ಶಾರೀಕ್‌ಗಿಂತಲೂ ಸಿಟಿ ರವಿ ರಾಜ್ಯದ ದೊಡ್ಡ ಮಾಸ್ಟರ್‌ಮೈಂಡ್ ಉಗ್ರ: ಕಿಸಾನ್ ಕಾಂಗ್ರೆಸ್ ಅಧ್ಯಕ್ಷ

ಮಂಗಳೂರಿನ ಕುಕ್ಕರ್​ ಸ್ಫೋಟ ಉಗ್ರ ಶಾರೀಕ್‌ಗಿಂತಲೂ ಸಿಟಿ ರವಿ ಒಂದು ಕೈ ಮೇಲೆ ಎಂದು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

ಶಾರೀಕ್‌ಗಿಂತಲೂ ಸಿಟಿ ರವಿ ರಾಜ್ಯದ ದೊಡ್ಡ ಮಾಸ್ಟರ್‌ಮೈಂಡ್ ಉಗ್ರ: ಕಿಸಾನ್ ಕಾಂಗ್ರೆಸ್ ಅಧ್ಯಕ್ಷ
ಸಿ.ಟಿ ರವಿ ಮತ್ತು ಸಚಿನ್ ಮಿಗಾ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 16, 2022 | 7:38 PM

ಬೆಂಗಳೂರು: ಸಿಟಿ ರವಿ (CT Ravi) ಈ ರಾಜ್ಯದ ದೊಡ್ಡ ಮಾಸ್ಟರ್ ಮೈಂಡ್ ಉಗ್ರ( Terrorist) . ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಉಗ್ರ (Mangaluru Cooker Bomb Blast ) ಶಾರೀಕ್‌ಗಿಂತಲೂ ಸಿಟಿ ರವಿ ಒಂದು ಕೈ ಮೇಲೆ ಎಂದು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ (Sachin Miga) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮಾಜಿ, ಹಾಲಿ ಸಿಎಂಗಳ ನಡುವೆ ಮುನಿಸು ವಿಚಾರ: ಯಡಿಯೂರಪ್ಪ ಮುಕ್ತ ಬಿಜೆಪಿ ಎಂದು ಕಾಂಗ್ರೆಸ್ ವ್ಯಂಗ್ಯ

ಚಿಕ್ಕಮಗಳೂರಿನಲ್ಲಿ ರಾತ್ರೋರಾತ್ರಿ ದತ್ತಪೀಠದ ಗೋರಿಗಳನ್ನು ನಾಶಮಾಡಿರುವ ಉದಾಹರಣೆಗಳು ಇನ್ನೂ ನಮ್ಮ ಕಣ್ಣಮುಂದಿವೆ. ಇವರ ರಾಜಕೀಯದಿಂದ ಆರಂಭಿಸಿ ರಾಜ್ಯಾದ್ಯಂತ ಶಾಂತಿ ಕದಡಿ, ಭಯದ ವಾತಾವರಣ ನಿರ್ಮಾಣ ಮಾಡಿರುವ ಸಿಟಿ ರವಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ ಎಂದು ಕಿಡಿ ಕಾರಿದರು.

ಸಿಟಿ ರವಿ ಅವರು ಬಿಜೆಪಿ ಸಮಾವೇಶದಲ್ಲಿ ಹಿಂದೂ ಕೊಲೆ ಆಗುತ್ತೆ ಎಂದು ಬಹಿರಂಗವಾಗಿ ಹೇಳಿದ್ದರು. ಈ ಭಾಷಣದ ಮೂಲಕ ಹಿಂದೂಗಳು ತಮ್ಮ ರಕ್ಷಣೆಯನ್ನು ಮಾಡಿಕೊಳ್ಳಲು ಆಗಲ್ಲ ಎಂಬ ರೀತಿಯಲ್ಲಿ ಹೇಳಿದ್ದಾರೆ. ಇದು ಅವರು ಹಿಂದೂ ಧರ್ಮಕ್ಕೆ ಮಾಡಿರುವ ಅಪಮಾನ. ಅವರ ನಿಜ ಹಿಂದುತ್ವದ ಬಣ್ಣ ಇಲ್ಲಿ ಬಯಲಾಗುತ್ತದೆ. ಸಿಟಿ ರವಿ ಎಚ್ಚರಿಕೆಯಿಂದ ಪದಗಳನ್ನು ಬಳಕೆ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

ನಾವೂ ಹಿಂದೂಗಳು, ನಾವು ಹೇಡಿಗಳಲ್ಲ. ಕೈಗೆ ಬಳೆ ತೊಟ್ಟುಕೊಂಡಿಲ್ಲ. ಹಿಂದೂವಾಗಿ ಹುಟ್ಟಿದ ಮೇಲೆ ಸ್ವಾರ್ಥಕ್ಕೆ ಧರ್ಮ ಬಳಸುವ ನೀಚ ರಕ್ಷಣೆ ನೈಜ ಹಿಂದೂಗಳಿಗೆ ಬೇಕಾಗಿಲ್ಲ ಎಂದು ಬಿಜೆಪಿ ನಾಯಕರಿಗೆ ಸಚಿನ್ ಮಿಗಾ ಟಾಂಗ್ ಕೊಟ್ಟರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು