ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ: ವಿಪಕ್ಷ ನಾಯಕ ಆರ್​. ಅಶೋಕ್​ ಕಿಡಿ

ಸಿಎಂ ಸಿದ್ದರಾಮಯ್ಯ, ಎಂಎಲ್​ಸಿ BK ಹರಿಪ್ರಸಾದ್​ ಮತ್ತು ಮಾಜಿ ಶಾಸಕ ಯತೀಂದ್ರ ಒಂದೊಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್​.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ: ವಿಪಕ್ಷ ನಾಯಕ ಆರ್​. ಅಶೋಕ್​ ಕಿಡಿ
ವಿರೋಧ ಪಕ್ಷದ ನಾಯಕ ಆರ್​.ಅಶೋಕ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jan 04, 2024 | 3:08 PM

ಬೆಂಗಳೂರು, ಜನವರಿ 04: ಸಿಎಂ ಸಿದ್ದರಾಮಯ್ಯ, ಎಂಎಲ್​ಸಿ BK ಹರಿಪ್ರಸಾದ್​ ಮತ್ತು ಮಾಜಿ ಶಾಸಕ ಯತೀಂದ್ರ ಒಂದೊಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್​.ಅಶೋಕ್ (R. Ashok) ವಾಗ್ದಾಳಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಕೆ ಹರಿಪ್ರಸಾದ್​ ಅವರಿಗೆ ಮಾಹಿತಿ ಇದ್ದರೆ ಗೃಹ ಇಲಾಖೆಗೆ ಕೊಡಲಿ. ದಾಖಲೆ ಕೊಡಿ, ನಮಗೂ ಕೊಡಿ ಮಾಧ್ಯಮಗಳಿಗೆ ಕೊಡಿ ಎಂದು ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ನಾನು ದುಡ್ಡು ಕೊಟ್ಟಿದ್ದೇನೆ ಅಂತಾ ಹೇಳಿದ್ದಾರೆ. ಶೆಟ್ಟರ್​ಗಿಂತಲೂ ನಾನು ಹೆಚ್ಚು ಹಣ ಸಂಗ್ರಹ ಮಾಡಿಕೊಟ್ಟಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ರಾಮಭಕ್ತನ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್: ದಿನೇಶ್​ ಗುಂಡೂರಾವ್

ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನ ವಿಚಾರವಾಗಿ ಮಾತನಾಡಿದ ಅವರು, ಅಂದು ಪೂಜೆಗೆ ಯಾರು ಅವಶ್ಯಕವಾಗಿ ಬೇಕೋ ಅವರಿಗಷ್ಟೇ ಆಹ್ವಾನ ನೀಡಲಾಗಿದೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಗೂ ಆಹ್ವಾನ ಹೋಗಿದೆ. ಆದರೆ ಕಾರ್ಯಕ್ರಮಕ್ಕೆ ಸೋನಿಯಾ, ಖರ್ಗೆ ಹೋಗ್ತಾರೋ ಇಲ್ಲವೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಶ್ರೀಕಾಂತ್​ ಪೂಜಾರಿ ಮೇಲೆ ಸಿಎಂ ಬ್ರಹ್ಮಾಸ್ತ್ರ ಮುಂದುವರಿಸಿದ್ದಾರೆ

ಶ್ರೀಕಾಂತ್​ ಪೂಜಾರಿ ಮೇಲೆ ಸಿಎಂ ಸಿದ್ದರಾಮಯ್ಯ ಬ್ರಹ್ಮಾಸ್ತ್ರ ಮುಂದುವರಿಸಿದ್ದಾರೆ. ಶ್ರೀಕಾಂತ್ ಪೂಜಾರಿ ಮೇಲೆ ಬಹಳಷ್ಟು ಕೇಸ್​ಗಳಿವೆ ಅಂತಾ ಹೇಳುತ್ತಾರೆ. ಶ್ರೀಕಾಂತ್ ಪೂಜಾರಿ ಅಮಾಯಕ, ಆಟೋ ಡ್ರೈವರ್.​ ರಾಮಮಂದಿರ ಕಾರ್ಯಕ್ರಮ ಸಂದರ್ಭದಲ್ಲಿ ಬಂಧಿಸುವ ಅಗತ್ಯವೇನಿತ್ತು? ಶ್ರೀಕಾಂತ್ ಪೂಜಾರಿ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲಾಗಿದೆ ಅಂತೀರಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಬಿ.ನಾಗೇಂದ್ರ ವಿರುದ್ಧ ಯಾವ ಕೇಸ್​ ಇದೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶ್ರೀಕಾಂತ್ ಬಂಧನ ಕಾಕತಾಳೀಯ: ಇದರಲ್ಲಿ ಪ್ರತೀಕಾರ, ತುಷ್ಟೀಕರಣ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ರಾಹುಲ್​, ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್​ ತಾನೇ ಇದ್ದಿದ್ದು. ಸೋನಿಯಾ ಗಾಂಧಿ, ರಾಹುಲ್​ ಗಾಂಧಿ ಬೇಲ್​ ಮೇಲೆ ಹೊರಗೆ ಬಂದಿದ್ದಾರೆ. ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದಿದ್ದಾರೆ.

ಹರಿಪ್ರಸಾದ್​ ಹೇಳಿಕೆಗೆ ಬಿಜೆಪಿ ಶಾಸಕ ಅಭಯ್​ ಪಾಟೀಲ್​ ಕಿಡಿ

‘ಮತ್ತೊಂದು ಗೋಧ್ರಾ ಹತ್ಯಾಕಾಂಡ ಆಗದಂತೆ ನೋಡಿಕೊಳ್ಳಿ’ ಎಂಬ ಹರಿಪ್ರಸಾದ್​ ಹೇಳಿಕೆಗೆ ಬಿಜೆಪಿ ಶಾಸಕ ಅಭಯ್​ ಪಾಟೀಲ್​ ಪ್ರತಿಕ್ರಿಯಿಸಿದ್ದು, ಗೋಧ್ರಾ ಹತ್ಯಾಕಾಂಡ ಪ್ರಾರಂಭ ಮಾಡಿದವರು ಯಾರು? ಬಹುತೇಕ ಹರಿಪ್ರಸಾದ್ ಮಾಡ್ತಿರಬಹುದು. ರೈಲಿನಲ್ಲಿ ರಾಮ ಭಕ್ತರನ್ನು ಸುಡುವ ಸಂಚು ಮಾಡಿದವರು ಯಾರು? ಬಿ.ಕೆ.ಹರಿಪ್ರಸಾದ್ ಬಹುತೇಕ ಆ ಯೋಜನೆ ಹಾಕಿದಂತೆ ಕಾಣಿಸುತ್ತೆ. ಈ ರೀತಿ ಹತ್ಯಾಕಾಂಡ ಮಾಡಿ ಸಿಎಂರನ್ನು ಕೆಳಗಿಳಿಸುವ ಪ್ರಯತ್ನ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ