ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ಮಧ್ಯೆ ಮುಂದುವರಿದ ಟ್ವೀಟ್ ಸಮರ!

| Updated By: sandhya thejappa

Updated on: Oct 20, 2021 | 2:19 PM

ಕೆಲವು ಪ್ರಜ್ಞಾಪೂರ್ವಕ ತಪ್ಪು ಗೊತ್ತೇ? ಅವುಗಳ ಪಟ್ಟಿ ಕೊಡುತ್ತೇವೆ, ಒಮ್ಮೆ ಕಣ್ಣಾಡಿಸಿ. ಅವೆಲ್ಲವೂ ಭಾರತೀಯ ದಂಡ ಸಂಹಿತೆ ಪ್ರಕಾರ ಅಪರಾಧ ಅಂತ ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.

ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ಮಧ್ಯೆ ಮುಂದುವರಿದ ಟ್ವೀಟ್ ಸಮರ!
ಎಚ್​.ಡಿ.ಕುಮಾರಸ್ವಾಮಿ
Follow us on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತು ಕರ್ನಾಟಕ ಬಿಜೆಪಿ (Karnataka BJP) ನಡುವೆ ಟ್ವೀಟ್ ಸಮರ ಮುಂದುವರಿದಿದೆ. ಟ್ವೀಟ್ ಮೂಲಕ ಕುಮಾರಸ್ವಾಮಿಗೆ ರಾಜ್ಯ ಬಿಜೆಪಿ ಘಟಕ ಟಾಂಗ್ ಕೊಟ್ಟಿದೆ. ಪ್ರಜ್ಞಾವಂತರು, ಬುದ್ಧಿವಂತರು ಎಂದು ಭ್ರಮಿಸಿಕೊಂಡವರು. ಅಂಥವರು ಮಾಡುವ ಕೆಲವು ಪ್ರಜ್ಞಾಪೂರ್ವಕ ತಪ್ಪು ಗೊತ್ತೇ? ಅವುಗಳ ಪಟ್ಟಿ ಕೊಡುತ್ತೇವೆ, ಒಮ್ಮೆ ಕಣ್ಣಾಡಿಸಿ. ಅವೆಲ್ಲವೂ ಭಾರತೀಯ ದಂಡ ಸಂಹಿತೆ ಪ್ರಕಾರ ಅಪರಾಧ ಅಂತ ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.

ಸಿಗ್ನಲ್ ಜಂಪ್, ವಿಶ್ವಾಸ ದ್ರೋಹ (ಬ್ರೀಚ್ ಆಫ್ ಟ್ರಸ್ಟ್), ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಎಲ್ಲಕ್ಕಿಂತ ಮುಖ್ಯವಾಗಿ ಬೈಗಮಿ. ಬೇರೆಯವರ ತಪ್ಪುಗಳ ಬಗ್ಗೆ ಸದಾ ಆಡಿಕೊಳ್ಳುವ ಹೆಚ್ ಡಿ ಕುಮಾರಸ್ವಾಮಿ ಇದೆಲ್ಲದರ ಬಗ್ಗೆ ತುಂಬಾ ಜಾಗರೂಕರಾಗಿರಬೇಕಲ್ಲವೇ? ಅಂತ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮೂಲಕ ಕುಮಾರಸ್ವಾಮಿಗೆ ಟಾಂಗ್ ನೀಡಿದೆ.

ಜೀವನದಲ್ಲಿ ಕೆಲ ಕೆಟ್ಟ ಘಟನೆಗಳು ನಡೆದಿವೆ, ಸರಿ ಮಾಡಿಕೊಂಡಿದ್ದೇನೆ: ಹೆಚ್​ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ
ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಆ ಪದ ಬಳಕೆ ಬಿಜೆಪಿ ಅವರಿಗೆ ಅನ್ವಯವಾಗುತ್ತದೆ. ಪ್ರತಿನಿತ್ಯ ಅದರ ಆಧಾರದ ಮೇಲೆ ಅವರು ನಡೆಯೋದು. ಬಿಜೆಪಿಯವರ ಮನೆಯಲ್ಲಿ ಹೆಗ್ಗಣವೇ ಸತ್ತು ಬಿದ್ದಿದೆ. ನಾನು ಯಾವುದನ್ನೂ ಕದ್ದು ಮಾಡಿಲ್ಲ. ವಿಧಾನಸಭೆ ಕಲಾಪದಲ್ಲಿಯೇ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಜೀವನದಲ್ಲಿ ಕೆಲ ಕೆಟ್ಟ ಘಟನೆಗಳು ನಡೆದಿವೆ. ದಾರಿ ತಪ್ಪಿದ್ದೆ ಅದನ್ನು ಸರಿ ಮಾಡಿಕೊಂಡಿದ್ದೇನೆ. ನಮ್ಮ ಬಂಡವಾಳ ಬಿಚ್ಚಿಡಲು ಹೇಳಿ, ನನ್ನದು ತೆರೆದ ಪುಸ್ತಕ. ನಾನು ಇನ್ನೊಬ್ಬರ ರೀತಿ ಕದ್ದುಮುಚ್ಚಿ ಏನನ್ನೂ ಮಾಡಿಲ್ಲ. ನನ್ನಿಂದ ಸಮಾಜಕ್ಕೆ ಯಾವುದೇ ತಪ್ಪು ಆಗಿಲ್ಲಾ. ಬಿಜೆಪಿಯಲ್ಲಿ ಒಬ್ಬೊಬ್ಬರದ್ದು ಒಂದೊಂದು ಇತಿಹಾಸ ಇದೆ. ನಾನು ಯಾರ ಜತೆಯೂ ರಾಜಿ ಮಾಡಿಕೊಂಡಿಲ್ಲ. ಕಾಂಗ್ರೆಸ್, ಬಿಜೆಪಿ ಜತೆ ನಾನು ಹೋರಾಟ ಮಾಡುತ್ತಿದ್ದೇನೆ. ನನ್ನ ವೈಯಕ್ತಿಕ ವಿಚಾರ ಪ್ರಸ್ತಾಪದಿಂದ ನಾನು ಆತಂಕಗೊಳ್ಳಲ್ಲ. ನಿಮ್ಮ ಹತ್ತರಷ್ಟು ಕೆಸರನ್ನು ನಾನು ಎರಚಬಲ್ಲೆ ಅಂತ ಅಭಿಪ್ರಾಯಪಟ್ಟಿದ್ದಾರೆ.

Published On - 12:21 pm, Wed, 20 October 21