ನಿಗಮ ಮಂಡಳಿ ನೇಮಕಾತಿ ಸಭೆ ಅಪೂರ್ಣ: ಸಿಎಂ, ಡಿಸಿಎಂ ಮಧ್ಯೆ ಮೂಡದ ಒಮ್ಮತ

ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಕುತೂಹಲ ಹುಟ್ಟುಹಾಕಿದೆ. ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ನೇತೃತ್ವದಲ್ಲಿ ಮಂಗಳವಾರ ತಡರಾತ್ರಿವರೆಗು ತಾಜ್ ವೆಸ್ಟ್ ಎಂಡ್ ಹೋಟೆಲ್​​ನಲ್ಲಿ ಸಭೆ ನಡೆದರೂ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಈ ಹಿನ್ನೆಲೆ ಸುರ್ಜೆವಾಲಾ ನ.28 ರಂದು ರಾಜ್ಯಕ್ಕೆ ಮತ್ತೆ ಬರುವ ಸಾಧ್ಯತೆ ಇದೆ.

ನಿಗಮ ಮಂಡಳಿ ನೇಮಕಾತಿ ಸಭೆ ಅಪೂರ್ಣ: ಸಿಎಂ, ಡಿಸಿಎಂ ಮಧ್ಯೆ ಮೂಡದ ಒಮ್ಮತ
ಡಿಕೆ ಶಿವಕುಮಾರ್​, ಸಿದ್ದರಾಮಯ್ಯ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on: Nov 22, 2023 | 10:23 AM

ಬೆಂಗಳೂರು ನ.22: ನಿಗಮ-ಮಂಡಳಿಗಳಿಗೆ (Corporation-Board) ಅಧ್ಯಕ್ಷರ ನೇಮಕ ವಿಚಾರವಾಗಿ ಮಂಗಳವಾರ (ನ.22) ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ (Randeep Singh Surjewala) ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ (DK Shivakumar) ಭಾಗಿಯಾಗಿದ್ದರು. ತಡರಾತ್ರಿವರೆಗು ನಡೆದ ಸಭೆ ಅಪೂರ್ಣಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಹೌದು ಅಧ್ಯಕ್ಷರ ನೇಮಕ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ರಣದೀಪ​ ಸುರ್ಜೆವಾಲಾ ಮತ್ತೊಮ್ಮೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ.

ಈ ಸಂಬಂಧ ಸುರ್ಜೇವಾಲ ನವೆಂಬರ್​ 28ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಇನ್ನು ಮಂಗಳವಾರ ನಡೆದ ಸಭೆಯಲ್ಲಿ ಹಲವು ನಾಯಕರ ಹೆಸರು ಪ್ರಸ್ತಾಪವಾಗಿದ್ದು, ಶಾರ್ಟ್ ಲಿಸ್ಟ್ ಮಾಡಲಾಗಿದೆ. ಈ ಪಟ್ಟಿಯನ್ನು ತೆರಳಿರುವ ಸುರ್ಜೆವಾಲಾ ಎಐಸಿಸಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ನಂತರ ರಾಜ್ಯಕ್ಕೆ ಆಗಮಿಸಿ ಅಂತಿಮ ತೀರ್ಮಾನ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂಭಾವ್ಯರಿಗೆ ಕರೆ ಮಾಡಿ ವಿಚಾರಿಸುತ್ತಿರುವ ಸುರ್ಜೇವಾಲ, ಇಲ್ಲಿದೆ ಪಟ್ಟಿ

ಸಂಭಾವ್ಯರ ಪಟ್ಟಿ ಹೀಗಿದೆ

  • ಪಿ.ಎಂ ನರೇಂದ್ರ ಸ್ವಾಮಿ
  • ರಮೇಶ್ ಬಾಬು ಬಂಡಿಸಿದ್ದೇಗೌಡ
  • ಅನಿಲ್ ಚಿಕ್ಕಮಾದು
  • ಟಿ.ಡಿ ರಾಜೇಗೌಡ
  • ಶಿವಲಿಂಗೇಗೌಡ
  • ಬಿ.ಕೆ ಸಂಗಮೇಶ್
  • ಬಂಗಾರಪೇಟೆ ನಾರಾಯಣಸ್ವಾಮಿ
  • ಕೆ.ವೈ ನಂಜೇಗೌಡ
  • ಬಿ.ಆರ್ ಪಾಟೀಲ್
  • ಗಣೇಶ್ ಹುಕ್ಕೇರಿ
  • ಮಹಾಂತೇಶ್ ಕೌಜಲಗಿ
  • ಯಶವಂತ್ ರಾಯ್ ಗೌಡ ಪಾಟೀಲ್
  • ಬಿ.ಜಿ ಗೋವಿಂದಪ್ಪ
  • ರಾಘವೇಂದ್ರ ಹಿಟ್ನಾಳ್
  • ರಘುಮೂರ್ತಿ
  • ಭೀಮಣ್ಣ ನಾಯ್ಕ್
  • ಸತೀಶ್ ಸೈಲ್
  • ಪ್ರಸಾದ್ ಅಬ್ಬಯ್ಯ
  • ಜಿ.ಟಿ ಪಾಟೀಲ್
  • ಡಿ.ಆರ್ ಪಾಟೀಲ್
  • ಬಸನಗೌಡ ತುರುವಿಹಾಳ್

ಎಷ್ಟು ಮಂದಿಗೆ ಅವಕಾಶ?: ಸರ್ಕಾರದ ಅಧೀನದಲ್ಲಿ ಒಟ್ಟಾರೆ 85 ನಿಗಮಗಳಿದ್ದು, ಅಲ್ಲಿಗೆ ನೇಮಕ ಮಾಡುವ ಪೂರ್ಣ ಅಧಿಕಾರ ಸರ್ಕಾರಕ್ಕಿದೆ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಿರ್ದೇಶಕರನ್ನು ನೇಮಕ ಮಾಡಲಾಗುತ್ತದೆ. ಎಲ್ಲ ರಾಜಕೀಯ ಪಕ್ಷಗಳು ತಮ್ಮ ಅಧಿಕಾರದ ಸರದಿ ಬಂದಾಗ ನೇಮಕಗಳನ್ನು ಮಾಡುತ್ತವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?