ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ (Corruption) ಆಗಿದೆ. ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಾಗ್ದಾಳಿ ಮಾಡಿದರು. ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಆಯೋಜಿಸಿದ್ದ 4,283 ಕೋಟಿ ರೂ. ವೆಚ್ಚದ 220 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಭಿವೃದ್ಧಿ ಕೆಲಸ ಮಾಡುತ್ತಿದೆ. ಮೊಬೈಲ್ ಉತ್ಪಾದನೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಕೊರೊನಾ ವೇಳೆ ಲಸಿಕೆ ನೀಡಲು ಒಂದೇ ಒಂದು ಪೈಸೆ ಪಡೆದಿಲ್ಲ. ಬಡವರ ಮನೆಗೆ ಉಚಿತವಾಗಿ ತಲಾ 5 ಕೆಜಿ ಅಕ್ಕಿ ನೀಡಿದ್ದೇವೆ. ಸಿಎಂ ಬೊಮ್ಮಾಯಿ ಸರ್ಕಾರ ಲಿಂಗಾಯತರ ಮೀಸಲಾತಿ ಹೆಚ್ಚಿಸಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. ರಾಯಚೂರಿನಲ್ಲಿ ವಿಮಾನ ನಿಲ್ದಾಣ ಕೂಡ ಸ್ಥಾಪನೆ ಮಾಡುತ್ತೇವೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸರ್ವನಾಶ ಆಗುತ್ತಿದೆ. ಉತ್ತರ ಭಾರತದಲ್ಲಿ ಮೂರು ಕಡೆ ಎನ್ ಡಿಎ ಸರ್ಕಾರ ರಚನೆ ಮಾಡಿದೆ. ಕಾಂಗ್ರೆಸ್ ಉತ್ತರ ಭಾರತದಲ್ಲಿ ಮುಗ್ಗರಿಸಿದೆ. ಜಿಲ್ಲೆಯ ಎಲ್ಲ ಅಭ್ಯರ್ಥಿಗಳನ್ನ ಗೆಲ್ಲಿಸಿ. ರಾಜ್ಯದಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ತನ್ನಿ ಎಂದರು.
ಇದನ್ನೂ ಓದಿ: ಬಿಜೆಪಿಯಲ್ಲಿ ಯಾರೂ ಗುಂಡಾ ನಾಯಕರಿಲ್ಲ: ಡಿ.ಕೆ.ಶಿವಕುಮಾರ್ ಆರೋಪಕ್ಕೆ ಯತ್ನಾಳ್ ತಿರುಗೇಟು
ರಾಜ್ಯ ಸರ್ಕಾರ 4500 ಸಾವಿರ ಕೋಟಿ ರೂ. ಮೊತ್ತದ ಯೋಜನೆಗಳನ್ನ ನೀಡಿದೆ. ಜೆಜೆಎಮ್, ಕೃಷ್ಣಾ ಭಾಗ್ಯ ಜಲ ನಿಗಮ, 226 ಕಾಮಗಾರಿ ಮಾಡಲಾಗಿದೆ. ಕಾಂಗ್ರೆಸ್ ಪಾರ್ಟಿ ಸರ್ಕಾರದಲ್ಲಿ ಒಳ್ಳೆ ಅಧಿಕಾರ ಕೊಡತ್ತಾ ಎಂದು ಪ್ರಶ್ನಿಸಿದರು. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಲಿಷ್ಠ ಸರ್ಕಾರ ಕೊಟ್ಟಿದ್ದಾರೆ. ಜೆಡಿಎಸ್ ಕಡಿಮೆ ಸೀಟು ಪಡೆದು, ದುರ್ಬಲ ಸರ್ಕಾರ ಮಾಡಿತ್ತು ಎಂದು ಹೇಳಿದರು.
ಶಾಸಕ ಶಿವನಗೌಡ ನಾಯಕ್ ಮಾತನಾಡಿ, ಸ್ವಾತಂತ್ರದ 70 ವರ್ಷಗಳ ಬಳಿಕ ಅಭಿವೃದ್ಧಿ ನೀಡುತ್ತಿದ್ದೇವೆ. ಅಮಿತ್ ಶಾ ಬಂದಿದ್ದು ನಮ್ಮ ಪುಣ್ಯ. ಅಮಿತ್ ಶಾ ಡೈನಾಮಿಕ್ ಸರ್ದಾರ್ ವಲ್ಲಭಭಾಯಿ ಪಟೇಲ್ ಇದ್ದಾಂಗೆ. ಅವರು ಮುಂದೆ ಇಟ್ಟ ಹೆಜ್ಜೆ ಹಿಂದೆ ಇಡೋದಿಲ್ಲ. ಈ ಭಾಗಕ್ಕೆ ಏಮ್ಸ್ ಸ್ಥಾಪನೆ ಮಾಡಬೇಕು ಅಂತ ಕೇಳಿಕೊಳ್ಳುತ್ತೇನೆ.
ಇದನ್ನೂ ಓದಿ: ಊರಿಗೊಬ್ಳೆ ನಾನೇ ಪದ್ಮಾವತಿ ಅಂತ ಸಿದ್ದರಾಮಯ್ಯ ತಿರುಗಾಡುತ್ತಿದ್ದರು: ಪ್ರತಾಪ್ ಸಿಂಹ
ಜಲ ಜೀವನ್, ಜಲಧಾರೆಗೆ 2800 ಕೋಟಿ ರೂ. ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ರಾಯಚೂರಿನಲ್ಲಿ ಏರ್ ಪೋರ್ಟ್, ಡಿಪ್ಲೊಮಾ, ಐಟಿಐ ಕಾಲೇಜುಗಳು, ಕೃಷ್ಣಾ ನದಿ ತೀರದ ಭಾಗಕ್ಕೆ ಲಿಫ್ಟ್ ಇರಿಗೇಶನ್ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚು ಒತ್ತು ನೀಡಬೇಕಿದೆ. ಇಲ್ಲಿನ ಜನ ಗೂಳೆ ಹೋಗುವ ಪದ್ದತಿ ತಪ್ಪಿಸಬೇಕಿದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:47 pm, Sun, 26 March 23