AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಣೆ, ಸರ್ಕಾರದ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ: ಡಿಸಿಎಂ ಡಿಕೆ ಶಿವಕುಮಾರ್

ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರೆತ ಉಂಟಾಗಿದೆ. ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿದ್ದು, ಈ ಹಿನ್ನಲೆ ಕೇಂದ್ರದ ನಡೆ ಖಂಡಿಸಿ ನಾಳೆ ಕಾಂಗ್ರೆಸ್​ ಪ್ರತಿಭಟನೆ ನಡೆಸಲಿದೆ ಎಂದು ಬೆಂಗಳೂರಿನ ಸದಾಶಿವನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಣೆ, ಸರ್ಕಾರದ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ: ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್
ಗಂಗಾಧರ​ ಬ. ಸಾಬೋಜಿ
|

Updated on: Jun 19, 2023 | 3:00 PM

Share

ಬೆಂಗಳೂರು: ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿದ್ದು, ಹಾಗಾಗಿ ಕೇಂದ್ರದ ನಡೆ ಖಂಡಿಸಿ ನಾಳೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡುತ್ತೇವೆ. ನಾನು ನಗರದ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು. ಸದಾಶಿವನಗರದಲ್ಲಿ ಮಾತನಾಡಿದ ಅವರು, ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ಬಡವರಿಗೆ ಅಕ್ಕಿ ನೀಡದೆ ಕೇಂದ್ರವು ತೊಂದರೆ ನೀಡಲು ಹೊರಟಿದೆ. ಅಕ್ಕಿ ನೀಡಲು ನಿಯಮ, ಪದ್ಧತಿ ಇದೆ, ಪುಕ್ಕಟೆ ಏನು ಕೊಡಲ್ಲ ಎಂದಿದ್ದಾರೆ.

ಹೈಕಮಾಂಡ್​ ಭೇಟಿಗೆ ಎಲ್ಲಾ ಸಚಿವರು ಸಮಯ ಕೇಳಿದ್ದೇವೆ. ಸಮಯ ನೀಡಿದರೆ ಎಲ್ಲಾ ಸಚಿವರು ಹೈಕಮಾಂಡ್ ಭೇಟಿಯಾಗುತ್ತೇವೆ. ಹೈಕಮಾಂಡ್ ಭೇಟಿ ವೇಳೆ ಗ್ರೂಪ್​​ ಫೋಟೋ ಇದೆ ಎಂದು ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಅಕ್ಕಿ ಇಲ್ಲ, ಇದ್ದರೆ ಕೊಡಿಸಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಾರ್ಟಿ

ಅಕ್ಕಿ ಕೊಡುತ್ತೇವೆಂದಿದ್ದ FCI ನಂತರ ಸಾಧ್ಯವಿಲ್ಲವೆಂದು ಪತ್ರ ಬರೆದಿತ್ತು. ಇದರೊಂದಿಗೆ ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಮಾಡುತ್ತಿದೆ. ಭಾರತೀಯ ಜನತಾ ಪಕ್ಷ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಾರ್ಟಿ. ಭಾರತೀಯ ಜನತಾ ಪಕ್ಷದ ನಿರ್ಧಾರಕ್ಕೆ ನಾವು ಧಿಕ್ಕಾರ ಹೇಳಬೇಕು. ಹೀಗಾಗಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Anna Bhagya: ರಾಜ್ಯದಲ್ಲಿ ಅಕ್ಕಿ ಇದ್ದರೇ ಟೆಂಡರ್​ ಮೂಲಕ ಖರೀದಿ: ಸಿಎಂ ಸಿದ್ದರಾಮಯ್ಯ

ಜೂನ್ 12ರಂದು 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುತ್ತೇವೆ ಎಂದು ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಹೇಳಿತ್ತು. ಆಮೇಲೆ ಮತ್ತೊಂದು ಪತ್ರ ಬರೆದು ಕೊಡಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ. ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದಿದ್ದರು.

ಆರ್​.ಅಶೋಕ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್

ಸಂಸದ ಡಿ.ಕೆ.ಸುರೇಶ್ ರಾಜಕೀಯದ ಬಗ್ಗೆ ವೈರಾಗ್ಯದ ಮಾತು ವಿಚಾರವಾಗಿ ಮಾತನಾಡಿದ ಅವರು, ಡಿ.ಕೆ.ಸುರೇಶ್​​ ಪ್ರಜ್ಞಾವಂತ, ಅನುಭವಿ ನಾಯಕ. ಅವರು ಯಾವುದೇ ವೈರಾಗ್ಯ ಇಲ್ಲ. ಆರ್​.ಅಶೋಕ್ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಅದನ್ನು ನೋಡಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿ ಎಂದು ಟಾಂಗ್​ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್