ಭ್ರಷ್ಟಾಚಾರ ಮುಕ್ತ ಆಡಳಿತ ಅಸಾಧ್ಯ: ಸಿದ್ದರಾಮಯ್ಯ

ದೇಶದ 140 ಕೋಟಿ ಜನರು ಈ ಸಂಪನ್ಮೂಲಗಳಲ್ಲಿ ಪಾಲುದಾರರಾಗಿದ್ದಾರೆ. ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ದಲಿತರು ಮಾತ್ರವಲ್ಲ, ಈ ದೇಶದ ಪ್ರತಿಯೊಬ್ಬ ನಾಗರಿಕರಿಗೂ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಹಕ್ಕಿದೆ. ಯಾವುದೇ ಸಮುದಾಯ ಅಥವಾ ಅಲ್ಪಸಂಖ್ಯಾತರು ಮಾತ್ರ ಸಂಪನ್ಮೂಲಗಳ ಮೇಲೆ ಹಕ್ಕುಗಳನ್ನು ಹೊಂದಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭ್ರಷ್ಟಾಚಾರ ಮುಕ್ತ ಆಡಳಿತ ಅಸಾಧ್ಯ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Feb 20, 2024 | 9:47 AM

ಹಾವೇರಿ, ಫೆಬ್ರವರಿ 20: ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಭ್ರಷ್ಟಾಚಾರದ (Corruption) ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಭ್ರಷ್ಟಾಚಾರ ಇಲ್ಲ ಎಂದು ಯಾರು ಹೇಳಿದರು? ಭ್ರಷ್ಟಾಚಾರ ಮುಕ್ತವಾಗುವುದು ಅಸಾಧ್ಯ. ಕಪ್ಪು ಕುರಿಗಳು ಯಾವಾಗಲೂ ಇರುತ್ತವೆ. ಆದರೆ ಭಷ್ಟ್ರಾಚಾರಿಗಳನ್ನು ಗುರುತಿಸಿ ಶಿಕ್ಷಿಸಲಾಗುತ್ತದೆ ಎಂದು ಹೇಳಿದರು.

ದೇಶದ 140 ಕೋಟಿ ಜನರು ಈ ಸಂಪನ್ಮೂಲಗಳಲ್ಲಿ ಪಾಲುದಾರರಾಗಿದ್ದಾರೆ. ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ದಲಿತರು ಮಾತ್ರವಲ್ಲ, ಈ ದೇಶದ ಪ್ರತಿಯೊಬ್ಬ ನಾಗರಿಕರಿಗೂ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಹಕ್ಕಿದೆ. ಯಾವುದೇ ಸಮುದಾಯ ಅಥವಾ ಅಲ್ಪಸಂಖ್ಯಾತರು ಮಾತ್ರ ಸಂಪನ್ಮೂಲಗಳ ಮೇಲೆ ಹಕ್ಕುಗಳನ್ನು ಹೊಂದಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲೇ ಅನುದಾನ ತಾರತಮ್ಯ: ಬಿಜೆಪಿ ಕ್ಷೇತ್ರಕ್ಕೆ ಜಾರಿಯಾಗಿದ್ದ ಹಣ ಕಾಂಗ್ರೆಸ್​ ಕ್ಷೇತ್ರಕ್ಕೆ ಹಂಚಿಕೆ

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಇತ್ತೀಚೆಗಷ್ಟೇ ಮಂಡಿಸಿದ ಬಜೆಟ್‌ನಲ್ಲಿ ತಮ್ಮ ವರುಣಾ ವಿಧಾನಸಭಾ ಕ್ಷೇತ್ರಕ್ಕೆ 2 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಯಡಿಯೂರಪ್ಪ ಅವರು ಈಗ ಯಾವ ಹುದ್ದೆಯಲ್ಲಿದ್ದಾರೆ? ಹಂಚಿಕೆ ಕುರಿತು ಮಾಧ್ಯಮ ವರದಿ ಸುಳ್ಳು ಎಂದು ತಳ್ಳಿಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:04 am, Tue, 20 February 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್