AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​​ಗೆ ಬಿಗ್ ರಿಲೀಫ್; ಪಾಸ್‌ಪೋರ್ಟ್ ನವೀಕರಣ, ದುಬೈಗೆ ತೆರಳಲು ಕೋರ್ಟ್ ಅನುಮತಿ- ಆದರೆ ಒಂದು ಷರತ್ತು

DK Shivakumar: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ಹಿಂದೆ ನ್ಯಾಯಾಲಯವು ಅನುಮತಿ ಇಲ್ಲದೇ ವಿದೇಶ ಪ್ರಯಾಣ ಮಾಡದಂತೆ ಸೂಚಿಸಿತ್ತು. ಈ ಕಾರಣ, ದುಬೈಗೆ ತೆರಳಲು ಅನುಮತಿ ಕೋರಿ ಡಿಕೆಶಿ ಅರ್ಜಿ ಸಲ್ಲಿಸಿದ್ದರು.

ಡಿಕೆ ಶಿವಕುಮಾರ್​​ಗೆ ಬಿಗ್ ರಿಲೀಫ್; ಪಾಸ್‌ಪೋರ್ಟ್ ನವೀಕರಣ, ದುಬೈಗೆ ತೆರಳಲು ಕೋರ್ಟ್ ಅನುಮತಿ- ಆದರೆ ಒಂದು ಷರತ್ತು
ಡಿಕೆ ಶಿವಕುಮಾರ್
TV9 Web
| Edited By: |

Updated on:Mar 26, 2022 | 1:22 PM

Share

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ದೆಹಲಿಯ ಡಿಕೆಶಿ ನಿವಾಸದ ಮೇಲೆ ಐಟಿ ದಾಳಿ ಪ್ರಕರಣದ ನಂತರ ವಿದೇಶಕ್ಕೆ ತೆರಳದಂತೆ ಕೋರ್ಟ್ ಸೂಚಿಸಿತ್ತು. ಜತೆಗೆ ತೆರಳಬೇಕಿದ್ದರೆ ಕೋರ್ಟ್ ಅನುಮತಿ ಪಡೆಯುವಂತೆ ಹೇಳಿತ್ತು. ಇದಕ್ಕೆ ಸಂಬಂಧಿಸಿದಂತೆ ಡಿಕೆಶಿ ದುಬೈಗೆ ತೆರಳಲು ಅನುಮತಿ ಕೋರಿದ್ದರು. ದುಬೈನ ಎಕ್ಸ್‌ಪೋನಲ್ಲಿ ಭಾಗಿಯಾಗುವಂತೆ ಕಂಪನಿ ಆಹ್ವಾನಿಸಿದೆ. LPFLEX ಬೇಸ್ ಇಂಡಸ್ಟ್ರಿ ಆಹ್ವಾನದ ಮೇಲೆ ಕಂಪನಿಯ ವಿಶೇಷ ಅತಿಥಿಯಾಗಿ ತೆರಳಬೇಕು ಎಂದು ಮಾ.28ರಿಂದ ಏ.3ರವರೆಗೆ ದುಬೈಗೆ ತೆರಳಲು ಡಿ.ಕೆ.ಶಿವಕುಮಾರ್ ಅನುಮತಿ ಕೋರಿದ್ದರು. ಇದಕ್ಕೆ ಕೋರ್ಟ್ ಸಮ್ಮತಿಸಿದೆ. ಪಾಸ್‌ಪೋರ್ಟ್ ನವೀಕರಣಕ್ಕೂ ಡಿಕೆಶಿ ಅನುಮತಿ ಕೋರಿದ್ದರು. ಸೆ.22, 2021ರಂದೇ ಪಾಸ್‌ಪೋರ್ಟ್ ಅವಧಿ ಮುಕ್ತಾಯವಾಗಿದೆ. ಹೀಗಾಗಿ ಪಾಸ್‌ಪೋರ್ಟ್ ನವೀಕರಿಸಲು ಅನುಮತಿ ಬೇಕೆಂದು ಡಿಕೆಶಿ ಕೋರಿದ್ದರು. ಡಿ.ಕೆ.ಶಿವಕುಮಾರ್ ಅವರು ಸಲ್ಲಿಸಿದ್ದ ಎರಡೂ ಅರ್ಜಿಗೆ ಕೋರ್ಟ್ ಸಮ್ಮತಿ ಸೂಚಿಸಿದೆ.

ಆದರೆ ನ್ಯಾಯಾಲಯವು ಡಿಕೆ ಶಿವಕುಮಾರ್​ ಅನುಮತಿ ನೀಡುವಾಗ ಷರತ್ತೊಂದನ್ನು ವಿಧಿಸಿದೆ. ಏ.22ರ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಿ ಪಾಸ್‌ಪೋರ್ಟ್ ನವೀಕರಣ, ದುಬೈಗೆ ತೆರಳಲು ಕೋರ್ಟ್ ಅನುಮತಿ ನೀಡಿದೆ.

ಹಿಜಾಬ್​ ಬಗ್ಗೆ ಗುರುಗಳು, ಪೋಷಕರು ಮಕ್ಕಳ ಮನವೊಲಿಸಬೇಕು: ಡಿಕೆಶಿ

ಹಿಜಾಬ್ ವಿಚಾರದಲ್ಲಿ ಮಕ್ಕಳು ಹಠ ಹಿಡಿದಿರುವ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ‘‘ವಿದ್ಯಾಭ್ಯಾಸ ಬಹಳ ಮುಖ್ಯ. ಹಿಜಾಬ್ ವಿಚಾರದಲ್ಲಿ ಮಕ್ಕಳನ್ನು ಕನ್ವಿನ್ಸ್ ಮಾಡಬೇಕು. ತಂದೆತಾಯಿಗಳು, ಗುರುಗಳು ಮಕ್ಕಳ ಮನವೊಲಿಸಬೇಕು. ಗುರುಗಳು ಹೇಳಿದರೆ ಮಕ್ಕಳು ಕೇಳ್ತಾರೆ. ಕಾಂಗ್ರೆಸ್ ಪಕ್ಷ ಸಂವಿಧಾನದಲ್ಲಿ ಇರುವ ವಿಚಾರಗಳಿಗೆ ಬೆಲೆ ಕೊಡುತ್ತದೆ. ಸಂವಿಧಾನದಲ್ಲಿ ಇರುವ ವಿಚಾರಗಳೇ ನಮ್ಮ ಬೈಬಲ್, ನಮ್ಮ ಕುರಾನ್, ನಮ್ಮ ಭಗವದ್ಗೀತೆ. ಈಗ ನ್ಯಾಯಾಲಯ ಒಂದು ತೀರ್ಮಾನ ಕೊಟ್ಟಿದೆ. ಕೆಲವರು ಅದನ್ನು ಒಪ್ತಾರೆ,ಕೆಲವರು ಒಪ್ಪಲ್ಲ. ‘‘ಈ ಕೋರ್ಟ್ ತೀರ್ಪಿನ ಮೇಲೆ ಸುಪ್ರೀಂ ಕೋರ್ಟ್​ಗೂ ಹೋಗಲು ಅವಕಾಶವಿದೆ. ನ್ಯಾಯಾಲಯದ ತೀರ್ಪನ್ನು ಸರಿಯಲ್ಲ ಅಂತಾ ಹೇಳುವುದಿಲ್ಲ’’ ಎಂದಿದ್ದಾರೆ ಡಿಕೆ ಶಿವಕುಮಾರ್.

ಸಿದ್ದರಾಮಯ್ಯ ಸ್ವಾಮೀಜಿಗಳ ಸಂಬಂಧ ಹೇಳಿಕೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ‘‘ಆ ವಿಷಯದ ಬಗ್ಗೆ ಅವರೇ ಉತ್ತರ ಕೊಡುತ್ತಾರೆ. ಈಗಾಗಲೇ ಅವರು ಟ್ವೀಟ್ ಮಾಡಿದ್ದಾರೆ. ಅವರಿಗೆ ಎಲ್ಲ ಧರ್ಮ, ಸ್ವಾಮೀಜಿಗಳ ಮೇಲೆ ಗೌರವ ಇದೆ. ಅವರು ಸಿಎಂ ಆಗಿದ್ದಾಗ ಎಲ್ಲ ಧರ್ಮಗಳಿಗೂ ಬೇಕಾದಷ್ಟು ಸಹಾಯ ಮಾಡಿದ್ದಾರೆ. ಅವರು ಏನು ಮಾತಾಡಿದ್ದಾರೋ ಅದಕ್ಕೆ ಅವರೇ ಉತ್ತರ ಕೊಡ್ತಾರೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ದಿ ಮೋದಿ ಸ್ಟೋರಿ ವೆಬ್​ಸೈಟ್​ ಉದ್ಘಾಟನೆ; ಈ ಹೊಸ ಪೋರ್ಟಲ್​​​ನಲ್ಲಿ ಇರಲಿವೆ ಪ್ರಧಾನಿ ಮೋದಿ ಬಗೆಗಿನ ಇಂಟರೆಸ್ಟಿಂಗ್​ ವಿಷಯಗಳು !

ಸೂಕ್ಷ್ಮ ನೀರಾವರಿ ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ 2ನೇ ಕಂತಿನ ಹಣ ಬಿಡುಗಡೆ

Published On - 1:11 pm, Sat, 26 March 22

Follow Us
TV9 Web
TV9 Web

TV9 Kannada

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!