ಮಾತೃ ಭಾಷೆಯಲ್ಲಿ ಶಿಕ್ಷಣ ಒದಗಿಸುವುದು ತಪ್ಪಾ? ಎನ್​ಇಪಿ ರದ್ದತಿ ಕುರಿತ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಟಿ ರವಿ ಪ್ರಶ್ನೆ

NEP cancellation in Karnataka; ರಾಷ್ಟ್ರೀಯ ಶಿಕ್ಷಣ ನೀತಿ ಬೇಡ ಎನ್ನಲು ಯಾವುದೇ ರೀತಿ ಸೂಕ್ತ ಕಾರಣಗಳಿಲ್ಲದೇ ಹೊದರೂ, ಅದನ್ನು ತಿರಸ್ಕರಿಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರಿಗೆ ದೇಶಕ್ಕಿಂತ ರಾಜಕೀಯವೇ ಮುಖ್ಯ ಎಂದು ಇಲ್ಲಿ ತೋರಿಬರುತ್ತಿದೆ ಎಂದು ಬಿಜೆಪಿ ನಾಯಕ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಮಾತೃ ಭಾಷೆಯಲ್ಲಿ ಶಿಕ್ಷಣ ಒದಗಿಸುವುದು ತಪ್ಪಾ? ಎನ್​ಇಪಿ ರದ್ದತಿ ಕುರಿತ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಟಿ ರವಿ ಪ್ರಶ್ನೆ
ಸಿಟಿ ರವಿ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma

Updated on: Aug 15, 2023 | 5:43 PM

ಚಿಕ್ಕಮಗಳೂರು, ಆಗಸ್ಟ್ 15: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸಲಾಗುವುದು ಎಂಬ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಹೇಳಿಕೆಗೆ ಮಾಜಿ ಸಚಿವ, ಬಿಜೆಪಿ ನಾಯಕ ಸಿಟಿ ರವಿ (CT Ravi) ತಿರುಗೇಟು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ನಿಮ್ಮ (ಸಿದ್ದರಾಮಯ್ಯ) ದೃಷ್ಟಿಯಲ್ಲಿ ಶಿಕ್ಷಣ ಎಂದರೆ ಜಾತಿ ಆಧಾರದಲ್ಲಿ ಸಮಾಜವನ್ನು ಒಡೆಯುವಂತಹ ಮಾನಸಿಕತೆ ಹೊಂದಿರುವಂತದ್ದಾಗಿರಬೇಕು. ಮಾತೃಭಾಷೆಯಲ್ಲಿ ಶಿಕ್ಷಣ, ತಾಂತ್ರಿಕ ಕೌಶಲವುಳ್ಳ ಶಿಕ್ಷಣ ಒದಗಿಸುವುದು ತಪ್ಪಾ ಎಂದು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯು ನೈತಿಕ ಮೌಲ್ಯಗಳನ್ನು ಒಳಗೊಂಡಿದ್ದು, ಮೂರು ವರ್ಷಗಳ ಕಾಲ ಅಭಿಪ್ರಾಯ ಪಡೆದು ಅದರ ಪಠ್ಯಕ್ರಮವನ್ನು ರೂಪಿಸಲಾಗಿದೆ. ಈಗ ಎನ್​ಇಪಿ ಬೇಡ ಎನ್ನಲು ಯಾವುದೇ ರೀತಿ ಸೂಕ್ತ ಕಾರಣಗಳಿಲ್ಲ ಎಂದರು.

ಹೊಸ ಶಿಕ್ಷಣ ನೀತಿಯನ್ನು ಜಾರಿ ಮಾಡುವ ಮೊದಲು ಕಸ್ತೂರಿ ರಂಗನ್​​​ ಅವರ ನೇತೃತ್ವದಲ್ಲಿ ಸಾವಿರಾರು ಜನರ ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳಲಾಗಿತ್ತು. ಈ ಯೋಜನೆಯು ಯಾವುದೇ ರಾಜಕೀಯ ಉದ್ದೇಶಗಳನ್ನು ಹೊಂದಿರುವ ಯೋಜನೆಯಾಗಿರಲಿಲ್ಲ. ಬದಲಾಗಿ ಶಿಕ್ಷಣದ ಮೂಲಕ ದೇಶ ಕಟ್ಟುವ ಯೋಜನೆಯಾಗಿತ್ತು. ಈ ರೀತಿ ಉತ್ತಮ ಉದ್ದೇಶವನ್ನು ಹೊಂದಿರುವ ಯೋಜನೆಯನ್ನು ನಿಲ್ಲಿಸಿದ್ದಿರಿ. ನಿಮಗೆ ದೇಶಕ್ಕಿಂತ ರಾಜಕಾರಣವೇ ಮುಖ್ಯವಾ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?

ಸೋಮವಾರ ಕೆಪಿಸಿಸಿ ನೂತನ ಕಚೇರಿಯಲ್ಲಿ ನಡೆದ ಸರ್ವ ಸದಸ್ಯ ಸಭೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಮುಂದಿನ ಶೈಕ್ಷಣಿಕ ವರ್ಷದಿಂದ ಎನ್ಇಪಿ ರದ್ದುಗೊಳ್ಳಲಿದೆ. ಈ ಬಾರಿ ಸರ್ಕಾರ ರಚನೆಯಾಗುವ ಮೊದಲೇ ಶೈಕ್ಷಣಿಕ ವರ್ಷ ಪ್ರಾರಂಭವಾಗಿತ್ತು. ದಿಢೀರ್ ಬದಲಾವಣೆಯಿಂದ ಯಾವುದೇ ರೀತಿ ತೊಂದರೆಯನ್ನು ವಿದ್ಯಾರ್ಥಿಗಳು ಎದುರಿಸಬಾರದು ಎನ್ನುವ ಕಾರಣದಿಂದ ಈ ವರ್ಷ ಯಾವುದೇ ಬದಲಾವಣೆ ಕೈಗೊಂಡಿರಲಿಲ್ಲ. ಆದರೆ ಮುಂದಿನ ವರ್ಷದಿಂದ ಈ ಬದಲಾವಣೆ ಜಾರಿಗೊಳ್ಳಲಿದೆ ಎಂದು ಹೇಳಿದ್ದರು.

ಇದನ್ನೂ ಓದಿ; 2024-25ನೇ ಶೈಕ್ಷಣಿಕ ವರ್ಷದಿಂದ ಕರ್ನಾಟದಲ್ಲಿ ಎನ್​​ಇಪಿ ಇರಲ್ಲ; ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಶಿಕ್ಷಣ ನೀತಿ (NEP)

2021ರಲ್ಲಿ ಕರ್ನಾಟಕ ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳುವ ಮೂಲಕ ನೂತನ ಶಿಕ್ಷಣ ನೀತಿ ಅಳವಡಿಸಿಕೊಂಡ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. 1986ರ ರಾಷ್ಟ್ರೀಯ ಶಿಕ್ಷಣ ನೀತಿಯ ಬದಲಾಗಿ ರೂಪುಗೊಂಡ ಯೋಜನೆಯು ಇದಾಗಿತ್ತು. 2030ರ ವೇಳೆಗೆ ದೇಶದ ಶಿಕ್ಷಣ ನೀತಿಯನ್ನು ಉನ್ನತೀಕರಿಸುವ ಆಶಯವನ್ನು ಈ ಯೋಜನೆ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ