AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧೆ: ಶೋಭಾ ಕರಂದ್ಲಾಜೆ

Shobha Karandlanje: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಮತ್ತೆ ಲೋಕಸಭೆ ಚುನಾವಣೆ ಸ್ಪರ್ಧಿಸುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜತೆ ಸಂವಾದ ನಡೆಸಿದ ಅವರು ಲೋಕಸಭೆ ಚುನಾವಣೆ, ರೈತರ ಪ್ರತಿಭಟನೆ, ಸಿದ್ದರಾಮಯ್ಯರ ಬಜೆಟ್​​ ನಿರೀಕ್ಷೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧೆ: ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
Ganapathi Sharma
|

Updated on: Feb 16, 2024 | 7:34 AM

Share

ಉಡುಪಿ, ಫೆಬ್ರವರಿ 16: ಉಡುಪಿ-ಚಿಕ್ಕಮಗಳೂರು ಕ್ಷೇತ್ರ (Udupi Chikmagalur Lok Sabha constituency) ತಮ್ಮದೇ ಎಂದು ಲೋಕಸಭೆ ಚುನಾವಣೆ (Lok Sabha Elections) ಸಮೀಪಿಸುತ್ತಿರುವ ಸಂದರ್ಭದಲ್ಲೇ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಂಸದೆ ಶೋಭಾ ಕರಂದ್ಲಾಜೆ (Shobha Karandlanje) ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹಲವು ಕ್ಷೇತ್ರಗಳಿಂದ ನನ್ನ ಹೆಸರು ಕೇಳಿ ಬರುತ್ತಿದೆ. ಕನಿಷ್ಠ 5-6 ಕ್ಷೇತ್ರಗಳು ನನ್ನ ಹೆಸರನ್ನು ಹೇಳುತ್ತಿವೆ. ಆದರೆ ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ. ಈ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೆ ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನು ಪಾಲಿಸಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ನನ್ನ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಪ್ರಚಾರಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್‌ಗೆ ಮರಳಿದ ಜೆಪಿ ಹೆಗಡೆಯವರನ್ನು ಉದ್ದೇಶಿಸಿ ಮಾತನಾಡಿದ ಶೋಭಾ ಕರಂದ್ಲಾಜೆ, ಯಾರು ಕಾಂಗ್ರೆಸ್‌ಗೆ ಮರಳುತ್ತಾರೋ, ಯಾರು ಬಿಜೆಪಿಯಲ್ಲಿ ಇರುತ್ತಾರೋ ಗೊತ್ತಿಲ್ಲ. ಬಿಜೆಪಿಯಿಂದ ಲಾಭ ಪಡೆದು ಹೋದವರು ಅವರೇ ನಷ್ಟ ಅನುಭವಿಸುತ್ತಾರೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸುವರ್ಣಾವಕಾಶ ನಮ್ಮ ಮುಂದಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸೋಣ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ರೈತರ ಪ್ರತಿಭಟನೆ ರಾಜಕೀಯ ಪ್ರೇರಿತ: ಕರಂದ್ಲಾಜೆ

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಆ ಪ್ರತಿಭಟನೆಗಳು ರಾಜಕೀಯ ಆಧಾರಿತವಾಗಿವೆ. ನಾವು 22 ಬೆಳೆಗಳಿಗೆ ಎಂಎಸ್‌ಪಿ ನೀಡುತ್ತಿದ್ದೇವೆ. ಆದರೂ ರೈತರು ದೆಹಲಿಗೆ ಬಂದಿದ್ದಾರೆ. ಚುನಾವಣೆ ಸಮೀಪಿಸುತ್ತಿರುವಂತೆಯೇ ಇದು ರೈತರ ಹೆಸರಿನಲ್ಲಿ ನಡೆಯುತ್ತಿರುವ ರಾಜಕೀಯ ಆಧಾರಿತ ಪ್ರತಿಭಟನೆಯಾಗಿದೆ. ಇದು ಕೆಲವು ಸಂಘಟನೆಗಳು ಮತ್ತು ಅಂತರಾಷ್ಟ್ರೀಯ ಚಳವಳಿಗಳ ಷಡ್ಯಂತ್ರದ ಭಾಗವಾಗಿದೆ. ಕೇಂದ್ರ ಸರ್ಕಾರವು ಚರ್ಚೆಗೆ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ 15ನೇ ಬಜೆಟ್ ಫ್ಲಾಪ್ ಆಗಬಹುದು: ಕರಂದ್ಲಾಜೆ

ಸಿದ್ದರಾಮಯ್ಯನವರ 15ನೇ ಬಜೆಟ್ ನಿರೀಕ್ಷೆಗಳ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಅವರ 15ನೇ ಬಜೆಟ್ ಫ್ಲಾಪ್ ಆಗಬಹುದು. ಸರ್ಕಾರದ ಬಳಿ ಹಣವೇ ಇಲ್ಲ, ಖಜಾನೆ ಸಂಪೂರ್ಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗಿದೆ. ಇಂದು ಅದೂ ಕೂಡ ಕೆಲಸ ಮಾಡುತ್ತಿಲ್ಲ. ಮಹಿಳೆಯರಿಗೆ ಉಚಿತ ಬಸ್‌ಪಾಸ್‌ ನೀಡುವುದಾಗಿ ಭರವಸೆ ನೀಡಿದರು, ಆದರೆ ಕೇವಲ ಶೇ 20 ಬಸ್‌ಗಳು ಓಡುತ್ತಿವೆ, ಉಳಿದ ಶೇ 80 ಬಸ್‌ಗಳು ಸ್ಥಗಿತಗೊಂಡಿವೆ ಎಂದಿದ್ದಾರೆ.

ಇದನ್ನೂ ಓದಿ: ಎಲ್ಲಿಯವರೆಗೆ ಇಸ್ಲಾಂ ಇರುತ್ತೋ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿ ಇಲ್ಲ: ಅನಂತಕುಮಾರ್ ಹೆಗಡೆ

ಕರ್ನಾಟಕದಲ್ಲಿ ಸರ್ಕಾರಿ ನೌಕರರ ಸಂಬಳ ವಿಳಂಬವಾಗಿದೆ, ಎರಡು ತಿಂಗಳ ಹಿಂದೆ ನ್ಯಾಯಾಧೀಶರ ಸಂಬಳ ಎಂಟು ದಿನ ವಿಳಂಬವಾಗಿತ್ತು. ಇದು ಕರ್ನಾಟಕದ ಹಣೆಬರಹ ಎಂದು ಅವರು ವ್ಯಂಗ್ಯವಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!