AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್ ಚೋರಿ ವಿರುದ್ಧ ದೆಹಲಿಯಲ್ಲಿ ನಾಳೆ ಕಾಂಗ್ರೆಸ್​​ ಪ್ರತಿಭಟನೆ: ಸಿಎಂ, ಡಿಸಿಎಂ ಭಾಗಿ

ಮತಕಳವು ನಡೆದಿದೆ ಅಂತಾ ಸುದ್ದಿಗೋಷ್ಠಿ ನಡೆಸಿ, ಬಾಂಬ್ ಸಿಡಿಸಿದ್ದ ರಾಹುಲ್ ಗಾಂಧಿ, ಆಳಂದ ಕ್ಷೇತ್ರದ ಕಳ್ಳತನವನ್ನ ಬಯಲು ಮಾಡಿದ್ದರು. ಪ್ರಕರಣ ಸಂಬಂಧ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದೆ. ಇದೇ ಹೊತ್ತಲ್ಲಿ ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಪಡೆ ಅಭಿಯಾನ ಹಮ್ಮಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಭಾಗಿಯಾಗುತ್ತಿದ್ದಾರೆ.

ವೋಟ್ ಚೋರಿ ವಿರುದ್ಧ ದೆಹಲಿಯಲ್ಲಿ ನಾಳೆ ಕಾಂಗ್ರೆಸ್​​ ಪ್ರತಿಭಟನೆ: ಸಿಎಂ, ಡಿಸಿಎಂ ಭಾಗಿ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​
ಗಂಗಾಧರ​ ಬ. ಸಾಬೋಜಿ
|

Updated on: Dec 13, 2025 | 6:43 PM

Share

ಬೆಂಗಳೂರು, ಡಿಸೆಂಬರ್​​ 13: ಡಿನ್ನರ್, ಬ್ರೇಕ್​ಫಾಸ್ಟ್ ಬಳಿಕ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ದೆಹಲಿಯತ್ತ ಮುಖಮಾಡಿದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಗೆ ಹಾರಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಲಿದ್ದಾರೆ. ಇನ್ನು ನಾಳೆ ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ನೆಪದಲ್ಲಿ ಇಬ್ಬರು ನಾಯಕರನ್ನು ದೆಹಲಿ ಕರೆಸಿಕೊಂಡರಾ ಅನ್ನೋ ಚರ್ಚೆ ಶುರುವಾಗಿದೆ.

ನಾಳೆ ಕಾಂಗ್ರೆಸ್ ಪ್ರತಿಭಟನೆ: ಸಿಎಂ, ಡಿಸಿಎಂ ಭಾಗಿ

ದೇಶದ ಹಲವು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ವೋಟ್ ಚೋರಿ ನಡೆದಿದೆ ಅಂತಾ ಕಾಂಗ್ರೆಸ್ ಸಮರ ಸಾರಿದೆ. ಇದೀಗ ಎರಡನೇ ಹಂತದ ವೋಟ್ ಚೋರಿ ಅಭಿಯಾನಕ್ಕೆ ಸಿದ್ಧತೆ ಮಾಡಿಕೊಂಡಿದೆ. ನಾಳೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಅಭಿಯಾನ ನಡೆಯಲಿದೆ. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಸ್ಫೋಟಕ ಹೇಳಿಕೆ ನೀಡಿದ ಶಾಸಕ ಇಕ್ಬಾಲ್ ಹುಸೇನ್

ಇದೇ ವೇಳೆ ಮಂಡ್ಯ ನಾಯಕರ ಟೀಂ ದಿಲ್ಲಿ ಯಾತ್ರೆ ಕೈಗೊಂಡಿದೆ. ಚಲುವರಾಯಸ್ವಾಮಿ ನೇತೃತ್ವದಲ್ಲಿ ತಂಡ ದೆಹಲಿಗೆ ತೆರಳುವ ಪ್ಲ್ಯಾನ್ ಇತ್ತು. ಆದರೆ ಅನಾರೋಗ್ಯದ ಕಾರಣ ಚಲುವರಾಯಸ್ವಾಮಿ ದೆಹಲಿಗೆ ಹೋಗುತ್ತಿಲ್ಲ. ಉಳಿದಂತೆ ಶಾಸಕರುಗಳಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ದೆಹಲಿಗೆ ತೆರಳಿದ್ದಾರೆ.

ಮಂಡ್ಯ ಶಾಸಕ ದೆಹಲಿ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​​, ನನ್ನ ಜೊತೆ ಯಾರೂ ದೆಹಲಿಗೆ ಬರುತ್ತಿಲ್ಲ. ಅವರವರ ಕ್ಷೇತ್ರದವರ ಜೊತೆ ಹೋಗ್ತಿದ್ದಾರೆ ಎಂದು ಹೇಳಿದ್ದಾರೆ. ವೋಟ್ ಚೋರಿ ಬಗ್ಗೆ ಕಿಡಿಕಾರಿದ ಎಂಎಲ್​ಸಿ ಸಲೀಂ ಅಹ್ಮದ್, ಇದು ವೋಟ್ ಚೋರಿ ಅಲ್ಲ, ಬಿಜೆಪಿ ಹಾಗೂ ಎಲೆಕ್ಷನ್​ ಕಮಿಷನ್​ನಿಂದ ಡಕಾಯಿತಿ ಅಂದಿದ್ದಾರೆ.

ನಾವು ಯಾವುದೇ ವೋಟ್ ಚೋರಿ ಮಾಡಿಲ್ಲ ಎಂದ ಗುತ್ತೇದಾರ್

ವೋಟ್ ಚೋರಿ ಆರೋಪದ ಬಗ್ಗೆ ಟಿವಿ9 ಜೊತೆ ಮಾತನಾಡಿದ ಮಾಜಿ ಶಾಸಕ ಸುಭಾಶ್ ಗುತ್ತೇದಾರ್, ನಾವು ಯಾವುದೇ ವೋಟ್ ಚೋರಿ ಮಾಡಿಲ್ಲ ಅಂದಿದ್ದಾರೆ. ಇನ್ನು ಈ ಬಗ್ಗೆ ಸುಭಾಶ್ ಗುತ್ತೇದಾರ್ ಪುತ್ರ ಹರ್ಷಾನಂದ್ ಗುತ್ತೆದಾರ್ ಮಾತನಾಡಿ, ಸರ್ಕಾರ ಇರುವುದರಿಂದ ಅಧಿಕಾರಿಗಳನ್ನ ಬಳಸಿಕೊಂಡಿದ್ದಾರೆ ಅಂತಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಕುರ್ಚಿ ಕದನ: ಶಾಸಕ ಇಕ್ಬಾಲ್​ ಹುಸೇನ್​ ಮಾತನ್ನು ಯಾರು ನಂಬಬೇಡಿ; ಡಿಕೆ ಶಿವಕುಮಾರ್​

ಒಟ್ಟಿನಲ್ಲಿ ವೋಟ್ ಚೋರಿ ನೆಪದಲ್ಲಿ ಸಿಎಂ ಹಾಗೂ ಡಿಸಿಎಂ ದೆಹಲಿಯತ್ತ ಮುಖ ಮಾಡಿದ್ದಾರೆ. ಅಲ್ಲಿ ಇಬ್ಬರನ್ನೂ ಕೂರಿಸಿ ಹೈಕಮಾಂಡ್ ನಾಯಕರು ಮಾತುಕತೆ ನಡೆಸುವ ಸಾಧ್ಯತೆಯೂ ಇದೆ.

ವರದಿ: ಬ್ಯೂರೋ ರಿಪೋರ್ಟ್, ಟಿವಿ9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?