ್​ ಮೂಲಕ ತಿಳಿಸಿದಿದೆ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ ಎಂದಿರುವ ಕಾಂಗ್ರೆಸ್, ಆ ಮೂಲಕ ಬಿಜೆಪಿಗೆ ತಿರುಗೇಟು ನೀಡಿದೆ.

ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ.

1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. 1989 ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್​ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ ಎಂದು ಕಿಡಿಕಾರಿದೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಯಂದು ಕರ್ನಾಟಕದಲ್ಲಿ ವಿಶೇಷ ಪೂಜೆ ನಡೆಸಲು ರಾಜ್ಯ ಸರ್ಕಾರ ಚಿಂತನೆ

ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ ರಾಮನ ಹೆಸರೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ ” ಬಿಜೆಪಿಗೆ ಸನ್ಮತಿ ದೇ ಭಗವಾನ್” ಎಂದು ಹೇಳಬೇಕಾಗಿ ಬಂದಿರುವುದು ದುರಂತ!

ಬಿಜೆಪಿಯವರು ರಾಮ ಭಕ್ತರ ವೇಷದಲ್ಲಿರುವ ಸಮಾಜ ಕಂಟಕರು

ಶ್ರೀರಾಮಚಂದ್ರ ಯಾರೊಬ್ಬರ ಸ್ವತ್ತೂ ಅಲ್ಲ. ಆದರೆ ರಾಮನ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಬಿಜೆಪಿಯವರು ಶ್ರೀರಾಮ ತಮ್ಮೊಬ್ಬರ ಸ್ವತ್ತು ಎಂಬ ಭ್ರಮೆಯಲ್ಲಿದ್ದಾರೆ. ಈ ಬಗ್ಗೆ ನಮ್ಮ ಅನುಕಂಪವಿದೆ. ಬಿಜೆಪಿಯವರು ರಾಮ ಭಕ್ತರ ವೇಷದಲ್ಲಿರುವ ಸಮಾಜ ಕಂಟಕರು. ಜನವಿರೋಧಿ ಬಿಜೆಪಿಯು ಕಾಂಗ್ರೆಸ್ ಪಕ್ಷವನ್ನು ರಾಮವಿರೋಧಿ ಎಂದು ಬಿಂಬಿಸುವ ದುಷ್ಟ ಯತ್ನದಲ್ಲಿದೆ.

ಜನವರಿ 22 ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದು ಬಿಜೆಪಿಗೆ ಸಂತಸ ತರುವ ಬದಲು ಸಂಕಟ ತಂದಿರುವುದು ಅವರ ಧರ್ಮವಿಕೃತಿಗೆ ಸಾಕ್ಷಿ. ಅವರಿಗೆ ಭಕ್ತಿ, ಪೂಜೆ, ಪುನಸ್ಕಾರ, ಸಂಸ್ಕಾರ ಬೇಕಿಲ್ಲ. ಅವರಿಗೆ ಬೇಕಿರುವುದು ಅದರ ಹೆಸರಿನಲ್ಲಿ ರಾಜಕೀಯ. ಅವರದು ಧರ್ಮದ ದಾರಿ ತಪ್ಪಿಸುವ ಹುನ್ನಾರ ಎಂದು ವಾಗ್ದಾಳಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್