ಭಾರತಕ್ಕೆ ಬಾಂಬ್ ಹಾಕುವವರು ಸಿದ್ದರಾಮಯ್ಯಗೆ ಬಹಳ ಬೇಕಾದವರು: ಸಿ.ಟಿ.ರವಿ

| Updated By: Rakesh Nayak Manchi

Updated on: Jun 05, 2022 | 5:44 PM

ಭಾರತಕ್ಕೆ ಬಾಂಬ್ ಹಾಕುವುದನ್ನು ಹೆಡ್ಗೆವಾರ್ ಕಲಿಸಿಕೊಟ್ಟಿಲ್ಲ. ಭಾರತಕ್ಕೆ ಬಾಂಬ್ ಹಾಕುವವರು ಸಿದ್ದರಾಮಯ್ಯ ಅವರಿಗೆ ಬಹಳ ಬೇಕಾದವರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ಭಾರತಕ್ಕೆ ಬಾಂಬ್ ಹಾಕುವವರು ಸಿದ್ದರಾಮಯ್ಯಗೆ ಬಹಳ ಬೇಕಾದವರು: ಸಿ.ಟಿ.ರವಿ
ಸಿಟಿ ರವಿ ಮತ್ತು ಸಿದ್ದರಾಮಯ್ಯ
Follow us on

ಚಿಕ್ಕಮಗಳೂರು: ಭಾರತ್ ಮಾತಾ ಕಿ ಜೈ ಅನ್ನೋ ಶಿಕ್ಷಣವನ್ನು ಆರ್​ಎಸ್​ಎಸ್ (RSS) ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ (Keshav Baliram Hedgewar) ಕಲಿಸಿದ್ದರು. ಆದರೆ ಭಾರತಕ್ಕೆ ಬಾಂಬ್ ಹಾಕುವುದನ್ನು ಕಲಿಸಿಕೊಟ್ಟಿಲ್ಲ. ಭಾರತಕ್ಕೆ ಬಾಂಬ್ ಹಾಕುವವರು ಸಿದ್ದರಾಮಯ್ಯ ಅವರಿಗೆ ಬಹಳ ಬೇಕಾದವರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಹೇಳಿದ್ದಾರೆ. ಪಠ್ಯದಲ್ಲಿ ಹೆಡ್ಗೆವಾರ್ ಅವರ ಭಾಷಣವನ್ನು ಸೇರ್ಪಡೆ ಮಾಡಿದ ಬಗ್ಗೆ ಸಿದ್ದರಾಮಯ್ಯ ಅವರು ಟೀಕಿಸುತ್ತಿದ್ದಾರೆ. ಈ ಬಗ್ಗೆ ತಿರುಗೇಟು ನೀಡಿದ ಸಿ.ಟಿ.ರವಿ, ಹೆಡ್ಗೆವಾರ್ ಕಂಡರೆ ಸಿದ್ದರಾಮಯ್ಯ (Siddaramaiah)ನವರಿಗೆ ಏಕೆ ಸಂಕಟ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿ ಸರ್ಕಾರಕ್ಕೆ ಕಾಶ್ಮೀರವನ್ನು ಸಂಭಾಳಿಸಲು ಆಗುತ್ತಿಲ್ಲ, ಕೆಟ್ಟ ರಾಜಕೀಯ ಮಾಡುವುದಷ್ಟೇ ಅವರಿಗೆ ಗೊತ್ತು: ಕೇಜ್ರಿವಾಲ್

ಬಿಜೆಪಿ ಕೋಮು ನಶೆ ಏರಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ಭಾರತ್ ಮಾತಾ ಕೀ ಜೈ ಅಂದರೆ ಸಿದ್ದರಾಮಯ್ಯ ಅವರಿಗೆ ಉರಿ ಹತ್ತುತ್ತೆ. ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಭಾಷಣ ಇರಬೇಕೋ, ಬೇಡ್ವೋ ಅನ್ನೋದನ್ನ ಕೇಳೋಕೆ ಇವರ್ಯಾರು? ಪಠ್ಯಪುಸ್ತಕ ಪರಿಷ್ಕರಣ ಸಮಿತಿ ತೀರ್ಮಾನ ಮಾಡಿದೆ, ಸರ್ಕಾರ ಒಪ್ಪಿದೆ. ಮಧ್ಯದಲ್ಲಿ ನಂದು ಎಲ್ಲಿಡಲಿ ಅಂತಾ ಕೇಳೋಕೆ ಇವರ್ಯಾರು? ಇವರು ಹೇಳಿದ ಹಾಗೆ ಕೇಳೋಕೆ ಆಗುತ್ತಾ? ಎಂದು ಪ್ರಶ್ನಿಸಿದರು.

ಅಂಬೇಡ್ಕರ್ ಬಗ್ಗೆ ನಮಗಿರುವ ಅಭಿಮಾನಕ್ಕೆ ಇವರ ಸರ್ಟಿಫಿಕೇಟ್ ಬೇಕಾಗಿಲ್ಲ. ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಭೀಮ್ ಆಪ್ ತಂದಿದ್ದಾರೆ. ಇದೇ ಚಡ್ಡಿ, ಸಂಘಿ ನರೇಂದ್ರ ಮೋದಿಯವರೇ ಅಂಬೇಡ್ಕರ್ ಹುಟ್ಟೂರನ್ನು ಅಭಿವೃದ್ಧಿ ಪಡಿಸಿದ್ದು. ಅನಕ್ಷರಸ್ಥ ವ್ಯಕ್ತಿಯನ್ನು ಅಂಬೇಡ್ಕರ್ ಎದುರು ನಿಲ್ಲಿಸಿ ಸೋಲಿಸಿದ್ದು ಕಾಂಗ್ರೆಸ್. ಎರಡು ಬಾರಿ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತು. ಜವಾಹರ್​ಲಾಲ್ ನೆಹರೂ ಅವರಿಗೆ ಅವರೇ ಭಾರತರತ್ನ ಕೊಟ್ಟುಕೊಂಡರು. ಆದರೆ ಅಂಬೇಡ್ಕರ್ ಅವರಿಗೆ ಭಾರತರತ್ನವನ್ನು ಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಉತ್ತರ ಪ್ರದೇಶದ ಬುಲ್ಡೋಜರ್​​ ಎಲ್ಲವನ್ನೂ ಸರಿ ಮಾಡುತ್ತದೆ: ಕೆಸಿಆರ್​​​ಗೆ ತೆಲಂಗಾಣ ಬಿಜೆಪಿ ಮುಖ್ಯಸ್ಥನ ಬೆದರಿಕೆ

ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಡುವಂತೆ ಶಿಫಾರಸ್ಸು ಮಾಡಿದ್ದು ಸಿದ್ದರಾಮಯ್ಯನೂ ಅಲ್ಲ, ಕಾಂಗ್ರೆಸ್ ಪಾರ್ಟಿಯೂ ಅಲ್ಲ. ಶಿಫಾರಸ್ಸು ಮಾಡಿದ್ದು ಅಟಲ್ ಬಿಹಾರಿ ವಾಜಪೇಯಿ. ಹೆಜ್ಜೆಹೆಜ್ಜೆಗೂ ಕಾಂಗ್ರೆಸ್ ಪಾರ್ಟಿ ಅಂಬೇಡ್ಕರ್ ಅವರನ್ನು ತುಳಿಯುತ್ತಲೇ ಬಂತು.
ಇಂಥವರು ನಮಗೆ ಅಂಬೇಡ್ಕರ್ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ