ಸಂಸ್ಕೃತಿ ಗೊತ್ತಿಲ್ಲದವರಿಗೆ ಕನ್ನಡ ಸಂಸ್ಕೃತಿ ಇಲಾಖೆ ನೀಡಿದ್ದಾರೆ: ಮೋದಿ ಬಗ್ಗೆ ತಂಗಡಗಿ ಹೇಳಿಕೆಗೆ ಸಿಟಿ ರವಿ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಮಾಜಿ ಸಚಿವ ಸಿಟಿ ರವಿ ಖಾರವಾಗಿ ತಿರುಗೇಟು ನೀಡಿದ್ದಾರೆ. ಅಂಥ ಹೇಳಿಕೆ ನೀಡಿರುವ ತಂಗಡಗಿ ಸಂಪುಟದಲ್ಲಿರಲು ಲಾಯಕ್ಕಿಲ್ಲ. ಅವರನ್ನು ಸಿಎಂ ಸಿದ್ದರಾಮಯ್ಯ ವಜಾಗೊಳಿಸಲಿ ಎಂದು ಆಗ್ರಹಿಸಿದ್ದಾರೆ.

ಸಂಸ್ಕೃತಿ ಗೊತ್ತಿಲ್ಲದವರಿಗೆ ಕನ್ನಡ ಸಂಸ್ಕೃತಿ ಇಲಾಖೆ ನೀಡಿದ್ದಾರೆ: ಮೋದಿ ಬಗ್ಗೆ ತಂಗಡಗಿ ಹೇಳಿಕೆಗೆ ಸಿಟಿ ರವಿ ತಿರುಗೇಟು
ಸಿಟಿ ರವಿ
Follow us
TV9 Web
| Updated By: Ganapathi Sharma

Updated on: Mar 25, 2024 | 2:48 PM

ಬೆಂಗಳೂರು, ಮಾರ್ಚ್​ 25: ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂಬ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ (Shivaraj Tangadagi) ಹೇಳಿಕೆಗೆ ಬಿಜೆಪಿ ನಾಯಕ ಸಿಟಿ ರವಿ (CT Ravi) ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ತಂಗಡಗಿಯನ್ನು ಸಂಪುಟದಿಂದ ಸಿಎಂ ಸಿದ್ದರಾಮಯ್ಯ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಂಸ್ಕೃತಿಯೇ ಗೊತ್ತಿಲ್ಲದವರಿಗೆ ಕನ್ನಡ ಸಂಸ್ಕೃತಿ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ. ಸಚಿವರ ಹೇಳಿಕೆ ಇದು ಕನ್ನಡ ಸಂಸ್ಕೃತಿ ಇಲಾಖೆಗೆ ಮಾಡಿದ ಅಪಚಾರ. ಅವರ ಹೇಳಿಕೆಗೆ ಪ್ರತಿಯಾಗಿ, ‘ಬಾರಪ್ಪ ನಿಮ್ಮಪ್ಪನಿಗೆ ಹುಟ್ಟಿದ್ದರೆ ಹೊಡಿ’ ಎಂದು ಹೇಳಬೇಕು ಅಂದುಕೊಂಡಿದ್ದೆ. ಆದರೆ, ತಂಗಡಗಿ ಮಟ್ಟಕ್ಕೆ ನಾವು ಇಳಿದು ಮಾತನಾಡಲು ಹೋಗಲ್ಲ. ಇಂಥವರನ್ನು ಸಂಪುಟದಲ್ಲಿ ಇಟ್ಟುಕೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.

ಕೊಪ್ಪಳದ ಕಾರಟಗಿಯಲ್ಲಿ ಮಾತನಾಡಿದ್ದ ತಂಗಡಗಿ, ಮೋದಿ ಸರ್ಕಾರ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿತ್ತು. ಆದರೆ, ಮೋದಿ ಸರ್ಕಾರ ಭರವಸೆ ಈಡೇರಿಸಿಲ್ಲ. ‘ಮೋದಿ ಮೋದಿ’ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದಿದ್ದರು.

ಮೋದಿ 10 ವರ್ಷಗಳ ಸಾಧನೆ ಬಿಜೆಪಿ ಪ್ರಚಂಡ ಗೆಲುವಿನ ಮೆಟ್ಟಿಲು: ವಿಜಯೇಂದ್ರ

ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಸಾಧನೆಗಳು ಬಿಜೆಪಿ ಪ್ರಚಂಡ ಗೆಲುವಿನ ಮೆಟ್ಟಿಲುಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿದ ಬಳಿಕ ಆ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವಿನ ಭರವಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು: ಸಚಿವ ಶಿವರಾಜ ತಂಗಡಗಿ

ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಟ್ಟು, ಬಡವರು, ರೈತರು, ಮಹಿಳೆಯರು, ಯುವಜನತೆ ಎಂಬ 4 ವರ್ಗಗಳ ಜನರನ್ನು ತಲುಪಿ ಮೋದಿ ಜೀ ಸಾಧನೆಗಳನ್ನು ಎಲ್ಲೆಡೆ ತಲುಪಿಸುವ ಮೂಲಕ ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಲೋಕಸಮರದಲ್ಲಿ 28 ಸ್ಥಾನಗಳಲ್ಲಿಯೂ ವಿಜಯ ಸಾಧಿಸುವ ಮೂಲಕ ಮತ್ತೊಮ್ಮೆ ರುಜುವಾತು ಮಾಡುವ ದೃಷ್ಟಿಯಿಂದ ವಿರಮಿಸದೇ ಶ್ರಮಿಸಬೇಕೆಂಬ ಕರೆ ನೀಡಲಾಯಿತು ಎಂದು ಅವರು ಎಕ್ಸ್​​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ