ಡಿಕೆ ಡಿಕೆ ಎಂದು ಘೋಷಣೆ, ಜಮೀರ್ ಫೋಟೋ ಪ್ರದರ್ಶನ! ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದ ಸಿದ್ದರಾಮಯ್ಯ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ (ನ.16) ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆದಿದೆ. ಸಭಾ ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದರು.

ಡಿಕೆ ಡಿಕೆ ಎಂದು ಘೋಷಣೆ, ಜಮೀರ್ ಫೋಟೋ ಪ್ರದರ್ಶನ! ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದ ಸಿದ್ದರಾಮಯ್ಯ
ಸಿಟ್ಟಾದ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಫೋಟೋ ಹಿಡಿದು ಘೋಷಣೆ ಕೂಗಿದ ಕಾರ್ಯಕರ್ತರು
Edited By:

Updated on: Nov 17, 2021 | 8:57 AM

ಬೆಂಗಳೂರು: ರಾಜ್ಯ ಕಾಂಗ್ರೆಸ್​ನಲ್ಲಿ ಬಣ ರಾಜಕೀಯ ಮತ್ತೆ ಭುಗಿಲೆದ್ದಿದೆ. ಕಾಂಗ್ರೆಸ್ ಕಾರ್ಯಕ್ರಮದಲ್ಲೇ ಬಣ ರಾಜಕೀಯ ಬಯಲಾಗಿದ್ದು, ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಯಾಗಿದೆ. ಪದೇಪದೆ ಡಿಕೆ ಡಿಕೆ ಎಂದು ಕೆಲವರು ಘೋಷಣೆ ಕೂಗುತ್ತಿದ್ದರು. ಇನ್ನು ಕೆಲವರು ಜಮೀರ್ ಫೋಟೋ ಹಿಡಿದು ಘೋಷಣೆ ಹಾಕುತ್ತಿದ್ದರು. ಈ ವೇಳೆ ಸಿಟ್ಟಾದ ವಿಪಕ್ಷ ನಾಯಕ ಸಿದ್ದರಾಮಯ್ಯ, ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಇಳಿದ ಘಟನೆ ನಡೆದಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ (ನ.16) ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆದಿದೆ. ಸಭಾ ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದರು. ಈ ವೇಳೆ ಕೆಲವರು ಡಿಕೆಶಿ, ಡಿಕೆಶಿ ಅಂತ ಮತ್ತು ಜಮೀರ್ ಹೆಸರು ಹೇಳಿ ಘೋಷಣೆ ಕೂಗಿದ್ದಾರೆ. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ. ಈ ನಡುವೆ ಇದು ಪೂರ್ವ ನಿಯೋಜಿತ ಪ್ಲ್ಯಾನ್ ಎಂಬ ಗುಸುಗುಸು ಕೂಡಾ ಕೇಳಿಬಂದಿದೆ.

ಬಳಿಕ ವೇದಿಕೆಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಮಾತನಾಡಬೇಕಾದರೆ ನೀವು ಕೂಗುತ್ತೀರಿ. ನೀವು ಕಾಂಗ್ರೆಸ್ ದ್ರೋಹಿಗಳೆಂದು ಡಿಕೆ ಶಿವಕುಮಾರ್ ಗರಂ ಆದರು.

ಎಯ್ ಸುಮ್ನಿರ್ರೀ.. ಅಂತ ಸಿದ್ದರಾಮಯ್ಯ ಗದರಿದರು ಕೆಲ ಕಾರ್ಯಕರ್ತರು ಡಿಕೆ ಡಿಕೆ ಅಂತ ಕೂಗಿದ್ದಾರೆ. ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆ ಇಂದ ಸಿದ್ದರಾಮಯ್ಯ ಕೆಳಗಿಳಿದ ನಂತರ ಶಿವಕುಮಾರ್ ವೇದಿಕೆ ಮೇಲೆ ಬಂದು ಎಲ್ಲರು ಸುಮ್ಮನಿದ್ರೆ ಸರಿ.. ಇಲ್ಲಾ ಅಂದರೆ ಎಲ್ಲರನ್ನ ಆಚೆ ಹಾಕಿಬಿಡ್ತಿನಿ ಹುಷಾರ್ ಅಂತ ಗದರಿದ್ದಾರೆ.

ಇದನ್ನೂ ಓದಿ

Shocking News: ಮೊಮ್ಮಗುವಿನ ಅಂತ್ಯಕ್ರಿಯೆಗೆ ಹೋದಾಗ ಮಗಳ ಮೇಲೆ ಅತ್ಯಾಚಾರ ಮಾಡಿ, ಹತ್ಯೆ ಮಾಡಿದ ಅಪ್ಪ !

ತುಮಕೂರಲ್ಲಿ ಉತ್ತಮ ಮಳೆ ಹಿನ್ನೆಲೆ, ಮದ್ದೂರು ಬಳಿ ಶಿಂಷಾ ನದಿಯಲ್ಲಿ ನೀರುಪಾಲಾಗಿದ್ದ ತಮಿಳುನಾಡು ವ್ಯಕ್ತಿಯ ರಕ್ಷಣೆ

Published On - 8:55 am, Wed, 17 November 21