ಮಂಡ್ಯದೊಳಗೆ ನುಗ್ಗಿ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಗೊಳಿಸಿದ ಕಾಂಗ್ರೆಸ್​ ಮುಂದಿದೆ ಮತ್ತೊಂದು ಟಾರ್ಗೆಟ್

ಜೆಡಿಎಸ್ ಭದ್ರಕೋಟೆ ಮಂಡ್ಯಕ್ಕೆ ನುಗ್ಗಿ ಕಾಂಗ್ರೆಸ್ ಕಮಾಲ್ ಮಾಡಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಭದ್ರಕೋಟೆಯನ್ನು ಛಿದ್ರಗೊಳಿಸಿದೆ. ಇದೀಗ ಮತ್ತೊಂದು ಅಧಿಕಾರದ ಮೇಲೆ ಕೈ ಪಡೆ ಕಣ್ಣಿಟ್ಟಿದೆ.

ಮಂಡ್ಯದೊಳಗೆ ನುಗ್ಗಿ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಗೊಳಿಸಿದ ಕಾಂಗ್ರೆಸ್​ ಮುಂದಿದೆ ಮತ್ತೊಂದು ಟಾರ್ಗೆಟ್
ಕಾಂಗ್ರೆಸ್- ಜೆಡಿಎಸ್
Follow us
ರಮೇಶ್ ಬಿ. ಜವಳಗೇರಾ
|

Updated on: May 25, 2023 | 6:52 AM

ಮಂಡ್ಯ: ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯಲ್ಲಿ ಜೆಡಿಎಸ್ (JDS)​ ಭದ್ರಕೋಟೆಯನ್ನು ಕಾಂಗ್ರೆಸ್ ಛಿದ್ರಗೊಳಿಸಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಸ್ಪರ್ಧಿಸಿದ್ದ 6 ಕ್ಷೇತ್ರಗಳಲ್ಲಿ 5ರಲ್ಲಿ ಗೆದ್ದಿದೆ. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಜಿಲ್ಲೆಯ 7ಕ್ಕೆ 7 ಕ್ಷೇತ್ರಗಳಲ್ಲಿ ಗೆದ್ದು ಬೀಗಿತ್ತು. ಆದರೆ ಕೆಆರ್​ ಪೇಟೆ ಶಾಸಕ ಬಿಜೆಪಿ ಸೇರಿದ್ದರಿಂದ ಉಪಚುನಾವಣೆಯಲ್ಲಿ ಒಂದು ಕ್ಷೇತ್ರ ಕಳೆದುಕೊಂಡಿತ್ತು. ಆದರೆ ಈ ಬಾರಿ ಕಾಂಗ್ರೆಸ್​ ಮಂಡ್ಯ ಜಿಲ್ಲೆಯಲ್ಲಿ ಅಭೂತಪರ್ವ ಯಶಸ್ಸು ಸಾಧಿಸಿದೆ. ಕಾಂಗ್ರೆಸ್ ಸ್ಪರ್ಧಿಸಿದ್ದ 6 ಕ್ಷೇತ್ರಗಳಲ್ಲಿ 5ರಲ್ಲಿ ಗೆಲುವಿನ ನಗೆ ಬೀರಿ ಜೆಡಿಎಸ್​ ಪಕ್ಷವನ್ನು ಧೂಳೀಪಟ ಮಾಡಿದೆ. ಜೆಡಿಎಸ್​ ಭದ್ರಕೋಟೆಯೊಳಗೆ ನುಗ್ಗಿ ಕಮಾಲ್ ಮಾಡಿರುವ ಕಾಂಗ್ರೆಸ್​ ಮುಂದೆ ಮತ್ತೊಂದು ಟಾರ್ಗೆಟ್ ಇದೆ.

ಇದನ್ನೂ ಓದಿ: ಹೊಸ ಟ್ರೆಂಡ್ ಸೃಷ್ಠಿಸಿದ ಮಂಡ್ಯದ ಮನ್ಮೂಲ್: ಮಂಡ್ಯದ ಬೆಲ್ಲದ ಬರ್ಫಿಗೆ ಭಾರಿ ಡಿಮ್ಯಾಂಡ್ ಮಾರಾಯ್ರೆ

ಹೌದು… ಜೆಡಿಎಸ್ ಭದ್ರಕೋಟೆಯನ್ನು ಬೇಧಿಸಿರುವ ಕಾಂಗ್ರೆಸ್​ಗೆ ಮುಂದಿನ ಟಾರ್ಗೆಟ್ ಮನ್ಮೂಲ್. ಜೆಡಿಎಸ್ ತೆಕ್ಕೆಯಲ್ಲಿರುವ ಮನ್ಮೂಲ್ಅನ್ನು ಸಹ ಶತಾಯ ಗತಾಯವಾಗಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​ ಕಸರತ್ತು ನಡೆಸಿದೆ. ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿದ್ದಂತೆ ಫುಲ್ ಆಕ್ಟೀವ್ ಆದ ಕೈ ಪಡೆ, ಮನ್ಮುಲ್ ಆಡಳಿತ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್, ಆಪರೇಷನ್ ಹಸ್ತಕ್ಕೆ ಮಾಸ್ಟರ್ ಪ್ಲಾನ್ ಮಾಡಿದೆ

ಈಗಾಗಲೇ ಆಪರೇಷನ್ ಹಸ್ತಕ್ಕೆ ಸಕಲ ಸಿದ್ದತೆ ನಡೆಸಿರುವ ಜಿಲ್ಲೆಯ ಕೈ ನಾಯಕರು, ಹಿರಿಯ ನಾಯಕರಿಂದ ಗ್ರೀನ್ ಸಿಗ್ನಲ್ ದೊರೆಯುತ್ತಿದ್ದಂತೆ ಆಪರೇಷನ್ ಹಸ್ತಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ.ಆರ್ ರಾಮಚಂದ್ರು ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತ ಗೊಂಡಿದ್ದರು.

12 ನಿರ್ದೇಶಕರು ಹಾಗೂ 4 ಸರ್ಕಾರದ ನಾಮ ನಿರ್ದೇಶಿತರಿರುವ ಮನ್ಮೂಲ್ ಆಡಳಿತ ಮಂಡಳಿ ತೆಕ್ಕೆಗೆ ತೆಗೆದುಕೊಳ್ಳಲು 9 ಮಂದಿ ನಿರ್ದೇಶಕರ ಬೆಂಬಲ ಬೇಕು. ಸದ್ಯ 12 ಜನ ನಿರ್ದೇಶಕರಲ್ಲಿ ಜೆಡಿಎಸ್ ಬೆಂಬಲಿತರು 7 ಜನ, ಕಾಂಗ್ರೆಸ್ ಬೆಂಬಲಿತರು 3 ಜನ ಹಾಗೂ 2 ಬಿಜೆಪಿ ಬೆಂಬಲಿತರಿದ್ದಾರೆ. 3 ಜನ ನಿರ್ದೇಶಕರು ಸೇರಿ ನಾಮನಿರ್ದೇಶನದ 4 ಜನರ ಬೆಂಬಲ ಕಾಂಗ್ರೆಸ್ ಗೆ ಲಭಿಸಲಿದೆ. ಇನ್ನು ಇಬ್ಬರನ್ನ ಆಪರೇಷನ್ ಹಸ್ತ ನಡೆಸಲು ಕಾಂಗ್ರೆಸ್ ಚಿಂತನೆ ನಡೆಸಿದ್ದು, ಒಂದು ವೇಳೆ ಇಬ್ಬರು ನಿರ್ದೇಶಕರ ಆಪರೇಷನ್ ಸಕ್ಸಸ್ ಆದರೆ ಅದ್ಯಕ್ಷ ಗಾದಿ ಕೈ ನಾಯಕರ ಪಾಲಾಗುವುದು ಗ್ಯಾರಂಟಿ. ಇನ್ನು ಆಡಳಿತರೂಢ ಕಾಂಗ್ರೆಸ್​ಗೆ ಜೆಡಿಎಸ್​ ಹೇಗೆ ಪ್ರತಿರೋಧವಾಗಿ ನಿಲ್ಲಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ