AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ ಸಮ: ಪರೋಕ್ಷವಾಗಿ ಸಿದ್ದರಾಮಯ್ಯರನ್ನು ಹೆಣಕ್ಕೆ ಹೋಲಿಸಿದ ಸಿ.ಟಿ.ರವಿ

ಕೇಸರಿ ಕಂಡರೆ ಆಗದ ಮಾಜಿ ಸಿಎಂ ಒಬ್ಬರು ನಾನು ಹಿಂದೂ ಅಂತಾರೆ. ಆದರೆ ಹಿಂದುತ್ವವಾದಿಯಲ್ಲ ಎಂದು ಹೇಳುತ್ತಾರೆ. ಹಿಂದೂ ಅಂದ್ರೆ ದೇಹ, ಹಿಂದುತ್ವ ಅನ್ನೋದು ಜೀವ. ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ ಸಮ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ ಸಮ: ಪರೋಕ್ಷವಾಗಿ ಸಿದ್ದರಾಮಯ್ಯರನ್ನು ಹೆಣಕ್ಕೆ ಹೋಲಿಸಿದ ಸಿ.ಟಿ.ರವಿ
ಸಿ.ಟಿ.ರವಿ, ಸಿದ್ದರಾಮಯ್ಯ
ಗಂಗಾಧರ​ ಬ. ಸಾಬೋಜಿ
|

Updated on:Feb 20, 2023 | 4:38 PM

Share

ಉಡುಪಿ: ಕೇಸರಿ ಕಂಡರೆ ಆಗದ ಮಾಜಿ ಸಿಎಂ ಒಬ್ಬರು ನಾನು ಹಿಂದೂ ಅಂತಾರೆ. ಆದರೆ ಹಿಂದುತ್ವವಾದಿಯಲ್ಲ ಎಂದು ಹೇಳುತ್ತಾರೆ. ಹಿಂದೂ ಅಂದ್ರೆ ದೇಹ, ಹಿಂದುತ್ವ ಅನ್ನೋದು ಜೀವ. ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ (Dead body) ಸಮ ಎಂದು ಮಾಜಿ ಸಿಎಂ ಸಿದ್ಧರಾಮಯ್ಯರನ್ನು ಪರೋಕ್ಷವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೆಣಕ್ಕೆ ಹೋಲಿಸಿದ್ದಾರೆ. ಜಿಲ್ಲೆಯ ಎಂಜಿಎಂ ಮೈದಾನದಲ್ಲಿ ನಡೆಯುತ್ತಿರುವ ಜಿಲ್ಲಾ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಜೀವ ಇಲ್ಲದ ಕಾಂಗ್ರೆಸ್ ಪಕ್ಷವನ್ನು ಬಹಳ ಹೊತ್ತು ಇಟ್ಟುಕೊಳ್ಳಬಾರದು. ಹಾಗಾಗಿ ವಿಧಿವಿಧಾನ ಮಾಡಿ ಸ್ಮಶಾನಕ್ಕೆ ‌ತೆಗೆದುಕೊಂಡು ಹೋಗಬೇಕು. ಅಂದರೆ ಕಾಂಗ್ರೆಸ್​ನ್ನ ರಾಜಕೀಯವಾಗಿ ಸ್ಮಶಾನಕ್ಕೆ ಕಳುಹಿಸಬೇಕು. ಹೂಳುವವರು ಹೂಳಲಿ, ಸುಡೋರು ಸುಡಲಿ, ಹೂ ಹಾಕಿ ಸ್ಮಶಾನಕ್ಕೆ ಕಳುಹಿಸಿ. ಪಿಂಡ ಹಾಕುವ ಜವಾಬ್ದಾರಿ ‌ಇಲ್ಲ, ಆ ದಂಡ ಪಿಂಡಗಳು ಇದ್ದಾಗ ಸರಿಯಾಗಿ ತಿಂದಿದಾರೆ ಎಂದು ತೀರ್ವ ವಾಗ್ದಾಳಿ ಮಾಡಿದರು.

ಬಿಜೆಪಿಯ ಒಬ್ಬೊಬ್ಬ ಕಾರ್ಯಕರ್ತನೂ ಪಕ್ಷದ ಮಾಲೀಕ

ಕಲ್ಲಡ್ಕ ಶಾಲೆಯ ಅನ್ನ ಕಿತ್ತದ್ದು ಕಾಂಗ್ರೆಸ್​ನ ನೀತಿ. ದೇಶ ದ್ರೋಹಿ ಪಿಎಫ್ಐನವರನ್ನು ಜೈಲಿನಿಂದ ಬಿಡುಗಡೆ ಮಾಡಿದ್ದು ಕಾಂಗ್ರೆಸ್ ನೀತಿ. ನೀತಿಯೇ ಇಲ್ಲದವರು ಜೆಡಿಎಸ್​ನವರು, ಅವರದ್ದು‌ ಇವತ್ತು ಒಂದು, ನಾಳೆ ಒಂದು ನೀತಿ. ಆದರೆ ಬಿಜೆಪಿಯದ್ದು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ನೀತಿ. ಡಿಎನ್ಎ ಮೂಲಕ ಲೀಡರ್ ಶಿಪ್ ಪಡೆಯುವ ದೌರ್ಬಾಗ್ಯ ನಮ್ಮ ಪಕ್ಷಕ್ಕಿಲ್ಲ. ಇಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ನಾಯಕನೇ, ನೇತಾರನೇ ಆಗಿದ್ದಾರೆ. ಬಿಜೆಪಿಯ ಒಬ್ಬೊಬ್ಬ ಕಾರ್ಯಕರ್ತನೂ ಪಕ್ಷದ ಮಾಲೀಕ ಎಂದು ಹೇಳಿದರು.

ಇದನ್ನೂ ಓದಿ: ಇಂದು ಕೃಷ್ಣ ಮಠಕ್ಕೆ ಭೇಟಿ ನೀಡಿ ನನ್ನ ಜೀವನ ಪಾವನವಾಗಿದೆ ಎಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಕಾಂಗ್ರೆಸ್ ನಾಯಕರು ಮತ್ತೆ ನಿರುದ್ಯೋಗಿಗಳಾಗುತ್ತಾರೆ: ಕಟೀಲು 

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು ಮಾತನಾಡಿ, ಕಾಂಗ್ರೆಸ್ ನಾಯಕರು ಮತ್ತೆ ನಿರುದ್ಯೋಗಿಗಳಾಗುತ್ತಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್​ನಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಸಿಎಂ ಕುರ್ಚಿ ಕನಸು ಕಾಣುವ ಕಾಂಗ್ರೆಸ್ಸಿಗರು ನಿರುದ್ಯೋಗಿಗಳಾಗ್ತಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ: Shivaji Maharaj Jayanti: ಕೆಲವರು ಟಿಪ್ಪುವಿಗೆ ಹುಟ್ಟಿದಂತೆ ಮಾತನಾಡುತ್ತಾರೆ; ಬಸನಗೌಡ ಪಾಟೀಲ್ ಯತ್ನಾಳ್

ಪಕ್ಷಗಳ ನಡುವಿನ ವ್ಯತ್ಯಾಸ ಹೇಳಿದ ನಡ್ಡಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಾತನಾಡಿ, ಕಾಂಗ್ರಸ್, ಜೆಡಿಎಸ್ ಶಿವಸೇನೆ ಸೇರಿದಂತೆ ಇತರ ಪಕ್ಷ ಪರಿವಾರದ ಪಾರ್ಟಿಗಳಾಗಿವೆ. ಕಾಂಗ್ರೆಸ್​ನಲ್ಲಿ ತಾಯಿ, ಮಗ, ಮಗಳು ಮತ್ತು ಅಳಿಯಂದೇ ಪಕ್ಷವಾಗಿದೆ. ಜೆಡಿಎಸ್ ಕೂಡ ಕೇವಲ ಒಂದು ಕುಟುಂಬದ ಪಾರ್ಟಿಯಾಗಿದೆ. ಆದರೆ ಬಿಜೆಪಿಗೆ ಪಾರ್ಟಿಯೇ ಪರಿವಾರವಾಗಿದೆ. ಇದು ನಮ್ಮ ಮತ್ತು ಬೇರೆ ಪಕ್ಷಗಳಿಗಿರುವ ವ್ಯತ್ಯಾಸ ಎಂದು ಜೆ.ಪಿ.ನಡ್ಡಾ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:38 pm, Mon, 20 February 23

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​