AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ನಿಮ್ಮ ನೇತೃತ್ವದಲ್ಲಿ ಸರ್ಕಾರ ರಚನೆಯಾಗುತ್ತಾ? ಉಸ್ತುವಾರಿ ನಾಯಕ ಡಿ.ಕೆ. ಶಿವಕುಮಾರ್ ಏನಂದರು?

DK Shivakumar: ಒಟ್ಟಾರೆಯಾಗಿ ಪಂಚ ರಾಜ್ಯಗಳ ಮತದಾನೋತ್ತರ ಸಮೀಕ್ಷೆ ಫಲಿತಾಂಶದ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್ ಮತದಾನೋತ್ತರ ಸಮೀಕ್ಷೆ ಬಗ್ಗೆ ನನಗೆ ಯಾವುದೇ ನಂಬಿಕೆಯಿಲ್ಲ. ಉತ್ತರ ಪ್ರದೇಶ ಹೊರತುಪಡಿಸಿ 4 ರಾಜ್ಯದಲ್ಲಿ ನಮ್ಮ ಸರ್ಕಾರ ರಚನೆಯಾಗಲಿದೆ ಎಂದಿದ್ದಾರೆ.

ಗೋವಾದಲ್ಲಿ ನಿಮ್ಮ ನೇತೃತ್ವದಲ್ಲಿ ಸರ್ಕಾರ ರಚನೆಯಾಗುತ್ತಾ? ಉಸ್ತುವಾರಿ ನಾಯಕ ಡಿ.ಕೆ. ಶಿವಕುಮಾರ್ ಏನಂದರು?
ಗೋವಾದಲ್ಲಿ ನಿಮ್ಮ ನೇತೃತ್ವದಲ್ಲಿ ಸರ್ಕಾರ ರಚನೆಯಾಗುತ್ತಾ? ಉಸ್ತುವಾರಿ ನಾಯಕ ಡಿ.ಕೆ. ಶಿವಕುಮಾರ್ ಏನಂದರು?
TV9 Web
| Updated By: ಸಾಧು ಶ್ರೀನಾಥ್​|

Updated on:Mar 08, 2022 | 4:43 PM

Share

ಬೆಂಗಳೂರು: ನಿನ್ನೆ ಸಂಜೆಯಷ್ಟೇ ಪಂಚ ರಾಜ್ಯಗಳ ಅಸೆಂಬ್ಲಿ ಚುನಾವಣೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಹೊರಬಿದ್ದಿದೆ. ಎಕ್ಸಿಟ್​ ಪೋಲ್​ ಫಲಿತಾಂಶಗಳ ಪ್ರಕಾರ ಗೋವಾ ಮತ್ತೊಮ್ಮೆ ಅತಂತ್ರದಲ್ಲಿ ಓಲಾಡಲಿದೆ ಎನ್ನಲಾಗಿದೆ. ಅದು ಕಾಂಗ್ರೆಸ್​ ಮತ್ತು ಬಿಜೆಪಿ ಮಧ್ಯೆ ನೆಕ್​ ಟು ನೆಕ್ ಫೈಟ್​ ಎಂದು ಹೇಳಲಾಗಿದೆ. ಇದರಿಂದ ಗೋವಾ ರಾಜ್ಯದ ಉಸ್ತುವಾರಿ ಹೊತ್ತ ಉಭಯ ಪ್ಷಗಳ ನಾಯಕರಿಗೆ ಡಿಮ್ಯಾಂಡ್​ ಹೆಚ್ಚಾಗಿದ್ದು, ತಮ್ಮ ಪಕ್ಷವನ್ನು ಅಧಿಕಾರದಲ್ಲಿ ಪ್ರತಿಷ್ಠಾಪಿಸಿಲು ಅವರವರವ ಜವಾಬ್ದಾರಿಯೂ ಗುರುತರವಾಗಿ ಹೆಚ್ಚಾಗಿದೆ. ಅದನ್ನು ಮನಗಂಡ ಕರ್ನಾಟಕ ಕಾಂಗ್ರೆಸ್ ನಾಯಕ ​ಡಿ.ಕೆ.ಶಿವಕುಮಾರ್ (DK Shivakumar) ಚುನಾವಣೆ ಕಾಲದಲ್ಲಿ ತಾವು ಉಸ್ತುವಾರಿ ವಹಿಸಿದ್ದನ್ನು ಮೆಲುಕು ಹಾಕುತ್ತಾ ಇದೀಗ ಪಕ್ಷದ ಕೈಗೆ ಅಧಿಕಾರ ಹಸ್ತಾಂತರಿಸುವುದು ಚಾಲೆಂಜಿಂಗ್ ಟಾಸ್ಕ್​ ಆಗಿದೆ ಎಂಬರ್ಥದಲ್ಲಿ ಮಾತನಾಡಿದ್ದಾರೆ. ಮತ್ತು ಅದನ್ನು ತಾವು ಯಶಸ್ವಿಯಾಗಿ ನಿಭಾಯಿಸುವ ಭರವಸೆಯನ್ನೂ ವ್ಯಕ್ತಪಡಿಸಿದ್ದಾರೆ (Exit Poll Result 2022).

ಈ ನಿಟ್ಟಿನಲ್ಲಿ ಗೋವಾಗೆ ಹೋಗಲು ಎಐಸಿಸಿ ನಾಯಕರು ನನಗೆ ಸೂಚನೆ ಕೊಟ್ಟಿದ್ದಾರೆ. ನಾನೊಬ್ಬ ಕಾರ್ಯಕರ್ತನಾಗಿ ನೀಡಿರುವ ಜವಾಬ್ದಾರಿ ನಿರ್ವಹಿಸುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ಹೇಳಿದ್ದಾರೆ.

ಇನ್ನು ಒಟ್ಟಾರೆಯಾಗಿ ಪಂಚ ರಾಜ್ಯಗಳ ಮತದಾನೋತ್ತರ ಸಮೀಕ್ಷೆ ಫಲಿತಾಂಶದ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್ ಮತದಾನೋತ್ತರ ಸಮೀಕ್ಷೆ ಬಗ್ಗೆ ನನಗೆ ಯಾವುದೇ ನಂಬಿಕೆಯಿಲ್ಲ. ಉತ್ತರ ಪ್ರದೇಶ ಹೊರತುಪಡಿಸಿ 4 ರಾಜ್ಯದಲ್ಲಿ ನಮ್ಮ ಸರ್ಕಾರ ರಚನೆಯಾಗಲಿದೆ. ಕಾಂಗ್ರೆಸ್​ ನಾಯಕರೆಲ್ಲರೂ ಗೋವಾದಲ್ಲಿ ಪ್ರಚಾರ ಮಾಡಿದ್ದೆವು. ಅದರ ಮುಂದುವರಿದ ಭಾಗವಾಗಿ, ಫಲಿತಾಂಶದ ಬಳಿಕ ಪಕ್ಷವನ್ನು ಅಧಿಕಾರದಲ್ಲಿ ಕುಳ್ಳರಿಸುತ್ತೇವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾರ್ಚ್​ 10ಕ್ಕೆ ನೀವೂ ನೋಡ್ತೀರಾ, ಸೂರ್ಯ ಮುಳುಗುವಷ್ಟರಲ್ಲಿ ಗೊತ್ತಾಗಲಿದೆ ಎಂದು ಪಂಚ ರಾಜ್ಯಗಳ ಅಸೆಂಬಲ್ಇ ಚುನಾವಣೆ ಫಲಿತಾಶ ಪ್ರಕಟಗೊಳ್ಳುವ ದಿನದತ್ತ ಬೊಟ್ಟು ಮಾಡಿದರು.

ಗೋವಾದಲ್ಲಿ ಪಕ್ಷಾಂತರ ಭೀತಿ: ತಮ್ಮ ಅಭ್ಯರ್ಥಿಗಳನ್ನು ರೆಸಾರ್ಟ್​​ಗೆ ಕರೆದೊಯ್ದ ಕಾಂಗ್ರೆಸ್ ಗೋವಾದಲ್ಲಿ (Goa) ಚುನಾವಣಾ ಫಲಿತಾಂಶ ಅತಂತ್ರ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು 2017 ರ ಮಾದರಿಯ ದುರಂತವನ್ನು ತಪ್ಪಿಸಲು ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಾಪಾಡಲು ಪ್ರಯತ್ನಿಸುತ್ತಿದೆ. 2017ರಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆದ್ದ ನಂತರವೂ ಸರ್ಕಾರ ರಚಿಸಲು ವಿಫಲವಾಗಿತ್ತು.ಈ ಹಿಂದೆ ಪಕ್ಷಾಂತರಗಳಿಂದಾಗಿ ಕಾಂಗ್ರೆಸ್ ಸರ್ಕಾರ ರಚನೆಗೆ ವಿಫಲವಾಗಿದ್ದರಿಂದ ಈ ಬಾರಿ ಪಕ್ಷವು ತನ್ನ ಅಭ್ಯರ್ಥಿಗಳನ್ನು ಉತ್ತರ ಗೋವಾದ ರೆಸಾರ್ಟ್‌ಗೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ. ಅವರು ಗುರುವಾರದ ಮತಗಳ ಎಣಿಕೆ ಮುಗಿದು ಫಲಿತಾಂಶ ಹೊರಬೀಳುವವರೆಗೆ ಅಲ್ಲಿಯೇ ಇರುತ್ತಾರೆ. “ನಮ್ಮ ಎಲ್ಲಾ ಶಾಸಕರು ಒಟ್ಟಿಗೆ ಇರಲು ನಿರ್ಧರಿಸಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಮತ್ತು ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕಾಂಗ್ರೆಸ್ ತನ್ನ ಉನ್ನತ ಸಂಧಾನಕಾರರಾದ ಪಿ ಚಿದಂಬರಂ ಮತ್ತು ಡಿಕೆ ಶಿವಕುಮಾರ್ ಅವರಿಗೆ ಸಣ್ಣ ಪಕ್ಷಗಳು ಮತ್ತು ಪಕ್ಷೇತರರೊಂದಿಗೆ ಮಾತುಕತೆ ನಡೆಸಲು ಹೇಳಿದೆ. ಕಾಂಗ್ರೆಸ್ ಪಕ್ಷವು ತೃಣಮೂಲ ಕಾಂಗ್ರೆಸ್ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಜತೆಯೂ ಮಾತನಾಡಿದೆ. ಬಂಗಾಳ ಮತ್ತು ದೆಹಲಿಯಂತಹ ಇತರ ರಾಜ್ಯಗಳಲ್ಲಿ ಇವು ವಿರೋಧ ಪಕ್ಷಗಳಾಗಿವೆ. “ಗೋವಾದಲ್ಲಿ ಬಿಜೆಪಿ ವಿರುದ್ಧ ಹೋರಾಡಿದ ಎಲ್ಲಾ ಪಕ್ಷಗಳೊಂದಿಗೆ ನಾವು ಮೈತ್ರಿಗೆ ಮುಕ್ತರಾಗಿದ್ದೇವೆ. ತೃಣಮೂಲ ಕಾಂಗ್ರೆಸ್ ಮತ್ತು ಎಎಪಿ ಅಥವಾ ಗೋವಾದಲ್ಲಿ ಬಿಜೆಪಿ ವಿರುದ್ಧ ಇರುವ ಯಾರೊಂದಿಗಾದರೂ ನಾವು ಮೈತ್ರಿಗೆ ಮುಕ್ತರಾಗಿದ್ದೇವೆ” ಎಂದು ಗುಂಡೂರಾವ್ ಹೇಳಿದರು. ಬಿಜೆಪಿಯೇತರ ಮೈತ್ರಿಗಾಗಿ ಕಾಂಗ್ರೆಸ್ ಜೊತೆ ಸಹಕರಿಸಲು ಎಎಪಿ ಆಸಕ್ತಿ ತೋರಿಸಿದೆ.

ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿ ಅಮಿತ್ ಪಾಲೇಕರ್ ಕಾಂಗ್ರೆಸ್ ತಮ್ಮ ಪಕ್ಷ ಜತೆ ಮಾತನಾಡಿರುವುದಾಗಿ ಎನ್‌ಡಿಟಿವಿಗೆ ಖಚಿತಪಡಿಸಿದ್ದಾರೆ. “ಕಾಂಗ್ರೆಸ್‌ನ ಕೆಲವರು ನಮ್ಮನ್ನು ಸಂಪರ್ಕಿಸಿದ್ದಾರೆ” ಎಂದು ಪಾಲೇಕರ್ ಹೇಳಿದ್ದಾರೆ.

ಇದನ್ನೂ ಓದಿ: TV9 Exit Poll Results 2022: ಐದು ರಾಜ್ಯಗಳಲ್ಲಿ ಯಾವ ಪಕ್ಷ ಸರ್ಕಾರ ರಚಿಸಲಿದೆ? ಇಲ್ಲಿದೆ ಚುನಾವಣೋತ್ತರ ಸಮೀಕ್ಷೆ

ಇದನ್ನೂ ಓದಿ: Exit Polls 2022: ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ದರ್ಬಾರ್, ಪಂಜಾಬ್​ನಲ್ಲಿ ಆಮ್ ಆದ್ಮಿ; ಪಂಚ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹೀಗಿದೆ

Published On - 2:05 pm, Tue, 8 March 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!