ಬೆಂಗಳೂರು ನ.22: ನಿಗಮ-ಮಂಡಳಿಗಳಿಗೆ (Corporation-Board) ಅಧ್ಯಕ್ಷರ ನೇಮಕ ವಿಚಾರವಾಗಿ ಮಂಗಳವಾರ (ನ.22) ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ (DK Shivakumar) ಭಾಗಿಯಾಗಿದ್ದರು. ತಡರಾತ್ರಿವರೆಗು ನಡೆದ ಸಭೆ ಅಪೂರ್ಣಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಹೌದು ಅಧ್ಯಕ್ಷರ ನೇಮಕ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ರಣದೀಪ ಸುರ್ಜೆವಾಲಾ ಮತ್ತೊಮ್ಮೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ.
ಈ ಸಂಬಂಧ ಸುರ್ಜೇವಾಲ ನವೆಂಬರ್ 28ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಇನ್ನು ಮಂಗಳವಾರ ನಡೆದ ಸಭೆಯಲ್ಲಿ ಹಲವು ನಾಯಕರ ಹೆಸರು ಪ್ರಸ್ತಾಪವಾಗಿದ್ದು, ಶಾರ್ಟ್ ಲಿಸ್ಟ್ ಮಾಡಲಾಗಿದೆ. ಈ ಪಟ್ಟಿಯನ್ನು ತೆರಳಿರುವ ಸುರ್ಜೆವಾಲಾ ಎಐಸಿಸಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ನಂತರ ರಾಜ್ಯಕ್ಕೆ ಆಗಮಿಸಿ ಅಂತಿಮ ತೀರ್ಮಾನ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಸಂಭಾವ್ಯರಿಗೆ ಕರೆ ಮಾಡಿ ವಿಚಾರಿಸುತ್ತಿರುವ ಸುರ್ಜೇವಾಲ, ಇಲ್ಲಿದೆ ಪಟ್ಟಿ
ಎಷ್ಟು ಮಂದಿಗೆ ಅವಕಾಶ?: ಸರ್ಕಾರದ ಅಧೀನದಲ್ಲಿ ಒಟ್ಟಾರೆ 85 ನಿಗಮಗಳಿದ್ದು, ಅಲ್ಲಿಗೆ ನೇಮಕ ಮಾಡುವ ಪೂರ್ಣ ಅಧಿಕಾರ ಸರ್ಕಾರಕ್ಕಿದೆ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಿರ್ದೇಶಕರನ್ನು ನೇಮಕ ಮಾಡಲಾಗುತ್ತದೆ. ಎಲ್ಲ ರಾಜಕೀಯ ಪಕ್ಷಗಳು ತಮ್ಮ ಅಧಿಕಾರದ ಸರದಿ ಬಂದಾಗ ನೇಮಕಗಳನ್ನು ಮಾಡುತ್ತವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ