ರಾಮ ಮಂದಿರ ಉದ್ಘಾಟನೆಗೆ ದಿನಗಣನೆ: ಸಂಭ್ರಮ ಕೆಡಿಸಲು ಕಾಂಗ್ರೆಸ್​ ಕುತಂತ್ರ, ಬಿಜೆಪಿ ಆರೋಪ

ರಾಮಮಂದಿರ ನಿರ್ಮಾಣದ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಇದೀಗ ರಾಮಮಂದಿರ ಉದ್ಘಾಟನೆ ಸಂಭ್ರಮವನ್ನು ಕೆಡಿಸಲು ಕುತಂತ್ರಗಳನ್ನ ಹೆಣೆಯುತ್ತಿದೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಆರೋಪ ಮಾಡಿದೆ.

ರಾಮ ಮಂದಿರ ಉದ್ಘಾಟನೆಗೆ ದಿನಗಣನೆ: ಸಂಭ್ರಮ ಕೆಡಿಸಲು ಕಾಂಗ್ರೆಸ್​ ಕುತಂತ್ರ, ಬಿಜೆಪಿ ಆರೋಪ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 06, 2024 | 4:34 PM

ಬೆಂಗಳೂರು, ಜನವರಿ 06: ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಜ.22ರಂದು ಶ್ರೀರಾಮ ಮಂದಿರದ ಉದ್ಘಾಟನೆ ಆಗುತ್ತಿದೆ. ಇಡೀ ದೇಶ ಈ ಸಂಭ್ರಮದಲ್ಲಿದೆ. ರಾಮಮಂದಿರ ನಿರ್ಮಾಣದ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಇದೀಗ ರಾಮಮಂದಿರ ಉದ್ಘಾಟನೆ ಸಂಭ್ರಮವನ್ನು ಕೆಡಿಸಲು ಕುತಂತ್ರಗಳನ್ನ ಹೆಣೆಯುತ್ತಿದೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಆರೋಪ ಮಾಡಿದೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ರಾಜ್ಯ ಬಿಜೆಪಿ, ಪ್ರಭು ಶ್ರೀರಾಮ ಮಂದಿರದ ಉದ್ಘಾಟನೆ ಜನವರಿ 22 ರಂದು ಅದ್ಧೂರಿಯಾಗಿ ಆಗುತ್ತಿದೆ. ಇಡೀ ದೇಶವೇ ಸಂಭ್ರಮದಲ್ಲಿರುವಾಗ, ಕಾಂಗ್ರೆಸ್​ ಸರ್ಕಾರ ರಾಜ್ಯದಲ್ಲಿ ಸಂಭ್ರಮವನ್ನು ಕೆಡಿಸಲು ಹೆಣಿಯುತ್ತಿರುವ ಕುತಂತ್ರಗಳು:

  • ಅಯೋಧ್ಯಗೆ ಹೋಗುವವರಿಗೆ ಗೋಧ್ರಾ ಬೆದರಿಕೆ
  • ಶುಭ ಘಳಿಗೆ ವೇಳೆ ಸುಳ್ಳು ಸುದ್ಧಿ ಹಬ್ಬಿಸುವುದು
  • ರಾಮ ಭಕ್ತರು ಸಂಭ್ರಮಿಸದಂತೆ 144 ಸೆಕ್ಷನ್‌ ಜಾರಿ
  • ರಾಜ್ಯಾದ್ಯಂತ 22 ರಂದು ವಿದ್ಯುತ್‌ ಸ್ಥಗಿತ
  • ಮನೆ ಮನೆಯ ಟಿವಿ ಕೇಬಲ್‌ ಸಂಪರ್ಕ ತಪ್ಪಿಸುವುದು

ರಾಮ ಬಂಟ ಹನುಮನ ನಾಡಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದ ದುರಾಡಳಿತಕ್ಕೆ, ಕುತಂತ್ರಕ್ಕೆ, ರಾಜ್ಯದ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠಕಲಿಸಲಿರುವುದು ಅಷ್ಟೇ ಸತ್ಯ ಎಂದು ಕಿಡಿಕಾರಿದೆ.

ಬಿಜೆಪಿ ಟ್ವೀಟ್​

ಅಧಿಕಾರಕ್ಕೆ ಬಂದ ಕಾಂಗ್ರೆಸ್​ ರಾಜ್ಯದಲ್ಲಿ ಹಿಂದೂಗಳನ್ನು ಸಂಪೂರ್ಣವಾಗಿ ಹತ್ತಿಕ್ಕುತ್ತಿರುವ ಪರಿ.  ಮತಾಂತರ ನಿಷೇಧ ಕಾಯ್ದೆ ವಾಪಸ್​, ದೇವಾಲಯಗಳು ಮುಜರಾಯಿ ಸುಪರ್ದಿಗೆ, ದೇವಸ್ಥಾನಗಳ ಹಣ ಮೌಲ್ವಿಗಳ ಆತ್ಮ ತೃಪ್ತಿಗೆ, ಕೋಲಾರ, ಶಿವಮೊಗ್ಗ, ಉಡುಪಿಯಲ್ಲಿ ಕೋಮುಗಲಭೆ, ದತ್ತ ಪೀಠ, ರಾಮ ಮಂದಿರ ಭಕ್ತರ ಕೇಸ್‌ ಓಪನ್, ಬೀದಿಗೆ ಬಂದ ‌PFI ಗೂಂಡಾಗಳು – ಹಿಂದೂಗಳೇ ಟಾರ್ಗೆಟ್, ಮತ್ತೆ ಜಾತಿಗಳ ನಡುವೆ ಕಂದಕ ಸೃಷ್ಟಿಸಿ ಧರ್ಮ ವಿಭಜನೆ.

ಇದನ್ನೂ ಓದಿ: ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಅಭಿಯಾನ ಆರಂಭ: ಸುನೀಲ್‍ ಕುಮಾರ್

ಸಿಎ ಸಿದ್ದರಾಮಯ್ಯ ಅವರ ಸೊಕ್ಕು ಇಳಿಸಲು ಜನರಿಗೆ ಇರುವ ಒಂದೇ ಒಂದು ಅವಕಾಶವೆಂದರೆ 2024 ಲೋಕಸಭಾ ಚುನಾವಣೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್