Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದಕ್ಕೆ ದೇವೇಗೌಡ ಖಂಡನೆ; ಸಿಟಿ ರವಿ ಹೇಳಿದ್ದಿಷ್ಟು

ಹೆಚ್​ಡಿ ಕುಮಾರಸ್ವಾಮಿ(HD Kumaraswamy ) ಅವರು ಮಂಡ್ಯ ತಾಲೂಕಿನ ಕೆರಗೋಡ ಗ್ರಾಮದಲ್ಲಿ ಹನುಮ ಧ್ವಜ ತೆರವು ಗಲಾಟೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ನಡೆಸಿದ್ದ ವೇಳೆ ಕೇಸರಿ ಶಾಲು (saffron shawl) ಧರಿಸಿದ್ದರು. ಈ ಹಿನ್ನಲೆ ಸ್ವತಃ ಹೆಚ್​ಡಿ ದೇವೇಗೌಡರೇ (HD Devegowda) ಖಂಡಿಸಿದ್ದರು.ಈ ಕುರಿತು ಮಾತನಾಡಿದ ಸಿ.ಟಿ ರವಿ(CT Ravi) ‘ಕೇಸರಿ ಬಗ್ಗೆ ನಮಗೇನು ಸಂಕೋಚ ಇಲ್ಲ, ನಮಗೆ ಹೆಮ್ಮೆ ಇದೆ. ಅದಕ್ಕೆ ಸಾವಿರ ವರ್ಷದ ಪರಂಪರೆ ಇದೆ ಎಂದಿದ್ದಾರೆ.

Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 03, 2024 | 2:29 PM

ಹಾಸನ, ಫೆ.03: ಮಂಡ್ಯ ತಾಲೂಕಿನ ಕೆರಗೋಡ ಗ್ರಾಮದಲ್ಲಿ ಹನುಮ ಧ್ವಜ ತೆರವು ಗಲಾಟೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಹೆಚ್​ಡಿ ಕುಮಾರಸ್ವಾಮಿ(HD Kumaraswamy ) ಅವರು ಕೇಸರಿ ಶಾಲು (saffron shawl) ಧರಿಸಿದ್ದ ಹಿನ್ನಲೆ ಸ್ವತಃ ಹೆಚ್​ಡಿ ದೇವೇಗೌಡ (HD Devegowda) ಖಂಡಿಸಿದ್ದರು. ಈ ಕುರಿತು ಹಾಸನದಲ್ಲಿ ಮಾಜಿ ಶಾಸಕ ಸಿ.ಟಿ ರವಿ(CT Ravi) ಮಾತನಾಡಿ ‘ಅವರ ಪಕ್ಷದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೇಸರಿ ಕೇವಲ ಬಣ್ಣ ಮಾತ್ರ ಅಲ್ಲ, ಅದಕ್ಕೆ ಸಾವಿರ ವರ್ಷದ ಪರಂಪರೆ ಇದೆ ಎಂದಿದ್ದಾರೆ.

ಕೇಸರಿ ಬಗ್ಗೆ ನಮಗೇನು ಸಂಕೋಚ ಇಲ್ಲ, ನಮಗೆ ಹೆಮ್ಮೆ ಇದೆ

ಇನ್ನು ಅರ್ಜುನನ ಧ್ವಜದ ಬಣ್ಣವೂ ಕೇಸರಿ, ಋಷಿಮುನಿಗಳು ತ್ಯಾಗದ ಸಂಕೇತವಾಗಿ ಬಳಸಿದರೆ, ಕ್ಷತ್ರಿಯರು ಕೇಸರಿಯನ್ನು ಶೌರ್ಯದ ಸಂಕೇತವಾಗಿ ಬಳಸಿದ್ದರು. ಕೇಸರಿ ಬಗ್ಗೆ ನಮಗೇನು ಸಂಕೋಚ ಇಲ್ಲ, ನಮಗೆ ಹೆಮ್ಮೆ ಇದೆ. ಕೇಸರಿ ಶಾಲು ಹಾಕಿದ್ದಕ್ಕೆ ಕುಮಾರಸ್ವಾಮಿ ಸಂಕೋಚ ಪಡಬೇಕಿಲ್ಲ. ಅದು ಅಲ್ಲದೇ ಅಂದು ಕೇವಲ ರಾಜಕೀಯ ಪಕ್ಷದ ನಾಯಕರು ಭಾಗವಹಿಸಿರಲಿಲ್ಲ, ಹಿಂದೂ ಸಂಘಟನೆಗಳು ಕರೆಕೊಟ್ಟಿದ್ದ ಪಾದಯಾತ್ರೆಯಾಗಿತ್ತು ಎಂದು ಹೇಳಿದರು.

ಇದನ್ನೂ ಓದಿ:ನಾನು ಕೇಸರಿ ಶಾಲು ಹಾಕುವುದಿಲ್ಲ, ಕುಮಾರಸ್ವಾಮಿ ಹಾಕಿದ್ದನ್ನು ಪರೋಕ್ಷವಾಗಿ ಖಂಡಿಸಿದ ದೇವೇಗೌಡ

ಕೇಸರಿ ಶಾಲು ಹಾಕುವುದಿಲ್ಲ ಎಂದಿದ್ದ ಹೆಚ್​ಡಿ ದೇವೇಗೌಡ

ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದ ಕುರಿತು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ದೇವೇಗೌಡ, ‘ ಅವರು ಕೇಸರಿ ಶಾಲು ಹಾಕಬಾರದಿತ್ತು, ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದು ಹೇಳಿದ್ದರು. ಈ ಮೂಲಕ ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವುದನ್ನು ಪರೋಕ್ಷವಾಗಿ ಖಂಡಿಸಿದ್ದರು. ಅಷ್ಟೆ ಅಲ್ಲ, ಪ್ರಧಾನಿ ಜೊತೆಗೆ ಹೋದಾಗಲೂ ಕೂಡ ನನ್ನ ಪಕ್ಷದ ಶಾಲು ಹಾಕುತ್ತೇನೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:21 pm, Sat, 3 February 24

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ