ಮಂಡ್ಯ, ಫೆ.15: ಲೋಕಸಭೆ ಚುನಾವಣೆ 2024 (Lok Sabha Elections) ಸಮೀಪಿಸುತ್ತಿದ್ದಂತೆ ಕರ್ನಾಟಕದಲ್ಲಿ ಆಡಳಿತರೂಢ ಕಾಂಗ್ರೆಸ್, ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಳ್ಳಲು ಪ್ಲಾನ್ಗಳನ್ನು ಮಾಡಿಕೊಳ್ಳುತ್ತಿವೆ. ಪ್ರತಿಯೊಂದು ಕಾರ್ಯಕ್ರಮದಲ್ಲೂ ಗ್ಯಾರಂಟಿ ಜಪ ಮಾಡುವ ಕಾಂಗ್ರೆಸ್ (Congress), ಗ್ಯಾರಂಟಿ ಸಮಾವೇಶದ (Guarantee Convention) ಮೂಲಕ ಲೋಕಸಭಾ ಚುನಾವಣೆಗೆ ತಂತ್ರಗಾರಿಕೆ ಹೆಣೆಯಲು ಮುಂದಾಗಿದೆ. ಹೌದು, ಫೆಬ್ರವರಿ 18 ರಂದು ಮಳವಳ್ಳಿಯಲ್ಲಿ ಗ್ಯಾರಂಟಿ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ (PM Narendraswamy) ಹೇಳಿದ್ದಾರೆ.
ಮಳವಲ್ಲಿಯಲ್ಲಿ ಮಾತನಾಡಿದ ನರೇಂದ್ರಸ್ವಾಮಿ, ಮುಖ್ಯಮಂತ್ರು ಸಿದ್ದರಾಮಯ್ಯ ಅವರು ಗ್ಯಾರಂಟಿ ಸಮಾವೇಶ ಉದ್ಘಾಟಿಸಲಿದ್ದಾರೆ. ಮಂಡ್ಯ ಜಿಲ್ಲೆಯ ಆರು ತಾಲೂಕುಗಳಲ್ಲಿ ಈಗಾಗಲೇ ಸಮಾವೇಶ ನಡೆದಿದೆ. ಗ್ಯಾರಂಟಿ ಸಮಾವೇಶದ ಜತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸವೂ ನಡೆಯಲಿದೆ ಎಂದರು.
ಇದನ್ನೂ ಓದಿ: ಗ್ಯಾರಂಟಿ ಎಂದು ಕಾಂಗ್ರೆಸ್ ಕಡಿದು ಕಟ್ಟಿಹಾಕಿದ್ದು ಏನಿಲ್ಲ, ಅಭಿವೃದ್ಧಿ ಶೂನ್ಯ: ಬಿವೈ ವಿಜಯೇಂದ್ರ
ಮಳವಳ್ಳಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ಮೈದಾನದಲ್ಲಿ ನಡೆಯಲಿರುವ ಸಮಾವೇಶ ಬೆಳಿಗ್ಗೆ 10 ಗಂಟೆಗೆ ಚಾಲನೆ ನೀಡಲಾಗುತ್ತದೆ. ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಎನ್.ಚಲುವರಾಯಸ್ವಾಮಿ, ಜಿಲ್ಲೆಯ ಕಾಂಗ್ರೆಸ್ ಶಾಸಕರು ಭಾಗಿಯಾಗಲಿದ್ದಾರೆ.
ಸಮಾವೇಶದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಸರ್ಕಾರದ ಸಾಧನೆ, ಯೋಜನೆಗಳ ಬಗ್ಗೆ ಮನವರಿಕೆ ಮಾಡಲಾಗುತ್ತದೆ,. ನಮ್ಮ ಸರ್ಕಾರ ಜನರ ಬದುಕನ್ನ ಗ್ಯಾರಂಟಿ ಮೂಲಕ ಬದಲಿಸಿದೆ. ಪ್ರೀತಿಯಿಂದ ಗ್ಯಾರಂಟಿಗಳನ್ನು ಸ್ವೀಕರಿಸಿದ್ದಾರೆ. ಕೆಲವರು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿ ಜಾರಿ ಮಾಡಿದೆ ಎಂದರು.
ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಬದುಕಿ ಅಸನಾಗಿಸಲು ಸರ್ಕಾರ ಜವಾಬ್ದಾರಿ ಕೆಲಸ ಮಾಡುತ್ತಿದೆ. ಗ್ಯಾರಂಟಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸುದ್ದಿಗೋಷ್ಟಿಯಲ್ಲಿ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಹೇಳಿದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ