Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪ್ರದಾಯ ಮುರಿದ್ರಾ ಸಿದ್ದರಾಮಯ್ಯ? ಸಿಎಂ ವಿರುದ್ಧ ಬಿಕೆ ಹರಿಪ್ರಸಾದ್ ಆಕ್ರೋಶ

ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದರಿಂದ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ತೀವ್ರ ಅಸಮಾಧಾನಗೊಂಡಿದ್ದು, ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ಊಹಾಪೋಹಳಿಗೆ ಸ್ಪಷ್ಟನೆ ನೀಡಿದ್ದಾರೆ.

ಸಂಪ್ರದಾಯ ಮುರಿದ್ರಾ ಸಿದ್ದರಾಮಯ್ಯ? ಸಿಎಂ ವಿರುದ್ಧ ಬಿಕೆ ಹರಿಪ್ರಸಾದ್ ಆಕ್ರೋಶ
ಬಿಕೆ ಹರಿಪ್ರಸಾದ್-ಸಿದ್ದರಾಮಯ್ಯ
Follow us
ರಮೇಶ್ ಬಿ. ಜವಳಗೇರಾ
|

Updated on: May 27, 2023 | 6:23 PM

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಸರ್ಕಾರದ ಪೂರ್ಣ ಪ್ರಮಾಣದ ಸಂಪುಟ ರಚನೆಯಾಗಿದೆ. ಸಚಿವ ಸ್ಥಾನಕ್ಕೆ  ಏರ್ಪಟ್ಟಿದ್ದ ಬಾರೀ ಲಾಬಿ ಮಧ್ಯೆ  ಕಾಂಗ್ರೆಸ್ ಹೈಕಮಾಂಡ್  ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ನೀಡಿದ್ದು, ಅದರಂತೆ ಇಂದು(ಮೇ 27) ಅವರೆಲ್ಲ ಪ್ರಮಣ ವಚನ ಸ್ವೀಕರಿಸಿದರು. ಇನ್ನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಅವರಿಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ. ಇದರಿಂದ ಬಿಕೆ ಹರಿಪ್ರಸಾದ್ ಅವರು ತೀವ್ರ ಅಸಮಾಧಾನಗೊಂಡಿದ್ದು, ರಾಜೀನಾಮೆ ನೀಡುವ ಬಗ್ಗೆ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಮೊದಲ ಬಾರಿಗೆ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟ: ರಾಜೀನಾಮೆಗೆ ಮುಂದಾದ ಬಿಕೆ ಹರಿಪ್ರಸಾದ್

ಬೆಂಗಳೂರಿನಲ್ಲಿಂದು ಟಿವಿ9 ಜೊತೆ ಮಾತನಾಡಿದ ಬಿಕೆ ಹರಿಪ್ರಸಾದ್, ಸಿಎಂ ಸಿದ್ದರಾಮಯ್ಯ ಹೇಗೆ ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾನಾಯಕನಿಗೆ ಸಚಿವ ಸ್ಥಾನ ನೀಡುವ ಸಂಪ್ರದಾಯ ಇತ್ತು. ಆದರೆ ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ​ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಪದ್ದತಿ ಸಂಪ್ರದಾಯ ಇತ್ತು, ಮೇಲ್ಮನೆ ವಿಪಕ್ಷ ನಾಯಕರು ಸಭಾನಾಯಕರನ್ನ ಮಾಡುವುದು ಸಂಪ್ರದಾಯ. ಆ ಸಂಪ್ರದಾಯ ಮುರಿದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಹರಿಪ್ರಸಾದ್, ನಾನೆಂದೂ ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ. ರಾಜೀನಾಮೆ ಕೊಡುತ್ತೇನೆ ಎಂದು ನಾನು ಎಲ್ಲೂ ಹೇಳಿಲ್ಲ. ಅದೆಲ್ಲ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಬಂದಂತಹ ವಿಷಯ ಎಂದು ಸ್ಪಷ್ಟಪಡಿಸಿದರು.

ಪರಿಷತ್ ನಲ್ಲಿ ಸಭಾನಾಯಕರನ್ನ ಯಾರನ್ನ ಮಾಡಬೇಕೆಂದು ಸಿಎಂ ಮತ್ತು ಡಿಸಿಎಂ ಶಿವಕುಮಾರ್ ಅವರನ್ನ ಕೇಳಿ. ನಾನು ಪರಿಷತ್ ನಲ್ಲಿ ಸಾಮಾನ್ಯ ಸದಸ್ಯನಾಗಿರುತ್ತೇನೆ. ಎಲ್ಲಿಯವರೆಗೂ ಇರು ಅಂತಾರೋ, ಅಲ್ಲಿಯವರೆಗೂ ನಾನು ಇರುತ್ತೇನೆ. ಇನ್ನು ಹಿಂಬಾಲಕರಿಗೆ ಮಾತ್ರ ಅವಕಾಶನಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ನಾನಾ ರೀತಿಯ ವಿಚಾರ ನಡೆಯುತ್ತಿರುತ್ತೆ. ಕಾಲ ಬಂದಾಗ ಅದನೆಲ್ಲ ಹೇಳುತ್ತೇನೆ ಎಂದು ಹೇಳಿದರು.

ಅಷ್ಟಕ್ಕೂ ಮಂತ್ರಿ ಮಾಡಿ ಎಂದು ನಾನು ಯಾರನ್ನೂ ಕೇಳಿರಲಿಲ್ಲ. ನಾನು ಪಕ್ಷ ಕಟ್ಟಿದವನು, ಪಕ್ಷಕ್ಕಾಗಿ ಸಾಕಷ್ಟು ಶ್ರಮ ವಹಿಸಿದ್ದೇನೆ. ಸ್ವಂತ ಮನೆಯಲ್ಲಿ ಇರುವವನು, ಬಾಡಿಗೆ ಮನೆಯಲ್ಲಿ ಇರುವವನಲ್ಲ. ನನ್ನ ಸಾಮಾಜಿಕ ನ್ಯಾಯಕ್ಕೂ ಅಹಿಂದಕ್ಕೂ ತುಂಬಾ ವ್ಯತ್ಯಾಸ ಇದೆ. ನಾನು ಅಹಿಂದ ಎಂದು ಹೇಳುವವನಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಹರಿಪ್ರಸಾದ್, ನಾನು ಅಧಿಕಾರ ಕೊಡಿ ಎಂದು ಯಾವತ್ತೂ ಕಾಲು ಹಿಡಿದವನಲ್ಲ. ನಾನು ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ ಎಂದರು.

ಸಿದ್ದರಾಮಯ್ಯ ಮಂತ್ರಿ ಸ್ಥಾನ ಕೈತಪ್ಪಿದ್ರಾ?

ಹರಿಪ್ರಸಾದ್‌ಗೆ ಸಚಿವ ಸ್ಥಾನ ನಿಡಬೇಕೆಂದು ಡಿ.ಕೆ.ಶಿವಕುಮಾರ್ , ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದರು. ಆದ್ರೆ ಸಚಿವ ಸ್ಥಾನ ಯಾವುದೇ ಕಾರಣಕ್ಕೂ ಕೊಡಬಾರದೆಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು, ಈಡಿಗ ಕೋಟಾದಲ್ಲಿ ಹರಿಪ್ರಸಾದ್ ಬದಲು ಮಧುಬಂಗಾರಪ್ಪಗೆ ನೀಡಲು ಒತ್ತಾಯಿಸಿದ್ದರು. ಮಧು ಬಂಗಾರಪ್ಪ ಸೇರ್ಪಡೆಯಾದ್ರೆ ಶಿವಮೊಗ್ಗದಲ್ಲಿ ಹೆಚ್ಚಿನ ಬಲ ಸಿಗಲಿದೆ. ಅಲ್ಲದೆ ಡಾ.ರಾಜಕುಮಾರ್ ಕುಟುಂಬ ಸಹ ಬಂದು ಪ್ರಚಾರ ಮಾಡಿದ್ದಾರೆ. ಶಿವರಾಜಕುಮಾರ್ ಕಾಂಗ್ರೆಸ್ ಪರವಾಗಿ ಬಂದು ಪ್ರಚಾರ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಹರಿಪ್ರಸಾದ್ ಬದಲೊಗೆ ಮಧುಬಂಗಾರಪ್ಪಗೆ ಸಚಿವ ಸ್ಥಾನ ನೀಡಲೇಬೇಕೆಂದು ಸಿದ್ದರಾಮಯ್ಯ ವಾದ ಮಾಡಿದ್ದರು. ಕೊನೆ ಸಿದ್ದರಾಮಯ್ಯ ಒತ್ತಡಕ್ಕೆ ಹೈಕಮಾಂಡ್ ಮಣಿರು ಮಧುಬಂಗಾರಪ್ಪಗೆ ಮಣೆ ಹಾಕಿದೆ. ಹೀಗಾಗಿ ಹರಿಪ್ರಸಾದ್ ಅವರು ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ