ಬೆಂಗಳೂರು ಗ್ರಾಮಾಂತರಕ್ಕೆ ಡಿಕೆ ಸುರೇಶ್ ವಿರುದ್ಧ ಬಿಜೆಪಿಯಿಂದ ಯಾರು? ಕೆಲ ಅಚ್ಚರಿ ಸಂಗತಿ ಬಿಚ್ಚಿಟ್ಟ ಯೋಗೇಶ್ವರ್

ಲೋಕಸಭಾ ಚುನಾವಣೆ ರಂಗೇರಿದ್ದು, ಈಗಾಗಲೇ ಬಿಜೆಪಿ ಎಲ್ಲ ಪಕ್ಷಗಳಿಗಿಂತ ಮೊದಲು ವಿವಿಧ ರಾಜ್ಯಗಳ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಮುಂಚೂಣಿಯಲ್ಲಿದ್ದು, ಈಗ 2ನೇ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇದರಲ್ಲಿ ಕರ್ನಾಟಕದ (BJP Karnataka) ಅಭ್ಯರ್ಥಿಗಳ ಪಟ್ಟಿ ಸಹ ಇರಲಿದೆ ಎನ್ನಲಾಗಿದ್ದು, ಇಂದು (ಮಾ. 6) ನವದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಇದರ ಮಧ್ಯೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಕಾಂಗ್ರೆಸ್​ ಡಿಕೆ ಸುರೇಶ್​ ವಿರುದ್ಧ ಬಿಜೆಪಿಯಿಂದ ಅಚ್ಚರಿ ಹೆಸರು ಕೇಳಿಬಂದಿದೆ. ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಅವರು ಕೆಲ ಅಚ್ಚರಿ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಡಿಕೆ ಸುರೇಶ್ ವಿರುದ್ಧ ಬಿಜೆಪಿಯಿಂದ ಯಾರು? ಕೆಲ ಅಚ್ಚರಿ ಸಂಗತಿ ಬಿಚ್ಚಿಟ್ಟ ಯೋಗೇಶ್ವರ್
ಸಿ.ಪಿ ಯೋಗೇಶ್ವರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 06, 2024 | 4:35 PM

ನವದೆಹಲಿ, (ಮಾರ್ಚ್ 06): ಲೋಕಸಭಾ ಚುನಾವಣೆಗೆ (LoK Sabha Election 2024) ಭರದ ಸಿದ್ಧತೆ ನಡೆಯುತ್ತಿದೆ. ಇನ್ನೇನು ಚುನಾವಣೆ ಸಮೀಪ ಬರುತ್ತಿದ್ದು, ಶೀಘ್ರದಲ್ಲೇ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ. ಅದರಲ್ಲೂ ರಾಜ್ಯ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಜೋರಾಗಿದೆ. ಇದರ ಮಧ್ಯೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ(Bengaluru rural lok sabha constituency) ಡಿಕೆ ಸುರೇಶ್​ ವಿರುದ್ಧ ಬಿಜೆಪಿಯಿಂದ ಡಾ. ಸಿಎನ್ ಮಂಜುನಾಥ್​ ಕಣಕ್ಕಿಳಿಸಬೇಕೆಂಬ ಚರ್ಚೆಗಳು ನಡೆದಿವೆ. ಇವರನ್ನು ಹೊರತುಪಡಿಸಿ ಅಚ್ಚರಿ ಹೆಸರುಗಳು ಕೇಳಿಬಂದಿವೆ. ಅಶ್ವತ್ಥ್ ನಾರಾಯಣ, ವಿಪಕ್ಷ ನಾಯಕ ಆರ್ ಅಶೊಕ್ ಸ್ಪರ್ಧೆ ಮಾಡಬಹುದು ಎಂದು ಖುದ್ದು ಸಿಪಿ ಯೋಗೇಶ್ವರ್ (cp yogeshwar) ಅಚ್ಚರಿ ಹೇಳಿಕೆ ನೀಡಿದ್ದಾರೆ.

ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಪಿ ಯೋಗೇಶ್ವರ್, ಬೆಂಗಳೂರು ಗ್ರಾಮಾಂತರಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ. ಪಕ್ಷದಲ್ಲಿ ಸಾಕಷ್ಟು ಪ್ರಬಲ ನಾಯಕರಿದ್ದಾರೆ. ಅಶ್ವಥ್ ನಾರಾಯಣ್ ಡಿಸಿಎಂ ಆಗಿದ್ದವರು, ಉಸ್ತುವಾರಿ ಸಚಿವರಾಗಿದ್ದರು. ಇನ್ನು ಆರ್ ಅಶೋಕ್ ವಿರೋಧ ಪಕ್ಷದ ನಾಯಕರು ಸ್ಪರ್ಧಿಸಲು ಸಮರ್ಥರಿದ್ದಾರೆ. ಅವರೂ ಸಹ ಬೆಂಗಳೂರು ಗ್ರಾಮಾಂತರಿಂದ ಸ್ಪರ್ಧೆ ಮಾಡಬಹುದು ಎಂದು ಅಚ್ಚರಿಕೆ ಹೇಳಿಕೆ ನೀಡಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಯಾರಿಗೆಲ್ಲ ಟಿಕೆಟ್? ಸಂಭಾವ್ಯ ಅಭ್ಯರ್ಥಿಗಳ ವಿವರ ಇಲ್ಲಿದೆ

ಇನ್ನು ಇದೇ ವೇಳೆ ಕುಮಾರಸ್ವಾಮಿ ಜೊತೆಗಿನ ಸಭೆ ಬಗ್ಗೆ ಪ್ರತಿಕ್ರಿಯಿಸಿರುವ ಯೋಗೇಶ್ವರ್, ನಿನ್ನೆ(ಮಾರ್ಚ್ 05) ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಆಗಿದೆ. ಎರಡು ದಿನಗಳಲ್ಲಿ ಅಭ್ಯರ್ಥಿ ಯಾರು ಎನ್ನುವುದು ಗೊತ್ತಾಗಲಿದೆ. ನಾನು ಮಂಜುನಾಥ್ ಅವರನ್ನು ಒಪ್ಪಿಸುವ ಕೆಲಸ ಮಾಡಿದ್ದು. ಅಂತಿಮವಾಗಿ ಪಕ್ಷ ತೀರ್ಮಾನ ತೆಗೆದುಕೊಳ್ಳಬೇಕು. ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ನಾನು ರಾಜ್ಯ ರಾಜಕಾರಣದಲ್ಲಿ ಇರಬೇಕು ಎಂದುಕೊಂಡಿದ್ದೇನೆ. ಪಕ್ಷದ ನಾಯಕರು ಏನು ತೀರ್ಮಾನ ಮಾಡುತ್ತಾರೆ ನೋಡೊಣ ಎಂದು ಹೇಳಿದರು. ಈ ಮೂಲಕ ಯೋಗೇಶ್ವರ್​ ಪರೋಕ್ಷವಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಲು ಇಷ್ಟವಿಲ್ಲ ಎನ್ನುವ ಅರ್ಥದಲ್ಲಿ ಹೇಳಿದರು.

ಕುಮಾರಸ್ವಾಮಿ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಭೆ ನಡೆದಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದಾರೆ. ಯಾರನ್ನು ಕಣಕ್ಕಿಳಿಸಿದರೆ ಡಿಕೆ ಸುರೇಶ್ ಅವರನ್ನು ಸೋಲಿಸಬಹುದು ಎನ್ನುವುದನ್ನು ಲೆಕ್ಕಾಚಾರ ಹಾಕಿದ್ದಾರೆ. ಮೊದಲಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಯೋಗೇಶ್ವರ್ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿ ಇತ್ತು. ಈ ಹಿನ್ನೆಲೆಯಲ್ಲಿ ಅವರು ದೇವೇಗೌಡ, ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಆದ್ರೆ, ಇದೀಗ ಡಿಕೆ ಸುರೇಶ್ ಎದುರು ಡಾ.ಸಿಎನ್ ಮಂಜುನಾಥ್ ಅವರನ್ನೇ ಕಣಕ್ಕಿಳಿಸದರೆ ಸೂಕ್ತ. ಪ್ರಭಾವಿ ಸುರೇಶ್​ಗೆ ಮಂಜನಾಥ್​ ಅವರೇ ಪೈಪೋಟಿ ನೀಡಲಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿರುವ ಹೆಸರು ಹಾಗೂ ಜಾತಿವಾರು ಮತಗಳ ಆಧಾರದ ಮೇಲೆ ಮಂಜುನಾಥ್​ ಸೂಕ್ತ ಅಭ್ಯರ್ಥಿ ಎಂದು  ಲೆಕ್ಕಾಚಾರ ಹಾಕಿದ್ದಾರೆ.

ಆದ್ರೆ, ಬಿಜೆಪಿ ಹೈಕಮಾಂಡ್​ ಹಾಗೂ ಮಂಜುನಾಥ್ ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎನ್ನುವುದೇ ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Wed, 6 March 24